ಬಾಗಲಕೋಟೆ ಶಕ್ತಿ ಟಾಕೀಜ್ ಹತ್ತಿರ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್‌ಐಆರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಜಾಥಾಗೆ ಜಿಲ್ಲಾಽಕಾರಿ ಸಂಗಪ್ಪ ಹಾಗೂ ಜಿಪಂ ಸಿಇಒ ಗಜಾನನ ಬಾಲೆ ಚಾಲನೆ ನೀಡಿದರು. 
ಬಾಗಲಕೋಟೆ

ಎಸ್‌ಐಆರ್‌ನಲ್ಲಿ ಎಲ್ಲ ಮತದಾರರು ಭಾಗವಹಿಸಿ

ಬಾಗಲಕೋಟೆ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹಾಗೂ ಮ್ಯಾಪಿಂಗ್ ಕಾರ್ಯದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಮನವಿ ಮಾಡಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗುರುವಾರ ನಗರದ ಶಕ್ತಿ ಟಾಕೀಜ್ ಹತ್ತಿರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಸಿಇಒ ಗಜಾನನ ಬಾಲೆ ಜೊತೆ ಜಂಟಿಯಾಗಿ ಚಾಲನೆ ನೀಡಿ ಮಾತನಾಡಿದರು.
ಮತದಾದ ಹಕ್ಕು ಪ್ರಜಾಪ್ರಭುತ್ವದ ಮೂಲ ಅಡಿಪಾಯವಾಗಿದೆ. ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್, ಸರ್ಕಾರಿ ಪದವಿ ಪೂರ್ವ ಕಾಲೇಜ ಹಾಗೂ ಸಕ್ರಿ ಪದವಿ ಪೂರ್ವ ಕಾಲೇಜ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾ ಶಕ್ತಿ ಟಾಕೀಸ್ ರಸ್ತೆಯಿಂದ ಪ್ರಾರಂಭವಾಗಿ ಕೆನರಾ ಬ್ಯಾಂಕ್, ಹಳೆ ಸಿಂಡಿಕೇಟ್ ಬ್ಯಾಂಕ್ ಹೊಳೆ ಆಂಜನೇಯ ದೇವಾಸ್ಥಾನ, ಬಸವೇಶ್ವರ ಸರ್ಕಲ್, ಮೆಳ್ಳಿಗೇರಿ ಕಾಂಪ್ಲೆಕ್ಸ್, ಕೆರೂಡಿ ಆಸ್ಪತ್ರೆ, ಲಯನ್ಸ್ ಕ್ಲಬ್, ಸೆಟಲ್‌ಮೆಂಟರ್ ಏರಿಯಾ ಕಾಲೋನಿ, ಹಳೇ ಐಬಿ ಸರ್ಕಲ್ ಮಾರ್ಗವಾಗಿ ಸಕ್ರಿ ಪದವಿ ಪೂರ್ವ ಕಾಲೇಜಗೆ ಮುಕ್ತಾಯಗೊಂಡಿತು.
ಜಾಥಾದಲ್ಲಿ ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಜಿಪಂ ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು, ಮುಖ್ಯ ಲೆಕ್ಕಾಽಕಾರಿ ಸಿದ್ದರಾಮೇಶ್ವರ ಉಕ್ಕಲಿ, ತಹಸೀಲ್ದಾರ ವಾಸುದೇವ ಸ್ವಾಮಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮತ್ತಿತರರು ಇದ್ದರು.