ಲೋಕಾಪುರ ಪಟ್ಟಣದ ಲೋಕೇಶ್ವರ ಶಿಕ್ಷಣ ಸಂಸ್ಥೆಯ 2026-27ನೇ ಸಾಲಿನ ಸರಸ್ವತಿ ಪೂಜಾ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ರಾಚಯ್ಯ ಚೌಕಿಮಠ, ಭೀಮನಗೌಡ ಪಾಟೀಲ, ಡಿ.ಎಂ.ತುಬಾಕಿ, ಎಸ್.ಬಿ.ಕೃಷ್ಣಗೌಡರ, ಎಸ್.ಎಫ.ನಾಯಕ ಇತರರಿದ್ದರು.
- ವ್ಯವಸ್ಥಾಪಕ ರಾಚಯ್ಯ ಚೌಕಿಮಠ ಅಭಿಮತ
- ಸರಸ್ವತಿ ಪೂಜೆ-ಪ್ರತಿಭಾ ಪುರಸ್ಕಾರ ಸಮಾರಂಭ
ಲೋಕಾಪುರ : ವಿದ್ಯಾರ್ಥಿ ಜೀವನವು ಭವಿಷ್ಯದ ಭದ್ರ ಬುನಾದಿಯಾಗಿದೆ, ನಿರಂತರ ಪರಿಶ್ರಮ ಮತ್ತು ಸಕಾರಾತ್ಮಕ ಚಿಂತನೆ ನಿಮ್ಮನ್ನು ಯಶಸ್ಸಿನ ಶಿಖಿರಕ್ಕೆ ಕೊಂಡ್ಯುಯುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಕಚೇರಿ ವ್ಯವಸ್ಥಾಪಕ ರಾಚಯ್ಯ ಚೌಕಿಮಠ ಹೇಳಿದರು.
ಪಟ್ಟಣದಲ್ಲಿ ಈಚೆಗೆ ಲೋಕೇಶ್ವರ ಶಿಕ್ಷಣ ಸಮಿತಿಯ ರಾಜಾ ಭೈರವಸಿಂಹ ಘೋರ್ಪಡೆ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ, ಪ್ರೌಢ ವಿಭಾಗ ಹಾಗೂ ಪ್ರಾಥಮಿಕ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಸರಸ್ವತಿ ಪೂಜೆ-ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನಾನು ಕೂಡ ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಈ ಸಂಸ್ಥೆ ನನ್ನಂತಹ ಹಲವಾರು ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂತಹ ಶಿಕ್ಷಣ ಸಂಸ್ಥೆಗೆ ನಾನು ಯಾವತ್ತು ಚಿರಋಣಿಯಾಗಿರುತ್ತೇನೆ ಎಂದರು.
ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ ಮಾತನಾಡಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ, ಇಲ್ಲಿ ಯಶಸ್ಸು ಸಾಽಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು.
ಸಂಸ್ಥೆ ಅಧ್ಯಕ್ಷ, ನಿವೃತ್ತ ಪ್ರಾಚಾರ್ಯ ಡಿ.ಎಂ.ತುಬಾಕಿ ಮಾತನಾಡಿ. ಮಕ್ಕಳು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜದ ಉತ್ತಮ ನಾಗರಿರಾಗಬೇಕು, ಪ್ರತಿಯೊಂದು ಮಕ್ಕಳಲ್ಲೂ ಒಂದೊAದು ಪ್ರತಿಭೆ ಇರುತ್ತದೆ, ಮಕ್ಕಳಲ್ಲಿರುವ ಪ್ರತಿಭೆಯನ್ನು ಪಾಲಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು, ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
2025-26ನೇ ಸಾಲಿನಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಏಳನೇ ತರಗತಿ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡೆ, ಓಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು.
ಸಂಸ್ಥೆ ಕಾರ್ಯದರ್ಶಿ ಎಸ್.ಬಿ.ಕೃಷ್ಣಗೌಡರ, ಸದಸ್ಯರಾದ ಎನ್.ವಿ.ತುಳಸಿಗೇರಿ, ಸಿಆರ್‌ಪಿ ಗಂಗಾಧರ ಗಾಣಗೇರ, ಪ್ರಾಚಾರ್ಯ ಎಸ್.ಎಸ್.ಜೈನಾಪುರ, ಎಸ್.ಎಫ್.ನಾಯಕ, ಎಸ್.ಎಂ.ಹಡಪದ, ಎ.ಕೆ.ಚನ್ನಪ್ಪಗೌಡರ, ಎನ್.ಎಲ್.ಪಮ್ಮಾರ, ಆಫಿಯಾ ಜಲಗೇರ, ಸೌಮ್ಯಾ ಜಂಬಗಿ, ರಮ್ಯಾ ಹಿರೇಮಠ ಇದ್ದರು.