ಬಾಗಲಕೋಟೆ ಜಿಪಂ ಸಭಾಭವನದಲ್ಲಿ ತಾಪಂ ಇಒ ಹಾಗೂ ಗ್ರಾಪಂ ಪಿಡಿಒಗಳ ಜೊತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಪಂ ಸಿಇಒ ಗಜಾನನ ಬಾಲೆ ಅಧ್ಯಕ್ಷತೆಯಲ್ಲಿ ನಡೆಯಿತು. ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು ಇದ್ದರು. 
ಬಾಗಲಕೋಟೆ

ಯೋಜನೆಗಳ ಅನುಷ್ಠಾದಲ್ಲಿ ವಿಳಂಬ, ನಿರ್ಲಕ್ಷ್ಯ ಸಲ್ಲದು

ಬಾಗಲಕೋಟೆ: ಸರ್ಕಾರದ ಪ್ರತಿಯೊಂದು ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮಾಡುವುದು ಸರಿಯಲ್ಲ. ಅಽಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ ಅಽಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಗುರುವಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವುದು ಹಾಗೂ ನಿಗದಿತ ಗುರಿಗಳನ್ನು ಸಮಯಕ್ಕೆ ಸರಿಯಾಗಿ ಸಾಽಸುವುದು ಅಽಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ, ತೆರಿಗೆ ಸಂಗ್ರಹಣೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತಾ ಕಾರ್ಯಗಳು, ನರೇಗಾ ಯೋಜನೆ, ಗ್ರಾಮ ಪಂಚಾಯತ್ ಆಡಳಿತ ಹಾಗೂ ಇತರೆ ಪ್ರಮುಖ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬವನ್ನು ಸಹಿಸಲಾಗುವುದಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಎಲ್ಲ ಇಒ ಹಾಗೂ ಪಿಡಿಒಗಳು ಕ್ಷೇತ್ರಮಟ್ಟದಲ್ಲಿ ನಿಯಮಿತವಾಗಿ ಭೇಟಿ ನೀಡಿ, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಸಮಯೋಚಿತವಾಗಿ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿಗಳ ತೆರಿಗೆ ಪ್ರಮಾಣವು ಶೇ.೧೫ ರಷ್ಟು ಮಾತ್ರ ವಸೂಲಾತಿ ಆಗಿದ್ದು, ಇಲ್ಲಿಯವರೆಗೆ ಶೇ.೨೫ ರಷ್ಟಾದರೂ ವಸೂಲಾಗಬೇಕಿತ್ತು. ಇ-ತಂತ್ರಾAಶದಡಿ ೧೧ಎ ಮತ್ತು ೧೧ಬಿ ರಡಿ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಸೂಚಿಸಿದರು. ೧೫ನೇ ಹಣಕಾಸಿನಡಿ ಕೆಲವೊಂದು ಗ್ರಾ.ಪಂಗಳಲ್ಲಿ ಅನುದಾನ ಖರ್ಚಾಗದೇ ಹಾಗೆ ಉಳಿಸಿಕೊಂಡಿದ್ದು, ಆಗಸ್ಟ ೧೫ ರೊಳಗಾಗಿ ನಿಯಮಾನುಸಾರ ಖರ್ಚು ಭರಿಸತಕ್ಕದ್ದು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಽಕಾರಿಯು ವಾಸಸ್ಥಳದ ದೃಢೀಕರಣ ಪತ್ರ ನೀಡಲು ತಿಳಿಸಿದರು.
ನಿಗದಿಪಡಿಸಿದ ಗುರಿಗಳನ್ನು ಸಾಽಸಲು ವಿಫಲವಾಗುವ ಅಽಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ, ಗುರಿ ಸಾಧನೆಗೆ ಸಂಬAಽಸಿದAತೆ ನಿರ್ಲಕ್ಷ್ಯ, ವಿಳಂಬ ಅಥವಾ ಕರ್ತವ್ಯ ಲೋಪ ಕಂಡುಬAದಲ್ಲಿ ಸಂಬAಧಪಟ್ಟವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಽಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ. ನಿಗದಿತ ಗುರಿಗಳನ್ನು ಶೇ.೧೦೦ ರಷ್ಟು ಸಾಽಸಲು ಶ್ರಮಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು ಸೇರಿದಂತೆ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಽಕಾರಿಗಳು, ಸಹಾಯಕ ನಿರ್ದೇಶಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳು ಉಪಸ್ಥಿತರಿದ್ದರು.