ಬಾಗಲಕೋಟೆಯಲ್ಲಿ ನಡೆಯುವ ವಿದ್ಯಾರ್ಥಿನಿಯರಿಗಾಗಿ ವಿಶೇಷ ಸಲಹಾ ಸಮಾಲೋಚನಾ ಕಾರ್ಯಕ್ರಮದ ಬಗ್ಗೆ ಕರವೇ ಜಿಲ್ಲಾಧ್ಯಕ್ಷ ಮುತ್ತುರಾಜ್ ಅರಗಿನಶೆಟ್ಟಿ ವಿವರಿಸಿದರು. ಅಯೂಬಖಾನ್ ಬಾಗೇವಾಡಿ, ಪ್ರಭು ಹಳ್ಳೂರ ಇತರರು ಇದ್ದರು.
ಬಾಗಲಕೋಟೆ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ್ ಶೆಟ್ಟಿ ಬಣ) ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಜು. ೩೦ ಮಧ್ಯಾಹ್ನ ೧೨.೩೦ಕ್ಕೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ವಿಶೇಷ ಸಲಹಾ ಸಮಾಲೋಚನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಮುತ್ತುರಾಜ ಅರಗಿನಶೆಟ್ಟಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಬೈಲ್ ಬಳಕೆ ಪರಿಣಾಮಗಳು ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಗೆ ಶ್ರಮಿಸಲು ದೃಢ ಸಮಾಜಕ್ಕಾಗಿ ಎಂಬ ಆಶಯದೊಂದಿಗೆ ನಡೆಯುತ್ತಿದ್ದು, ೧೦೦೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷಿ÷್ಮÃ ಚೌಧರಿ ಆಗಮಿಸಲಿದ್ದಾರೆ. ಶಾಸಕ ಉಮೇಶ ಮೇಟಿ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜಿಲ್ಲಾಽಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ್ ಹದ್ಲಿ, ಡಿಡಿಪಿಐ ಅಜಿತ್ ಮನ್ನಿಕೇರಿ, ರಾಜ್ಯ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ ಬಿ.ಟಿ., ಕ್ಷೇತ್ರ ಶಿಕ್ಷಣಾಽಕಾರಿ ಎಂ.ಎಸ್.ಬಡದಾನಿ, ಪ್ರಾಂಶುಪಾಲ ಜಿ. ಡಿ.ಲಮಾಣಿ ಹಾಗೂ ಉಪಪ್ರಾಂಶುಪಾಲ ಗಿರಿಜಾ ನಡುವಿನಮನಿ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಭೆಯ ಮುನ್ನ ನಗರದಲ್ಲಿ ಬೈಕ್ ರ‍್ಯಾಲಿ ನಡೆಯಲಿದ್ದು, ಮುಂಬರುವ ದಿನಗಳಲ್ಲಿ ಬಾಗಲಕೋಟೆ ನಗರದಲ್ಲಿ ಅವ್ಯಾಹತವಾಗಿ ಮಾರಾಟವಾಗುತ್ತಿರುವ ಮಾವಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕರವೇ ಮುಖಂಡರಾದ ಅಯೂಬಖಾನ್ ಬಾಗೇವಾಡಿ, ಪ್ರಭು ಹಳ್ಳೂರ, ಪವಿತ್ರಾ ಜಕ್ಕಪ್ಪನವರ್, ಫಯಾಜ್ ತೇಲಿ, ಮಹಾಲಿಂಗಪ್ಪ ಚಿಕ್ಕಪ್ಪನವರ, ಶಶಿಕಾಂತ ನಾಯಕ ಉಪಸ್ಥಿತರಿದ್ದರು.