ಬಾಗಲಕೋಟೆ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಸಂಸದರಾದ ಪಿ.ಸಿ.ಗದ್ದಿಗೌಡರ, ಗೋವಿಂದ ಕಾರಜೋಳ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಅರುಣ ಶಹಪುರ, ಶಿವಾನಂದ ಟವಳಿ ಇದ್ದರು.
- ಬಿಜೆಪಿ ಕಾರ್ಯಾಲಯದಲ್ಲಿ ಪ್ರಜಾರಾಜ್ಯೋತ್ಸವ
- ಸಂಸದ ಪಿ.ಸಿ. ಗದ್ದಿಗೌಡರ ಅಭಿಮತ
- 1950 ಜನವರಿ 26 ರಂದು ಭಾರತದ ಸಂವಿಧಾನವು ಜಾರಿಗೆ ಬಂದಿತು.
ಬಾಗಲಕೋಟೆ: ಭಾರತ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು 2047ಕ್ಕೆ ದೇಶ ಶಕ್ತಿಶಾಲಿ ಸದೃಢ ವಿಕಸಿತ ಭಾರತವಾಗಿ ನಿರ್ಮಾಣವಾಗಲಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ನಗರದ ಶಿವಾನಂದ ಜಿನ್‌ನಲ್ಲಿ ಬಾಗಲಕೋಟೆ ಕ್ಷೇತ್ರದ ಬಿಜೆಪಿ ವತಿಯಿಂದ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
1950 ಜನವರಿ 26 ರಂದು ಭಾರತದ ಸಂವಿಧಾನವು ಜಾರಿಗೆ ಬಂದಿತು. ಅಂದಿನಿಂದ ಭಾರತವನ್ನು ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯವೆಂದು ಘೋಷಿಸಲಾಯಿತು. ಇಂದು ನಮಗೆ ಸಂವಿಧಾನಾತ್ಮಕವಾಗಿ ಮತದಾನದ ಹಕ್ಕು ಸಿಕ್ಕಿದೆ. ನಮ್ಮ ಹಕ್ಕನ್ನು ಚಲಾಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ದೇಶದಲ್ಲಿ ಸಾಕಷ್ಟು ಧರ್ಮ, ಸಂಸ್ಕೃತಿಗಳು ಇದ್ದರೂ ನಾವೆಲ್ಲ ಭಾರತಿಯರು, ಒಂದೇ ತಾಯಿಯ ಮಕ್ಕಳು, ನಾವೆಲ್ಲರೂ ಒಂದೆ ಎನ್ನುವ ಭಾವ ಇರಲಿ. ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ವಿಕಸಿತ ಭಾರತ ಪರಿಕಲ್ಪನೆಯಲ್ಲಿ ಶಕ್ತಿಶಾಲಿ ದೇಶ ಕಟ್ಟಲು ಎಲ್ಲರೂ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದರು.
ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಬೆಳಗಾವಿ ವಿಭಾಗದ ಉಸ್ತುವಾರಿ ಅರುಣ ಶಾಹಪುರ, ಮುಖಂಡರಾದ ಜಿ,ಎನ್,ಪಾಟೀಲ, ಡಾ.ಎಂ.ಎಸ್.ದಡ್ಡೆನ್ನವರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ರಾಜು ರೇವಣಕರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಯಲ್ಲಪ್ಪ ಬೆಂಡಿಗೇರ, ಬಸಲಿಂಗಪ್ಪ ನಾವಲಗಿ, ಶಿವಾನಂದ ಟವಳಿ, ಭಾಗೀರಥಿ ಪಾಟೀಲ, ಶಶಿಕಲಾ ಮಜ್ಜಗಿ ಮತ್ತಿತರರು ಇದ್ದರು.
ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಬಳಿಕ ನಂತರ ನಗರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.