ಉತ್ತರ ಕರ್ನಾಟಕ ಜನಪದ ಗಾಯಕ ಮ್ಯೂಸಿಕ್ ಮೈಲಾರಿ
- ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ
- ಉತ್ತರ ಕರ್ನಾಟಕ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಎಫ್ಐಆರ್
- ಜನಪದ ಗಾಯಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು
- ಮ್ಯೂಸಿಕ್ ಮೈಲಾರಿ ಸೇರಿದಂತೆ ಒಟ್ಟು 7 ಜನರ ವಿರುದ್ಧ ಪೋಕ್ಸೋ ಕೇಸ್
ಬಾಗಲಕೋಟೆ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿ ( Music Mailari ) ಎಂದೇ ಖ್ಯಾತಿಯಾಗಿರುವ ಉತ್ತರ ಕರ್ನಾಟಕ ಜನಪದ ಗಾಯಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿ ಸೇರಿದಂತೆ ಒಟ್ಟು 7 ಜನರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಮ್ಯೂಸಿಕ್ ಮೈಲಾರಿ ಉತ್ತರ ಕರ್ನಾಟಕದ ಜನಪದ ಸಿಂಗರ್. ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದೇ ಹೆಸರಾಗಿದ್ದಾರೆ. ಅಕ್ಟೋಬರ್ 24 ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಹೊರವಲಯದ ಲಾಡ್ಜ್ ಒಂದರಲ್ಲಿ ಲೈಂಗಿಕ ದೌರ್ಜನ್ಯ ಎದಗಿರುವ ಆರೋಪ ಕೇಳಿಬಂದಿದೆ.
ಪ್ರಕರಣದ ವಿವರಣೆಗೆ ಬರುವುದಾದರೆ, ಚಿಕ್ಕೋಡಿ ತಾಲೂಕಿನ ಜಾಗನೂರು ಗ್ರಾಮದಲ್ಲಿ ಅಕ್ಟೋಬರ್ 24ರಂದು ಹನುಮಂತ ದೇವರ ಓಕುಳಿ ಕಾರ್ಯಕ್ರಮವಿತ್ತು. ಹೀಗಾಗಿ, ಅಂದು ಊರಿನಲ್ಲಿ ಆರ್ಕೆಸ್ಟ್ರಾ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಾಡಲು ಮೈಲಾರಿ ಆಗಮಿಸಿದ್ದ. ಅದೇ ಆರ್ಕೆಸ್ಟ್ರಾದಲ್ಲಿ ಡಾನ್ಸ್ ಮಾಡಲು ಅಪ್ರಾಪ್ತೆ ಕೂಡ ಬಂದಿದ್ದಳು.
ಈ ಸಮಯದಲ್ಲಿ ಅಪ್ರಾಪ್ತೆಯ ಮೇಲೆ ಲಾಡ್ಜ್ನಲ್ಲೇ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಡಿಸೆಂಬರ್ 14 ರಂದು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿಸೆಂಬರ್ 15ರಂದು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಠಾಣೆಗೆ ಈ ಪ್ರಕರಣವನ್ನು ವರ್ಗಾಯಿಸಲಾಗಿದೆ.
ಸದ್ಯ ಬಾಗಲಕೋಟೆ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.