ಮುಧೋಳ ನಗರದ ಕವಿ ರನ್ನ ವಸತಿ ಶಾಲೆಯ ಆವರಣದಲ್ಲಿ ಅಡುಗೆ ಕೋಣೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಆರ್.ಬಿ.ತಿಮ್ಮಾಪೂರ ನೆರವೇರಿಸಿದರು. ಸದುಗೌಡ ಪಾಟೀಲ, ವಕೀಲ ಅಶೋಕ್ ಕಿವಡಿ, ರಾಘು ಮೊಕಾಶಿ ಇತರರಿದ್ದರು. 
ಬಾಗಲಕೋಟೆ

ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ

ಶಿಲ್ಪಾ ಪವಾರ

ಪ್ರಮುಖ ಮುಖ್ಯಾಂಶಗಳು

  • ಶಾಸಕರ ಆರ್.ಬಿ.ತಿಮ್ಮಾಪೂರ ಭರವಸೆ
  • ನೂತನ ಅಡುಗೆ ಕೋಣೆ ನಿರ್ಮಾಣಕ್ಕೆ ಭೂಮಿ ಪೂಜೆ
ಮುಧೋಳ: ವಿದ್ಯಾರ್ಥಿಗಳಿಗೆ ಕೇವಲ ಗುಣಮಟ್ಟದ ಶಿಕ್ಷಣ ನೀಡುವುದು ಮಾತ್ರವಲ್ಲದೆ, ಅವರಿಗೆ ಅಗತ್ಯವಿರುವ ಉತ್ತಮ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಶಾಲಾಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿಯೂ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸಲಾಗುವುದು ಎಂದು ಶಾಸಕರ ಆರ್.ಬಿ.ತಿಮ್ಮಾಪೂರ ಭರವಸೆ ನೀಡಿದರು.
 ನಗರದ ಕವಿ ರನ್ನ ವಸತಿ ಶಾಲೆಯ ಆವರಣದಲ್ಲಿ ಗುರುವಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಅಡುಗೆ ಕೋಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 
ಈ ಸುಸಜ್ಜಿತ ಅಡುಗೆ ಕೋಣೆ ವಿದ್ಯಾರ್ಥಿಗಳ ದೈನಂದಿನ ಊಟದ ಸಿದ್ಧತೆ ಮತ್ತು ನೈರ್ಮಲ್ಯದ ದೃಷ್ಟಿಯಿಂದ ಅತ್ಯಗತ್ಯವಾಗಿದ್ದು, ಕಾಮಗಾರಿಯನ್ನು ಗುಣಮಟ್ಟದಿಂದ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಕೀಲ ಅಶೋಕ್ ಕಿವಡಿ, ಮುಧೋಳ ನಗರ ಘಟಕದ ಅಧ್ಯಕ್ಷ ರಾಘು ಮೊಕಾಶಿ, ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮನ್ನವರ, ಎಸ್. ಪಿ. ದಾನಪ್ಪಗೊಳ ಇತರರಿದ್ದರು.