ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿಯಲ್ಲಿ ಗುರುವಾರದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು. ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ಶ್ರೀಕಾಂತ ಕುಲಕರ್ಣಿ ಸೇರಿ ಅನೇಕರು ಇದ್ದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಹೊಡೆದ ಹಗರಣದ ಆರೋಪಿ ಬಿ.ನಾಗೇಂದ್ರ ಜೊತೆಗೆ ಹುನಗುಂದ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆಗೆ ಬೆಂಬಲವಾಗಿ ನಿಂತಿರುವ ಹಾಗೂ ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿ ಅಪಮಾನ ಮಾಡಿರುವ ಸಚಿವ ವಿಜಯಾನಂದ ಕಾಶಪ್ಪನವರ ಅವರನ್ನೂ ಸಹ ಸಂಪುಟದಿAದ ವಜಾಗೊಳಿಸಬೇಕು ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಸಿಎಂ ಡಿ.ಕೆ.ಶಿವಕುಮಾರ ಅವರನ್ನು ಆಗ್ರಹಿಸಿದರು.
ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಡೆದಿರುವ ಅನಿರ್ದಿಷ್ಟ ಅವಽ ಧರಣಿಯಲ್ಲಿ ಗುರುವಾರ ಹುನಗುಂದ ಕ್ಷೇತ್ರದ ಕಾರ್ಯಕರ್ತರ ಜೊತೆ ಪಾಲ್ಗೊಂಡು ಅವರು ಮಾತನಾಡಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಎಂಥವರೆಲ್ಲ ಸಚಿವರಾಗಿದ್ದಾರೆ, ಮಂತ್ರಿಯಾಗಲು ಪೇಮೆಂಟ್ ಆಗಿದೆ ಎಂದು ಸ್ವತಃ ಕಾಂಗ್ರೆಸ್ ಮುಖಂಡರು ಮಾತನಾಡಿರುವ ಆಡಿಯೋ ಇಡೀ ರಾಜ್ಯದ ಜನರು ಕೇಳಿಸಿಕೊಂಡಿದ್ದಾರೆ. ಜೊತೆಗೆ ಈ ಮುಖಂಡರ ವಿರುದ್ಧ ಹುನಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ, ಭಾವಚಿತ್ರಗಳಿಗೆ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ನಾಗೇಂದ್ರ ಹಾಗೂ ಕಾಶಪ್ಪನವರ ಇಬ್ಬರನ್ನೂ ಸಂಪುಟದಿAದ ವಜಾಗೊಳಿಸುವಂತೆ ಒತ್ತಾಯಿಸಿದರು.
ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ತಮ್ಮ ಭಾಷಣದುದ್ದಕ್ಕೂ ಹುನಗುಂದ ಕ್ಷೇತ್ರದ ಶಾಸಕ, ಸಚಿವ ವಿಜಯಾನಂದ ಕಾಶಪ್ಪನವರ ಅವರನ್ನು ಗುರಿಯಾಗಿಸಿ, ವಾಗ್ದಾಳಿ ನಡೆಸಿದರು. ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಅಕ್ರಮ ಮರಳುಗಾರಿಕೆ ನಡೆದಿರುವುದು ಹುನಗುಂದ ಕ್ಷೇತ್ರದಲ್ಲಿ. ಅದಕ್ಕೆ ಕಾರಣ ಅಲ್ಲಿನ ಶಾಸಕರು. ಅಂತವರು ಇದೀಗ ಸಚಿವರಾಗಿದ್ದಾರೆ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಅವರನ್ನು ಮಂತ್ರಿಯಾಗಿ ಮುಂದುವರೆಸಬಾರದು ಎಂದು ಆಗ್ರಹಿಸಿದರು.
ಇನ್ನು ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮೂರನೇ ದಿನವೂ ಸಹ ಅಹೋರಾತ್ರಿ ಧರಣಿ ಮುಂದುವರೆದಿದೆ. ಪ್ರತಿ ದಿನ ಒಂದೊAದು ಕ್ಷೇತ್ರದಿಂದ ಬಿಜೆಪಿ ಕಾರ್ಯಕರ್ತರ ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಾಗೇಂದ್ರ ಅವರನ್ನು ಸಂಪುಟದಿAದ ವಜಾಗೊಳಿಸುವವರೆಗೂ ಧರಣಿ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಭಟನಾನಿರತರು ಹೇಳಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರಮಠ, ಎಸ್ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗಡಿಯನ್ನವರ, ಮುಖಂಡರಾದ ಬಸವರಾಜ ಹುನಕುಂಟಿ, ಚಂದ್ರಶೇಖರ ಏಕಬೋಟೆ, ಶಿವಾನಂದ ಸುರಪುರ, ಗಿರೀಶ ಭಾಂಡಗೆ ಇತರರು ಇದ್ದರು.