ಬಾಗಲಕೋಟೆ ತಾಲೂಕಿನ ಮುಳಗೊಳ್ಳಿ ತಾಂಡಾದ ಸರ್ಕಾರಿ ಶಾಲಾ ಕೊಠಡಿ ಮೇಲ್ಛಾವಣೆ ಕುಸಿದು ಮಕ್ಕಳು ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಗುರುವಾರ ಜಿಪಂ ಸಭಾಭವನದಲ್ಲಿ ಸಿಇಒ ಗಜಾನನ ಬಾಲೆ ಅವರು ವಿವಿಧ ಇಲಾಖೆ ಅಽಕಾರಿಗಳ ಜೊತೆ ತುರ್ತು ಸಭೆ ನಡೆಯಿತು. ಜಿಪಂ ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು ಅಲ್ಲಾಪೂರ ಇದ್ದರು.
ಬಾಗಲಕೋಟೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಪರಿಶೀಲನೆ ನಡೆಸಲಾಗಿದ್ದರೂ ಮುಗುಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದಿರುವುದು ಗಂಭೀರ ವಿಚಾರವಾಗಿದೆ. ಶಾಲೆಗಳಿಗೆ ತೆರಳಿ ಖುದ್ದಾಗಿ ಪರಿಶೀಲನೆ ನಡೆಸದೆ, ವರದಿ ನೀಡಿರುವ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಽಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಜಿಪಂ ಮುಖ್ಯ ಕಾರ್ಯನಿರ್ವಾಹ ಅಽಕಾರಿ ಗಜಾನನ ಬಾಲೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಮುಗುಳೊಳ್ಳಿ ತಾಂಡಾ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಽಕಾರಿಗಳು ಹಾಗೂ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಽಕಾರಿಗಳೊಂದಿಗೆ ಜರುಗಿದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಗುಳೊಳ್ಳಿ ಶಾಲೆಯ ಕೊಠಡಿಗಳು ಸುಸ್ಥಿತಿಯಲ್ಲಿವೆ ಎಂದು ವರದಿ ನೀಡಲಾಗಿದ್ದು, ಮಳೆ ಬಂದಾಗ ಎರಡು ಕೊಠಡಿಗಳು ಮಾತ್ರ ಸೋರುತ್ತವೆ ಎಂದು ನಮೂದಿಸಲಾಗಿತ್ತು. ಆದರೆ, ಇದೇ ಶಾಲೆಯ ಕೊಠಡಿಯ ಮೇಲ್ಚಾವಣಿ ಕುಸಿದು ಘಟನೆ ಸಂಭವಿಸಿರುವುದರಿAದ ಪರಿಶೀಲನಾ ವರದಿಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಸುಸ್ಥಿತಿ ಇದೆ ಎಂದು ವರದಿ ನೀಡಿದ ಇಬ್ಬರು ಅಽಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದರು.
ಜಿಲ್ಲೆಯ ೧,೪೨೪ ಶಾಲೆಗಳ ೯,೪೪೯ ಕೊಠಡಿಗಳ ಪೈಕಿ ೬,೯೬೧ ಕೊಠಡಿಗಳು ಸುಸ್ಥಿತಿಯಲ್ಲಿದ್ದು, ೧,೨೩೨ ಕೊಠಡಿಗಳು ಸಣ್ಣ ಹಾಗೂ ೧,೫೩೫ ಕೊಠಡಿಗಳು ದೊಡ್ಡ ದುರಸ್ತಿಗೆ ಒಳಪಟ್ಟಿವೆ. ಪ್ರಸ್ತುತ ೮,೩೬೭ ಕೊಠಡಿಗಳು ತರಗತಿ ನಡೆಸಲು ಯೋಗ್ಯವಾಗಿದ್ದು, ೬೨೮ ಕೊಠಡಿಗಳು ಬೋಧನೆಗೆ ಯೋಗ್ಯವಲ್ಲ ಎಂದು ವರದಿ ನೀಡಲಾಗಿದೆ. ಮುಗುಳೊಳ್ಳಿ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಬೋಧನೆಗೆ ಯೋಗ್ಯವಲ್ಲದ ೬೨೮ ಶಾಲಾ ಕೊಠಡಿಗಳ ಮರು ಪರಿಶೀಲನೆಗೆ ೧೫ ದಿನಗಳ ಕಾಲಾವಕಾಶ ನೀಡುವ ಮೂಲಕ ಜಿಓ ಟ್ಯಾಗ್ ಛಾಯಾಚಿತ್ರ ಒಳಗೊಂಡAತೆ ಸಮರ್ಪಕ ವರದಿ ಸಲ್ಲಿಸಲು ಸೂಚನೆ ನೀಡಿದರು.
ಶಾಲೆಗಳಿಗೆ ಕೇವಲ ನೀರು ಪೂರೈಕೆ ಮಾಡಿದರೆ ಸಾಲದು, ಪೂರೈಕೆಯಾಗುವ ನೀರಿನ ಗುಣಮಟ್ಟ ಹಾಗೂ ಸಂಗ್ರಹಿಸುವ ಟ್ಯಾಂಕ್‌ಗಳ ಸ್ವಚ್ಛತೆಯನ್ನೂ ನಿಯಮಿತವಾಗಿ ಪರಿಶೀಲಿಸಬೇಕು. ಟ್ಯಾಂಕರ್‌ಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಬೇಕು. ಹುನಗುಂದ ತಾಲೂಕಿನಲ್ಲಿ ಶಾಲೆಯೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀರಿನ ಟ್ಯಾಂಕ್ ಸ್ವಚ್ಛವಾಗಿರದಿರುವುದು ಗಮನಕ್ಕೆ ಬಂದಿದ್ದು, ಸಂಬAಽಸಿದ ಶಾಲೆಯ ಮುಖ್ಯಶಿಕ್ಷಕರಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಽಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಽಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ಕಂಪೌAಡ್, ಶಾಲಾ ಆವರಣ, ಕಟ್ಟಡ, ಮೇಲ್ಚಾವಣಿ, ಕುಡಿಯುವ ನೀರು ಹಾಗೂ ಇತರೆ ಸುರಕ್ಷತಾ ಅಂಶಗಳನ್ನು ಮುಂಜಾಗ್ರತಾ ಕ್ರಮಕ್ಕಾಗಿ ಅಭಿಯಾನದ ರೂಪದಲ್ಲಿ ಕೆಲಸ ನಿರ್ವಹಿಸಲು ಸೂಚನೆ ನೀಡಿ, ಕ್ಷೇತ್ರ ಶಿಕ್ಷಣಾಽಕಾರಿಗಳು ತಮ್ಮ ಹಂತದ ಶಾಲೆಯ ಮುಖ್ಯ ಗುರುಗಳಿಗೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ, ಬೇಜವಾಬ್ದಾರಿತನ ತೋರುವವರ ಮೇಲೆ ನಿರ್ಧಾಕ್ಷಣ್ಯವಾಗಿ ಕ್ರಮಕೈಗೊಳ್ಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು ಅಲ್ಲಾಪೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಾಲಾ ಶಿಕ್ಷಣ ಇಲಾಖೆಯ ಉಪ ಸಮನ್ವಯಾಽಕಾರಿ ಪ್ರಮೋದಿನಿ ಬಲೂಲವಾಡಿ ಸೇರಿದಂತೆ ಪಿಆರ್‌ಇಡಿ, ಲೋಕೋಪಯೋಗಿ ಇಲಾಖೆಯ ಅಭಿಯಂತರರು ಹಾಗೂ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಽಕಾರಿಗಳು ಉಪಸ್ಥಿತರಿದ್ದರು.