ಗುಳೇದಗುಡ್ಡದ ಭಂಡಾರಿ ಮತ್ತು ರಾಠಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಹಿತಿ ಡಾ. ವೈ.ಎಂ. ಯಾಕೊಳ್ಳಿ, ರವೀಂದ್ರ ಪಟ್ಟಣಶೆಟ್ಟಿ ಚಾಲನೆ ನೀಡಿದರು. ಕಾಲೇಜಿನ ಚೇರ್ಮನ್ ಕೆ.ಆರ್. ಭಂಡಾರಿ, ರವೀಂದ್ರ ಪಟ್ಟಣಶೆಟ್ಟಿ, ವಿಠ್ಠಲಸಾ ಕಾವಡೆ, ಪ್ರಾಚಾರ್ಯ ಡಾ. ಎನ್.ವೈ. ಬಡಣ್ಣವರ, ಪ್ರೊ. ಸಿದ್ದಲಿಂಗಪ್ಪ ಬರಗುಂಡಿ ಇತರರಿದ್ದರು.
- ಡಾ. ವೈ.ಎಂ. ಯಾಕೊಳ್ಳಿ ಹೇಳಿಕೆ
- ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ
ಶಿಕ್ಷಣ ಕೇವಲ ಪಠ್ಯಕ್ಕೆ ಸೀಮಿತವಾಗದೆ, ಪಠ್ಯಪೂರಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವದ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಬೇಕು ಎಂದು ಧಾರವಾಡದ ದ.ರಾ. ಬೇಂದ್ರೆ ರಾಷ್ಟ್ರೀಯ ಪ್ರತಿಷ್ಠಾನದ ಸದಸ್ಯ ಹಾಗೂ ಸಾಹಿತಿ ಡಾ. ವೈ.ಎಂ. ಯಾಕೊಳ್ಳಿ ಹೇಳಿದರು.
ಪಟ್ಟಣದ ಭಂಡಾರಿ ಮತ್ತು ರಾಠಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಸ್ಕಾರಯುತ ವ್ಯಕ್ತಿಗಳನ್ನು ರೂಪಿಸುವುದೇ ಶಿಕ್ಷಣದ ಮೂಲ ಉದ್ದೇಶ. ಯುವ ಜನರು ಶಿಕ್ಷಣದ ಜ್ಞಾನವನ್ನು ದೇಶ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದರು.
ಕಾಲೇಜಿನ ಚೇರ್ಮನ್ ಕೆ.ಆರ್. ಭಂಡಾರಿ, ಮಹಿಳಾ ವೇದಿಕೆ, ಕರ್ನಾಟಕ ಸಂಘ, ಎನ್‌ಸಿಸಿ, ಎನ್‌ಎಸ್‌ಎಸ್ ಸೇರಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ರವೀಂದ್ರ ಪಟ್ಟಣಶೆಟ್ಟಿ, ವಿಠ್ಠಲಸಾ ಕಾವಡೆ, ಪ್ರಾಚಾರ್ಯ ಡಾ. ಎನ್.ವೈ. ಬಡಣ್ಣವರ, ಪ್ರೊ. ಸಿದ್ದಲಿಂಗಪ್ಪ ಬರಗುಂಡಿ, ಬಿ.ಯು. ಹಣಗಿ, ಸಿದ್ದರಾಮಯ್ಯ ಪುರಾಣಿಮಠ, ಡಾ. ಸಣ್ಣವೀರಣ್ಣ ದೊಡ್ಡಮನಿ ಸೇರಿ ಬೋಧಕ, ಸಿಬ್ಬಂದಿ ಉಪಸ್ಥಿತರಿದ್ದರು.