ಜಮಖಂಡಿ ತಾಲೂಕಿನ ಸಿದ್ಧಾಪೂರ ಗ್ರಾಮದ ಪುಷ್ಪಾತಾಯಿ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪ್ರಶಿಕ್ಷಣ ವರ್ಗ ಮಹಾಭಿಯಾನ ಕಾರ್ಯಕ್ರಮವನ್ನು ಶಾಸಕ ನಾಡೋಜ ಜಗದೀಶ ಗುಡಗುಂಟಿ ಉದ್ಘಾಟಿಸಿದರು. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಅಜಯ ಕಡಪಟ್ಟಿ, ಗಣೇಶ ಶಿರಗಣ್ಣವರ, ಮಲ್ಲು ದಾನಗೊಂಡ ಇತರರಿದ್ದರು.
- ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿಕೆ
- ರಾಷ್ಟ್ರ ನಿರ್ಮಾಣದ ಅಭಿಯಾನ
ಜಮಖಂಡಿ: ಭಾರತೀಯ ಜನತಾ ಪಾರ್ಟಿ ಕೇವಲ ರಾಜಕೀಯ ಪಕ್ಷವಲ್ಲ. ರಾಷ್ಟ್ರನಿರ್ಮಾಣದ ಉದ್ದೇಶ ಹೊಂದಿರುವ ಅಭಿಯಾನವಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ತಾಲೂಕಿನ ಸಿದ್ಧಾಪೂರ ಗ್ರಾಮದ ಪುಷ್ಪಾತಾಯಿ ಶಿಕ್ಷಣ ಸಂಸ್ಥೆ ಸಭಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಪ್ರಶಿಕ್ಷಣ ವರ್ಗ ಮಹಾಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಲಿಷ್ಠ ರಾಷ್ಟ್ರ ನಿರ್ಮಾಣದ ಗುರಿಯೊಂದಿಗೆ ಆರಂಭವಾದ ಬಿಜೆಪಿ ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ ಎಂದು ಹೇಳಿದರು.
ಪ್ರತಿ ಮೂರು ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದೆ. ಪಕ್ಷದ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಯೋಜನೆಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ತಿಳಿಸಿದರು.
ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ತತ್ವದಡಿ ಕಾರ್ಯಕರ್ತರ ವ್ಯಕ್ತಿತ್ವ ವಿಕಸನಕ್ಕೆ ಈ ತರಬೇತಿ ಶಿಬಿರಗಳು ನೆರವಾಗುತ್ತವೆ. ಕಾರ್ಯಕರ್ತರು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ನಗರ ಮಂಡಲ ಅಧ್ಯಕ್ಷ ಅಜಯ ಕಡಪಟ್ಟಿ, ಗ್ರಾಮೀಣ ಮಂಡಲ ಅಧ್ಯಕ್ಷ ಮಲ್ಲು ದಾನಗೊಂಡ, ಮುಖಂಡರಾದ ಶಶಿಕಾಂತ ವಿಶ್ವಬ್ರಾಹ್ಮಣ, ಸಂಗು ದಳವಾಯಿ, ಈಶ್ವರ ಆದೆಪ್ಪನವರ, ಮಹಾದೇವ ನ್ಯಾಮಗೌಡ, ಶಂಕರ ಹುನ್ನೂರ, ನಾಗಪ್ಪ ಅಂಬಿ, ಬಸವರಾಜ ಯಂಕಂಚಿ, ಡಾ. ರಾಕೇಶ ಲಾಡ ಇತರರಿದ್ದರು.
ಶಂಕರ ಕಾಳೆ ಸ್ವಾಗತಿಸಿದರು. ಪ್ರಕಾಶ ಹುಗ್ಗೆನವರ ನಿರೂಪಿಸಿದರು. ಗಣೇಶ ಶಿರಗಣ್ಣವರ ವಂದಿಸಿದರು.