ಲೋಕಾಪುರದ ಎಕ್ಸಲೆಂಟ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಪಿಎಸ್‌ಐ ಕೆ.ಬಿ. ಜಕ್ಕನ್ನವರ, ಸಂಸ್ಥೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಆರ್. ಪಂಚಕಟ್ಟಿಮಠ, ಎಸ್.ಬಿ. ಕಷ್ಣಗೌಡರ ಮತ್ತಿತರರಿದ್ದರು. 
ಬಾಗಲಕೋಟೆ

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಚುನಾವಣೆ ಸಹಕಾರಿ

ದತ್ತಾತ್ರೇಯ ಪಿ ಕುಲಕರ್ಣಿ

ಪ್ರಮುಖ ಮುಖ್ಯಾಂಶಗಳು

  • ಪಿಎಸ್‌ಐ ಕೆ.ಬಿ. ಜಕ್ಕನ್ನವರ ಅಭಿಮತ
  • ಪ್ರತಿನಿಧಿಗಳ ಅಧಿಕಾರ ಪದಗ್ರಹಣ ಸಮಾರಂಭ
  • ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಶಾಲಾ ಸಂಸತ್ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತದೆ.
ಲೋಕಾಪುರ: ನಗರದ ಎಕ್ಸಲೆಂಟ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳ ಅಧಿಕಾರ ಪದಗ್ರಹಣ ಸಮಾರಂಭ ಶನಿವಾರ ವಿಜಂಭಣೆಯಿಂದ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಿಎಸ್‌ಐ ಕೆ.ಬಿ. ಜಕ್ಕನ್ನವರ, ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಶಾಲಾ ಸಂಸತ್ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತದೆ. ಇಂದಿನ ವಿದ್ಯಾರ್ಥಿಗಳೇ ನಾಳಿನ ನಾಯಕರು ಹಾಗೂ ಆದರ್ಶ ನಾಗರಿಕರಾಗಲು ಇಂತಹ ಚಟುವಟಿಕೆಗಳು ಪೂರಕವಾಗುತ್ತವೆ ಎಂದು ಹೇಳಿದರು.
ಸಂಸ್ಥೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಆರ್. ಪಂಚಕಟ್ಟಿಮಠ ಅವರು ನೂತನ ಸಂಸತ್ ಸದಸ್ಯರಿಗೆ ಬ್ಯಾಡ್ಜ್, ಟೋಪಿ ಹಾಗೂ ಧ್ವಜ ನೀಡಿ ಅಧಿಕಾರ ಪದಗ್ರಹಣ ನೆರವೇರಿಸಿದರು. ಶಾಲೆಯ ಪ್ರಾಚಾರ್ಯೆ ವಿಜಯಲಲ್ಷ್ಮೀ ಪುರಾಣಿಕ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.
ಮುಖ್ಯ ಅತಿಥಿ ಎಸ್.ಬಿ. ಕಷ್ಣಗೌಡರ ಮಾತನಾಡಿ, ಸಾಧನೆಗೆ ನಿರಂತರ ಪರಿಶ್ರಮ, ಶಿಸ್ತು ಮತ್ತು ಸಕಾರಾತ್ಮಕ ಚಿಂತನೆ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಗುರಿ ಸಾಧನೆಗೆ ದಢ ಸಂಕಲ್ಪ ಹೊಂದಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಿಂದ ನತ್ಯ, ಗಾಯನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ವಿವಿಧ ವಿಭಾಗಗಳ ಮುಖ್ಯಸ್ಥರಾದ ಟಿ.ವಿ. ಹಳ್ಳಿ, ಎನ್.ಎಲ್. ಪಾಟೀಲ, ಎಸ್.ಎಂ. ರಾಮದುರ್ಗ, ಅರುಣ ಚೌಡಕಿ ಹಾಗೂ ಇಮಾಮಡಂಗಿ ಉಪಸ್ಥಿತರಿದ್ದರು. ಪೂರ್ವಿ ಮತ್ತು ಪ್ರೇಕ್ಷಾ ನಿರೂಪಿಸಿದರು. ಅಂಗೀರಾ ಸ್ವಾಗತಿಸಿದರು. ಶ್ರೇಯಾ ವಂದಿಸಿದರು.