ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾಽಕಾರಿ ಸಂಗಪ್ಪ ಎಂ. ಜಾಗೃತಿ ಪೋಸ್ಟರ ಬಿಡುಗಡೆಗೊಳಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಖಾ ಎಂ, ಜಿ.ಪಂ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ ಉಕ್ಕಲಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ ಇದ್ದರು.
ಬಾಗಲಕೋಟೆ: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳ ತಯಾರಿಕೆ, ಮಾರಾಟ ಹಾಗೂ ವಿಸರ್ಜನೆ ಮಾಡುತ್ತಿರುವುದು ಕಂಡುಬAದಲ್ಲಿ ನಿರ್ದಾಕ್ಷಣ್ಯವಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಽಕಾರಿ ಸಂಗಪ್ಪ ಎಂ. ಅಽಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿಯು ಗಣೇಶ ಹಬ್ಬವು ಸಮೀಪಿಸುತ್ತಿದ್ದು, ಗಣೇಶೋತ್ಸವ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾರ್ವಜನಿಕರು ಮಣ್ಣನಿಂದ ತಯಾರಿಸಿದ ಹಾಗೂ ಪರಿಸರ ಸ್ನೇಹಿ ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದರು.
ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಪಿಒಪಿ ಗಣೇಶ ವಿಗ್ರಹಗಳ ಮಾರಟ ನಡೆಯದಂತೆ ಸಂಬAಽಸಿದ ನಗರ ಸ್ಥಳೀಯ ಸಂಸ್ಥೆಯ ಅಽಕಾರಿಗಳು ಹಾಗೂ ಗ್ರಾಮ ಮಟ್ಟದ ಅಽಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು. ನಿಯಮ ಉಲ್ಲಂಘಿಸಿ ಪಿಒಪಿ ವಿಗ್ರಹಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬAದಲ್ಲಿ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಗಣೇಶ ವಿಗ್ರಹಗಳ ವಿಸರ್ಜನೆ ಸಂದರ್ಭದಲ್ಲಿ ನದಿ, ಕೆರೆ ಸೇರಿದಂತೆ ಜಲಮೂಲಗಳು ಕಲುಷಿತವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಽತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪ್ರತಿ ವರ್ಷ ಬಾಗಲಕೋಟೆ ನಗರದ ಆಯ್ದ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಸಂಚಾರಿ ತೊಟ್ಟಿ ವ್ಯವಸ್ಥೆ ಮಾಡಲು ತಿಳಿಸಿದ ಅವರು ಗಣೇಶೋತ್ಸವ ಮಂಡಳಿಗಳು ಸಂಬAಽಸಿದ ಇಲಾಖೆಯಿಂದ ಅಗತ್ಯ ಅನುಮತಿ ಪಡೆದು ಹಬ್ಬ ಆಚರಿಸಬೇಕು ಎಂದರು.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು, ಸ್ವಚ್ಚತೆಗೆ ಆದ್ಯತೆ ನೀಡುವುದು ಹಾಗೂ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು. ಗಣೇಶೋತ್ಸವ ಪರಿಸರ ಸ್ನೇಹಿಯಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು. ಗಣೇಶೋತ್ಸವ ಮಂಡಳಿಗಳು ವಿವಿಧ ಇಲಾಖೆ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಽಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಖಾ ಎಂ, ಜಿ.ಪಂ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ ಉಕ್ಕಲಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ಜಿಲ್ಲಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಅಽಕಾರಿ ಲೋಕೇಶ ಎಚ್.ಕೆ, ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ.ಕುಸುಮಾ ಮಾಗಿ, ಜಿ.ಪಂ ಸಹಾಯಕ ಯೋಜನಾಽಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.