ಚಿಮ್ಮಡ ಗ್ರಾಮದ ಸರ್ಕಾರಿ ಪದವಿ ಪೂರ್ವ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನ ವಿರೋಽ ಜಾಗೃತಿ ಕಾರ್ಯಕ್ರಮದಲ್ಲಿ ಬನಹಟ್ಟಿ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಎಸ್. ಧರಿಗೋಣ ಮಾತನಾಡಿದರು. ಎಸ್.ಕೆ.ರಾಠೋಡ. ಡಾ.ಕೆ.ಎಸ್. ತಳ್ಳಿ, ಬಿ.ಜಿ. ಹೂಗಾರ, ಆರ್.ಬಿ.ಪೂಜಾರಿ ಉಪಸ್ಥಿತರಿದ್ದರು.
- ಪಿಎಸ್‌ಐ ಎಸ್.ಎಸ್.ಧರಿಗೋಣ ಹೇಳಿಕೆ
- ಚಿಮ್ಮಡದಲ್ಲಿ ಜಾಗೃತಿ ಕಾರ್ಯಕ್ರಮ
ಚಿಮ್ಮಡ: ತಂಬಾಕು, ಮದ್ಯ ಹಾಗೂ ಗಾಂಜಾ ಹೊಗೆ ಸೇವನೆ ಶಾರೀರಿಕ ಹಾಗೂ ಮಾನಸಿಕವಾಗಿ ಅತ್ಯಂತ ಅಪಾಯಕಾರಿಯಾಗಿದ್ದು, ಇದರ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ಜಾಗೃತಿ ವಹಿಸಬೇಕು ಎಂದು ಬನಹಟ್ಟಿ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಎಸ್. ಧರಿಗೋಣ ಹೇಳಿದರು.
ಗ್ರಾಮದ ಸರ್ಕಾರಿ ಪದವಿ ಪೂರ್ವ ವಿದ್ಯಾಲಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಸಮೀಕ್ಷೆಯ ವರದಿಗಳ ಪ್ರಕಾರ ಶೇ. 21ರಷ್ಟು ಯುವಕರು ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆ. ಭವಿಷ್ಯದಲ್ಲಿ ಇದು ಬಹು ದೊಡ್ಡ ಹಾನಿ ಉಂಟು ಮಾಡಲಿದ್ದು, ವಿದ್ಯಾರ್ಥಿಗಳು ಇದರಿಂದ ಜಾಗೃತರಾಗಬೇಕು. ಮಾದಕ ಪದಾರ್ಥ ಸೇವನೆ ತಡೆಗಟ್ಟಲು ಸರ್ಕಾರ ಶಾಲೆ, ಕಾಲೇಜುಗಳಲ್ಲಿ ಈ ಕುರಿತು ತಿಳುವಳಿಕೆ ನೀಡುವ ಹಾಗೂ ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತ ಸಮಿತಿ ರಚಿಸಲಾಗಿದೆ ಎಂದರು.
ಸರ್ಕಾರಿ ಪದವಿ ಪೂರ್ವ ವಿದ್ಯಾಲಯದ ಪ್ರಭಾರ ಪ್ರಾಚಾರ್ಯ ಎಸ್.ಕೆ.ರಾಠೋಡ ಮಾತನಾಡಿ, ವಿದ್ಯಾರ್ಥಿಗಳನ್ನು ಮಾದಕ ವಸ್ತುಗಳ ಸೇವನೆಯಿಂದ ದೊರವಿಡಲು ಪಾಲಕರ ಪಾತ್ರವೂ ಅತೀ ಮುಖ್ಯವಾಗಿದೆ. ವಿದ್ಯಾಲಯಗಳಿಂದ ಬರುವ ಮಕ್ಕಳು ಎಲ್ಲಿ ಹೋಗುತಿದ್ದಾರೆ, ಯಾರ ಸಂಪರ್ಕದಲ್ಲಿದ್ದಾರೆ ಎಂಬುವುದರ ಕುರಿತು ಜಾಗೃತಿ ವಹಿಸಬೇಕು ಎಂದರು.
ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಎಸ್.ತಳ್ಳಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅವ್ವನೆಪ್ಪ ಮುಗಳಖೋಡ, ಪೊಲೀಸ್ ಸಿಬ್ಬಂದಿ ಬಿ.ಜಿ.ಹೂಗಾರ, ಆರ್.ಬಿ.ಪೂಜಾರಿ ಉಪಸ್ಥಿತರಿದ್ದರು.