ಬಾಗಲಕೋಟೆ ಜಿಪಂ ಸಭಾಭವನದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಮಿತಿ ಅಧ್ಯಕ್ಷ ಅನೀಲಕುಮಾರ ದಡ್ಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಶಂಕರಪ್ಪ ನೇಗಲಿ, ಜಿಪಂ ಸಿಇಒ ಗಜಾನನ ಬಾಲೆ ಹಾಗೂ ಸದಸ್ಯರು ಇದ್ದರು. 
ಬಾಗಲಕೋಟೆ

ಅಧಿಕಾರಿಗಳು, ಸಮಿತಿ ಸದಸ್ಯರ ಸಮನ್ವಯ ಅಗತ್ಯ

ಸಂತೋಷ ದೇಶಪಾಂಡೆ
ಬಾಗಲಕೋಟೆ: ಗ್ಯಾರಂಟಿ ಯೋಜನೆಗಳು ಸಮರ್ಪಕ ಅನುಷ್ಠಾನಕ್ಕೆ ಇಲಾಖೆ ಅಽಕಾರಿಗಳ ಜೊತೆಗೆ ಸಮಿತಿ ಸದಸ್ಯರ ನಡುವೆ ಸಮನ್ವಯ ಅಗತ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಅನೀಲಕುಮಾರ ದಡ್ಡಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರ ಮಟ್ಟದಿಂದ ಬಂದAತಹ ನಿರ್ದೇಶನಗಳನ್ನು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಸಮಿತಿಯ ಸದಸ್ಯರು ತಪ್ಪದೇ ಪಾಲನೆ ಮಾಡಬೇಕು. ಮುಖ್ಯಮಂತ್ರಿಗಳು ರಾಜ್ಯ ಮಟ್ಟದಲ್ಲಿ ಜಿಲ್ಲಾಧ್ಯಕ್ಷರ ಸಭೆ ನಡೆಸಿ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಮಹತ್ವ ಕೊಡಲಾಗುತ್ತಿದ್ದು, ಅಧ್ಯಕ್ಷರು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಲು ತಿಳಿಸಿದ್ದಾರೆ ಎಂದರು.
ತಾಲೂಕು ಸಮಿತಿಗಳು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಲು ತಿಳಿಸಿದ ಅವರು, ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ಯೋಜನೆ ತಲುಪಿಸುವಲ್ಲಿ ಅಽಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಗೃಹಲಕ್ಷಿ÷್ಮÃ ಯೋಜನೆಯಡಿ ಒಟ್ಟು ೪೦೬೪೯೧ ಫಲಾನುಭವಿಗಳಲ್ಲಿ ೯೩೯೯ ಫಲಾನುಭವಿಗಳು ಮೃತಪಟ್ಟಿದ್ದು, ಈ ಪೈಕಿ ೩೬೧೧ ಜನರಿಗೆ ಯೋಜನೆಯ ಮೊತ್ತ ಇನ್ನು ಜಮೆ ಆಗುತ್ತಿದೆ. ಜಮೆ ಆಗಿರುವ ಮೊತ್ತದಲ್ಲಿ ಈಗಾಗಲೇ ೨೭ ಲಕ್ಷ ರೂ.ಗಳನ್ನು ಮರಳಿ ಸರಕಾರಕ್ಕೆ ಜಮೆ ಮಾಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ ಸಭೆಗೆ ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ ೪೩೫೬೭೨ ಗೃಹ ಬಳಕೆಯ ಸ್ಥಾವರಗಳು ಪ್ರಯೋಜನ ಪಡೆಯುತ್ತಿದ್ದು, ಗೃಹ ಜ್ಯೋತಿ ೨.೦ ಯೋಜನೆಯಡಿ ೪೩೭೩೭೯ ಸ್ಥಾವರಗಳ ಪೈಕಿ ೧೮೭೦೪೭ ಸ್ಥಾವರಗಳ ಅಪ್‌ಡೇಶನ್ ಮಾಡಲಾಗಿದೆ. ಬಾಕಿ ೨೫೦೩೩೨ ಸ್ಥಾವರಗಳು ಉಳಿದಿದ್ದು, ಅಪ್‌ಡೇಶನ್ ಕಾರ್ಯ ಪ್ರಗತಿಯಲ್ಲಿದ್ದು, ಹುಬ್ಬಳ್ಳಿ ಹೆಸ್ಕಾ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿದೆ. ಬಾಕಿ ಕಾರ್ಯವನ್ನು ಆಗಸ್ಟ ೧೦ ರೊಳಗಾಗಿ ಈ ಕಾರ್ಯ ಪೂರ್ಣಗೊಳಿಸಲಾಗುವುದೆಂದು ಹೆಸ್ಕಾಂ ಅಽÃಕ್ಷಕ ಕಾಂiÀiðನಿರ್ವಾಹಕ ಅಭಿಯಂತರ ಸಿ.ಬಿ.ಯಂಕAಚಿ ಸಭೆಗೆ ತಿಳಿಸಿದರು.
ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಸೌಲಭ್ಯ ಮಹಿಳೆಯರಿಗೆ ಸಮರ್ಪಕವಾಗಿ ದೊರೆಯುವಂತೆ ಆಗಬೇಕು. ಶಾಲಾ-ಕಾಲೇಜು ಮಕ್ಕಳಿಗೆ ಬಸ್ ಸೌಲಭ್ಯ ದೊರೆಯುವಂತೆ ಆಗಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲು ತಿಳಿಸಲಾಯಿತು. ಯುವನಿಽ ಯೋಜನೆಯಡಿ ೨೦೨೪ ಫಲಾನುಭವಿಗಳು ಎರಡು ವರ್ಷಗಳ ವರೆಗೆ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಸಭೆಗೆ ತಿಳಿಸಲಾಯಿತು. ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಜಿಪಂ ಸಿಇಒ ಗಜಾನನ ಬಾಲೆ ಹೇಳಿದರು.
ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆ ಜೋಳ ವಿತರಣೆ ಮಾಡಲಾಗುತ್ತಿದೆ. ಪಡಿತರದಾರರಿಗೆ ವಿತರಿಸಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಟವಾಗದಂತೆ ಕ್ರಮವಹಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ೧೮ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಭೆ ಗಮನಕ್ಕೆ ತರಲಾಯಿತು.
ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶಂಕರಪ್ಪ ನೇಗಲಿ, ಸದಸ್ಯರಾದ ಜಯಶ್ರೀ ತಿಮ್ಮಾಪುರ, ಶಿವಪ್ಪ ಕೋನೇರಿ, ರವೀಂದ್ರ ಯಡಹಳ್ಳಿ ಸೇರಿದಂತೆ ಗ್ಯಾರಂಟಿ ಯೋಜನೆಯ ಅನುಷ್ಠಾನ ಇಲಾಖೆಯ ಅಽಕಾರಿಗಳು ಉಪಸ್ಥಿತರಿದ್ದರು.