ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಗಣೇಶ ಹಬ್ಬದ ಆಚರಣೆ ಕುರಿತು ಶಾಂತತಾ ಸಭೆ ನಡೆಯಿತು. ಎಸ್ಪಿ ಸಿದ್ಧಾರ್ಥ ಗೋಯಲ್, ಎಸಿ ಮಹೇಶ ಮಾಲಗಿತ್ತಿ ಇತರರು ಇದ್ದರು. 
ಬಾಗಲಕೋಟೆ

ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಿ

ಬಾಗಲಕೋಟೆ: ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಗಣೇಶ ಮಂಡಳಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಮನವಿ ಮಾಡಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಗಣೇಶ ಹಬ್ಬ ಆಚರಣೆ ಕುರಿತು ಜರುಗಿದ ಶಾಂತತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಬ್ಬಗಳು ಸಮಾಜದಲ್ಲಿ ಸೌಹಾರ್ದತೆ, ಭಾತೃತ್ವ ಹಾಗೂ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ನಡೆಯಬೇಕು. ಗಣೇಶ ಮೆರವಣಿಗೆಯಲ್ಲಿ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಽಸಲಾಗಿದ್ದು, ಗಣೇಶ ಮಂಡಳಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಮೆರವಣಿಗೆಯಲ್ಲಿ ಡಿಜೆ ಬದಲಿಗೆ ಜನಪದ ಕಲಾ ತಂಡಗಳು ಹಾಗೂ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಪ್ರದಾಯಿಕ ವಾದ್ಯಗಳ ಆಯೋಜನೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.
ಪಿಓಪಿ ಗಣೇಶ ಮೂರ್ತಿಗಳನ್ನು ಸಹ ಸಂಪೂರ್ಣವಾಗಿ ನಿಷೇಽಸಲಾಗಿದ್ದು, ಪರಿಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಬೇಕು. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಪಿಡಬ್ಲುಡಿ, ಪೊಲೀಸ್, ಹೆಸ್ಕಾಂ ಹಾಗೂ ನಗರಸಭೆಯಿಂದ ಪಡೆಯಬಹುದಾದ ಅನುಮತಿಯಲ್ಲಿ ಅಡೆತಡೆಯಾಗದಂತೆ ಏಕಗವಾಕ್ಷಿ ಪದ್ದತಿಯ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಜಿಲ್ಲಾದ್ಯಂತ ಒಟ್ಟು ೩,೩೯೩ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ನಿರೀಕ್ಷೆಯಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದರು.
ಗಣೇಶೋತ್ಸವವನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳಿಗೂ ಬಳಸಿಕೊಳ್ಳುವ ಉದ್ದೇಶದಿಂದ ೭೦ ಬಡ ಮಕ್ಕಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಅರ್ಥ ನೀಡಲಿವೆ. ತಮ್ಮ ಕಡೆಯಿಂದ ವ್ಯಯಕ್ತಿಕವಾಗಿ ಸೈಕಲ್ ನೀಡುವ ಬಗ್ಗೆ ವಿಚಾರಿಸಿ ತಿಳಿಸಲಾಗುವುದೆಂದು ಜಿಲ್ಲಾಽಕಾರಿಗಳು ಸಂಗಪ್ಪ ಅವರು ಸಭೆಯಲ್ಲಿ ಹೇಳಿದರು.
ನಗರದಲ್ಲಿ ೧೫೦ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ವಿದ್ಯುತ್ ಸಂಪರ್ಕಕ್ಕಾಗಿ ಹೆಸ್ಕಾಂ ವತಿಯಿಂದ ಪ್ರತಿ ಗಣೇಶ ಮಂಡಳಿಯಿAದ ೨,೫೦೦ ಪಡೆಯಲಾಗುತ್ತಿದೆ. ಆದರೆ ಇದಕ್ಕೆ ಯಾವುದೇ ರಸೀದಿ ಅಥವಾ ಬಿಲ್ ನೀಡುತ್ತಿಲ್ಲ ಎಂದು ಮಂಡಳಿಗಳ ಪ್ರತಿನಿಽಗಳು ಸಭೆಯ ಗಮನಕ್ಕೆ ತಂದರು. ಈ ಕುರಿತು ಸೂಕ್ತ ಕ್ರಮ ಕ್ರಮಕೈಗೊಳ್ಳುವುದಾಗಿ ಜಿಲ್ಲಾಽಕಾರಿಗಳು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಽಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಪರಿಸರ ಮಾಲಿನ್ಯ ನಿಯಂತ್ರಣಾಽಕಾರಿ ಲೋಕೇಶ ಎಚ್.ಕೆ, ಡಿಎಸ್ಪಿ ಗಜಾನನ ಸುತಾರ ಸೇರಿದಂತೆ ಗಣೇಶ ಉತ್ಸವ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.