ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮಂಗಳವಾರ ಭೇಟಿ ನೀಡಿದ ಜಿಪಂ ಸಿಇಒ ಗಜಾನನ ಬಾಲೆ ಅವರು ಶೈಕ್ಷಣಿಕ ಚಟುವಟಿಕೆ ಪರಿಶೀಲಿಸಿದರು.
ಬಾಗಲಕೋಟೆ: ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬAಽಸಿದAತೆ ಜನರಿಗೆ ಸೇವೆಯನ್ನು ಸರಿಯಾಗಿ ಮತ್ತು ಪಾರದರ್ಶಕವಾಗಿ ತಲುಪಿಸಿ ಎಂದು ಜಿಪಂ ಸಿಇಒ ಗಜಾನನ ಬಾಲೆ ತಿಳಿಸಿದರು.
ತಾಲೂಕಿನ ರಾಂಪುರ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಗ್ರಾಮ ಪಂಚಾಯಿತಿ, ಡಿಜಿಟಲ್ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು.
ಪಂಚಾಯಿತಿಯ ಆಡಳಿತಾತ್ಮಕ ಕಾರ್ಯನಿರ್ವಹಣೆ, ಸಾರ್ವಜನಿಕ ಸೇವೆಗಳ ವಿತರಣೆ, ಸ್ವಚ್ಛತೆ, ತೆರಿಗೆ ಸಂಗ್ರಹಣೆ, ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ದಾಖಲೆಗಳ ನಿರ್ವಹಣೆಯನ್ನು ಪರಿಶೀಲಿಸಿ ಅಽಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಗ್ರಾಮಸ್ಥರಿಗೆ ಗುಣಮಟ್ಟದ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವಂತೆ ತಿಳಿಸಿದರು.
ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಲಭ್ಯವಿರುವ ಸೌಲಭ್ಯಗಳು, ಕಂಪ್ಯೂಟರ್ ವ್ಯವಸ್ಥೆ, ಇಂಟರ್ನೆಟ್ ಸಂಪರ್ಕ ಹಾಗೂ ಓದುಗರ ಬಳಕೆಯ ಕುರಿತು ಮಾಹಿತಿ ಪಡೆದು, ಡಿಜಿಟಲ್ ಗ್ರಂಥಾಲಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸುವಂತೆ ಪ್ರೋತ್ಸಾಹಿಸಿದರು.
ರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ, ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಆರೋಗ್ಯ ಸೇವೆಗಳು, ವೈದ್ಯಕೀಯ ಸಿಬ್ಬಂದಿಯ ಹಾಜರಾತಿ, ಔಷಧಗಳ ಲಭ್ಯತೆ, ಸ್ವಚ್ಛತೆ ಹಾಗೂ ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಅಽಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ವಾತಾವರಣ, ಮೂಲಸೌಕರ್ಯ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಮಧ್ಯಾಹ್ನ ಉಪಾಹಾರ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ ಶಾಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಂಪೌAಡ್ ಗೋಡೆ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಯೊಳಗೆ ಪೂರ್ಣಗೊಳಿಸುವಂತೆ ಸಂಬAತ ಅಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಪಂಚಾಯಿತಿ ಸೇವೆಗಳ ಗುಣಮಟ್ಟವನ್ನು ಮತ್ತಷ್ಟು ಉತ್ತಮಗೊಳಿಸಲು ಜಿಲ್ಲಾಡಳಿತ ಬದ್ಧವಾಗಿದ್ದು, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಹೇಳಿದರು.