ಬೀಳಗಿ ಪಟ್ಟಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೋರಾಟಗಾರ ಯಲ್ಲಪ್ಪ ಹೆಗಡೆ ಪ್ರಚಾರ ಪತ್ರವನ್ನು ಬಿಡುಗಡೆಗೊಳಿಸಿದರು. ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಬಿ.ಎಸ್. ಗೋನಾಳ, ಅಧ್ಯಕ್ಷ ಸಿದ್ದಪ್ಪ ಬಳಗಾನೂರ, ಸದಾಶಿವ ಅಗ್ನಿ, ಹುಸೇನಸಾಬ ನದ್ಾ, ಸಿದ್ದಪ್ಪ ಚಂಡಿಕಿ ಇತರರಿದ್ದರು. 
ಬಾಗಲಕೋಟೆ

ಭ್ರಷ್ಟಾಚಾರ ರಹಿತ ನೇಮಕಾತಿಗೆ ಆಗ್ರಹ

ಪ್ರಮುಖ ಮುಖ್ಯಾಂಶಗಳು

  • ಹೋರಾಟಗಾರ ಯಲ್ಲಪ್ಪ ಹೆಗಡೆ ಬೇಸರ
  • ಜುಲೈ 18ರಂದು ಬಹತ್ ಪ್ರತಿಭಟನೆ ಆಯೋಜನೆ
  • ಸರ್ಕಾರದ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದು.
ಬೀಳಗಿ: ಬೀಳಗಿ ವಿಧಾನಸಭಾ ಮತಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯದಡಿ ಹಿಂದುಳಿದ ಸಮುದಾಯಗಳ ಹಕ್ಕುಗಳನ್ನು ಜಾರಿಗೊಳಿಸುವ ಅಗತ್ಯ ತೀವ್ರವಾಗಿದ್ದು, ಇದಕ್ಕಾಗಿ ಜನರು ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೋರಾಟಗಾರ ಯಲ್ಲಪ್ಪ ಹೆಗಡೆ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18ರಂದು ಬೆಳಗ್ಗೆ 10 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ವತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಕಾಲ್ನಡಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸರ್ಕಾರದ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದು, ಭ್ರಷ್ಟಾಚಾರ ರಹಿತ ನೇಮಕಾತಿ, ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ, ಮುಸ್ಲಿಂ ಸಮುದಾಯದ ಮೀಸಲಾತಿ ಮರುಸ್ಥಾಪನೆ ಹಾಗೂ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಜಾತಿ ಗಣತಿ (2025) ವರದಿ ಪ್ರಕಟಿಸುವುದು ಸೇರಿ ಹಲವು ಬೇಡಿಕೆಗಳನ್ನು ಅವರು ಮುಂದಿಟ್ಟರು.
ಬೀಳಗಿ ಮತಕ್ಷೇತ್ರದ ಶಾಸಕರು ಜನರ ಸಮಸ್ಯೆಗಳಿಗೆ ನ್ಯಾಯಯುತವಾಗಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಹೇಳಿ ಜನರಿಂದ ಮತ ಪಡೆದು ಆಯ್ಕೆಯಾದ ಶಾಸಕ ಜೆ.ಟಿ. ಪಾಟೀಲ ಮೂರುವರ್ಷ ಅವಧಿ ಕಳೆದರೂ ಇನ್ನುವರೆಗೆ ಯಾವುದೇ ಅಭಿವದ್ಧಿ ಕೆಲಸ ಮಾಡದೇ ಇರುವುದು ಈ ಭಾಗದ ಜನರ ದುರಾದಷ್ಟಕರವಾಗಿದೆ. ಈ ನಿಟ್ಟಿನಲ್ಲಿ ನಾವು ಹೋರಾಟ ಮಾಡುವ ಅನಿವಾರ್ಯ ಬಂದೊದಗಿದೆ. ಅಲ್ಲದೆ ಮಾಜಿ ಸಚಿವ ಮುರುಗೇಶ ನಿರಾಣಿ ಅವರು ಕೂಡ ಈ ಭಾಗದ ಜನರ ಸಮಸ್ಯೆಗಳು ಸ್ಪಂದಿಸದೆ ತಮ್ಮ ಕಾರ್ಖಾನೆ ಬಗ್ಗೆ ಹೇಳುತ್ತಿದ್ದಾರೆ. ಆದರೆ ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಅವರು ಕೂಡಾ ಮಾಡಬೇಕು ಎಂದರು.
ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಬಿ.ಎಸ್. ಗೋನಾಳ ಮಾತನಾಡಿ, ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರದಲ್ಲಿ ರಾಜಕೀಯ ಇಚ್ಛಾಶಕ್ತಿ ಕಾಣುತ್ತಿಲ್ಲ ಎಂದು ಹೇಳಿದರು. ಚುನಾವಣಾ ಸಂದರ್ಭದಲ್ಲಷ್ಟೇ ಜನರ ಪರ ನಿಲ್ಲುವ ರಾಜಕಾರಣಿಗಳು ನಂತರ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಟೀಕಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದಪ್ಪ ಬಳಗಾನೂರ, ಸದಾಶಿವ ಅಗ್ನಿ, ಹುಸೇನಸಾಬ ನದ್ಾ, ಸಿದ್ದಪ್ಪ ಚಂಡಿಕ್ಕಿ, ಲಕ್ಷ್ಮಣ ಸೇರಿ ಹಲವರು ಉಪಸ್ಥಿತರಿದ್ದರು.