ಬೆಳಗಾವಿ ಸುವರ್ಣಸೌಧದಲ್ಲಿ ಮಂಗಳವಾರ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ನೇತೃತ್ವದಲ್ಲಿ ನಡೆದ ಚಾಲುಕ್ಯ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿದರು.
- ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ನೇತೃತ್ವ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
- ಜಿಲ್ಲೆಯ ಶಾಸಕರು ಸಭೆಯಲ್ಲಿ ಭಾಗಿ
ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ನೇತೃತ್ವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಜಿಲ್ಲೆಯ ಶಾಸಕರು ಸಭೆಯಲ್ಲಿ ಭಾಗಿ
ಬೆಳಗಾವಿ: ಬಾಗಲಕೋಟೆ ಜಿಲ್ಲೆಯಲ್ಲಿ ಆಯೋಜಿಸಲಿರುವ ಚಾಲುಕ್ಯ ಉತ್ಸವ-2025ರ ಪೂರ್ವಭಾವಿ ಸಿದ್ಧತಾ ಸಭೆಯನ್ನು ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ನೇತೃತ್ವದಲ್ಲಿ ಜರುಗಿತು.
ವಿಶ್ವಪರಂಪರೆ ಸ್ಥಳಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲಿನಲ್ಲಿ ಚಾಲುಕ್ಯರ ಐತಿಹಾಸಿಕ ಪರಂಪರೆಯನ್ನು ಜಗತ್ತಿನಾದ್ಯಂತ ಪ್ರಚಾರ ಮಾಡುವ ಮತ್ತು ಉತ್ತರ ಕರ್ನಾಟಕದ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ತರುವ ಉದ್ದೇಶದಿಂದ ಈ ಬಾರಿ ಚಾಲುಕ್ಯ ಉತ್ಸವವನ್ನು ಭವ್ಯವಾಗಿ ಆಚರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ತಿಮ್ಮಾಪೂರ ತಿಳಿಸಿದರು.
ಉತ್ಸವದ ದಿನಾಂಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಷ್ಟ್ರೀಯ- ಅಂತಾರಾಷ್ಟ್ರೀಯ ಕಲಾವಿದರ ಆಹ್ವಾನ, ಪ್ರಚಾರ ಕಾರ್ಯ, ಭದ್ರತೆ ಮತ್ತು ಪ್ರವಾಸಿಗರ ಸೌಲಭ್ಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಚಾಲುಕ್ಯ ಉತ್ಸವವನ್ನು ರಾಜ್ಯದ ಅತೀ ದೊಡ್ಡ ಸಾಂಸ್ಕೃತಿಕ-ಪ್ರವಾಸೋದ್ಯಮ ಮಹೋತ್ಸವವನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಜಿಲ್ಲೆಯ ಶಾಸಕರಾದ ಜೆ.ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ, ಸಿದ್ದು ಸವದಿ, ಪರಿಷತ್ ಸದಸ್ಯರಾದ ಪಿ.ಎಚ್. ಪೂಜಾರ, ಹನಮಂತ ನಿರಾಣಿ ಸೇರಿ ಹಲವರಿದ್ದರು.