ಬಾಗಲಕೋಟೆ ಜಿ.ಪಂ. ನೂತನ ಸಭಾ ಭವನದಲ್ಲಿ ನಡೆದ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನದಲ್ಲಿ ಜಿ.ಪಂ. ಸಿಇಒ ಶಶಿಧರ ಕುರೇರ ಅವರು ಗ್ಯಾಗ್‌ಗಳನ್ನು ಪ್ರದರ್ಶನ ಮಾಡಿದರು. ಜಿ.ಪಂ. ಸಹಾಯಕ ನಿರ್ದೇಶಕ ಎಸ್.ಎಂ. ಕಾಂಬಳೆ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ವಿವಿಧ ಸ್ವ-ಸಹಾಯ ಸಂಘದ ಸದಸ್ಯರು ಇದ್ದರು. 
ಬಾಗಲಕೋಟೆ

ಸಂಘಗಳ ಉತ್ಪಾದನೆಯಿಂದ ಆರ್ಥಿಕ ಸ್ವಾವಲಂಬನೆ

ಪ್ರಮುಖ ಮುಖ್ಯಾಂಶಗಳು

  • ಎನ್‌ಆರ್‌ಎಂಎಲ್ ಯೋಜನೆಗಳ ಪರಿಶೀಲನಾ ಸಭೆ
  • ವಿವಿಧ ಬ್ರಾಂಡ್‌ಗಳ ಪ್ರದರ್ಶನ
  • ಗ್ರಾಮೀಣ ಮಹಿಳೆಯರಿಗೆ ಆರ್ಥಿಕ ಬೆಂಬಲದ ಜೊತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ.
ಬಾಗಲಕೋಟೆ : ಸ್ವಸಹಾಯ ಸಂಘಗಳ ಉತ್ಪಾದನಾ ಚಟುವಟಿಕೆಗಳು ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಜಿ.ಪಂ. ಸಿಇಒ ಶಶಿಧರ ಕುರೇರ ಹೇಳಿದರು.
ಜಿಲ್ಲಾ ಪಂಚಾಯಿತಿ ನೂತನ ಸಭಾ ಭವನದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿವಿಧ ಸ್ವ-ಸಹಾಯ ಸಂಘದ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ವೀಕ್ಷಿಸಿ ಅವರು ಮಾತನಾಡಿದರು.
ಜಿಲ್ಲೆಯ ಸ್ವ-ಸಹಾಯ ಸಂಘಗಳ ಸದಸ್ಯರು ಉತ್ಪಾದಿಸಿದ ವಿವಿಧ ಉತ್ಪನ್ನಗಳ ಪ್ಯಾಕೇಜಿಂಗ್ ಮತ್ತು ಬ್ರಾಂಡಿಂಗ್‌ಗಳನ್ನು ಚೆನ್ನಾಗಿವೆ. ಸಂಘಗಳು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಗುಣಮಟ್ಟದ ಹಾಗೂ ಮಾರುಕಟ್ಟೆಗೆ ಹೊಂದುವ ಉತ್ಪನ್ನಗಳನ್ನು ತಯಾರಿಸುತ್ತಿರುವುದನ್ನು ಶ್ಲಾಘಿಸಿದರು.
ಇಂತಹ ಉತ್ಪಾದನಾ ಚಟುವಟಿಕೆಗಳು ಗ್ರಾಮೀಣ ಮಹಿಳೆಯರಿಗೆ ಆರ್ಥಿಕ ಬೆಂಬಲದ ಜೊತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ. ಮುಂದಿನ ದಿನಗಳಲ್ಲಿ ಉತ್ಪನ್ನಗಳ ಮಾರುಕಟ್ಟೆ ಸಂಪರ್ಕ, ಪ್ಯಾಕೇಜಿಂಗ್ ಮತ್ತು ಬ್ರಾಂಡಿಂಗ್‌ಗೆ ಅಗತ್ಯ ಸಹಕಾರ ನೀಡಲಾಗುವುದೆಂದು ಭರವಸೆ ನೀಡಿದರು.
ಉತ್ಪನ್ನಗಳ ಆಕರ್ಷಕ ಬ್ರಾಂಡಿಂಗ್ ಮತ್ತು ಗುಣಮಟ್ಟದ ಲೇಬಲಿಂಗ್ ಹಾಕುವ ಮೂಲಕ ಮಾರುಕಟ್ಟೆಯಲ್ಲಿ ಉತ್ತಮ ಸ್ಥಾನವನ್ನು ಪಡೆಯಬಹುದಾಗಿದೆ. ಎನ್‌ಆರ್‌ಎಲ್‌ಎಂನ ಎಲ್ಲ ಸಿಬ್ಬಂದಿ ಹಾಗೂ ಸ್ವ-ಸಹಾಯ ಸಂಘಗಳ ಸದಸ್ಯರು ಉತ್ತಮ ಸಮನ್ವಯದೊಂದಿಗೆ ಕೆಲಸ ಮಾಡುತ್ತಿದ್ದಾರೆಂದು ಪ್ರಶಂಸಿಸಿದರು.
ನಂತರ ಪರಿಶೀಲನಾ ಸಭೆಯಲ್ಲಿ ಎನ್‌ಆರ್‌ಎಲ್‌ಎಂ ಕಾರ್ಯಕ್ರಮಗಳ ಅನುಷ್ಠಾನ ಸ್ಥಿತಿ, ಸಾಧನೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಯಿತು. ಸಭೆಯಲ್ಲಿ ವಿವಿಧ ಬ್ರಾಂಡ್ ಹಾಗೂ ಬ್ಯಾಗ್‌ಗಳನ್ನು ಪ್ರದರ್ಶನ ಮಾಡಲಾಯಿತು. ಜಿಪಂ ಸಹಾಯಕ ನಿರ್ದೇಶಕ ಎಸ್.ಎಂ. ಕಾಂಬಳೆ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ವಿವಿಧ ಸ್ವ-ಸಹಾಯ ಸಂಘದ ಸದಸ್ಯರು ಇದ್ದರು.