ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಈಚೆಗೆ ಎಡಿಸಿ ಅಶೋಕ ತೇಲಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ೩ ಮತ್ತು ೪ನೇ ತ್ರೆÊಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿತು. ವಿವಿಧ ಇಲಾಖೆ ಅಽಕಾರಿಗಳು ಇದ್ದರು.
ಬಾಗಲಕೋಟೆ: ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತ ಮತ್ತು ಬಾಽತ ಮಕ್ಕಳಿಗೆ ಪೌಷ್ಠಿಕ ಆಹಾರ, ವೈದ್ಯಕೀಯ ವೆಚ್ಚ ಹಾಗೂ ಇತರೆ ವೆಚ್ಚಕ್ಕಾಗಿ ಪ್ರತಿ ಮಾಹೆ ೨ ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಆರ್ಥಿಕ ಸಹಾಯಧನ ನೀಡಲಾಗುತ್ತಿದೆ. ೨೦೨೫-೨೬ನೇ ಸಾಲಿನಲ್ಲಿ ಒಟ್ಟು ೩೫೬ ಮಕ್ಕಳಿಗೆ ಈ ಸೌಲಭ್ಯ ವಿತರಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ಡಾ.ವೀಣಾ ಎಂ ತಿಳಿಸಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಅವರ ಆಧ್ಯಕ್ಷೆತೆಯಲ್ಲಿ ಈಚೆಗೆ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ೩ ಮತ್ತು ೪ನೇ ತ್ರೆÊಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಸಭೆಗೆ ಮಾಹಿತಿ ನೀಡಿದರು.
ಮಕ್ಕಳ ಪಾಲನಾ ಸಂಸ್ಥೆಗಳಿAದ ಬಿಡುಗಡೆಯಾದ ಮಕ್ಕಳು, ಅನಾಥ, ಏಕಪೋಷಕ, ಜೈಲಿನಲ್ಲಿರುವ ಪಾಲಕರ ಮಕ್ಕಳಿಗೆ ಹಾಗೂ ಇತರೆ ಮಕ್ಕಳಿಗೆ ಕುಟುಂಬದ ವಾತಾವರಣ ದಲ್ಲಿ ಬೆಳೆಯಲು ಹಾಗೂ ವಿದ್ಯಾಭ್ಯಾಸ ಮುಂದುವರೆಸಲು ಮಾಸಿಕ ೪ ಸಾವಿರ ರೂ.ಗಳಂತೆ ಡಿಬಿಟಿ ಮೂಲಕ ಪ್ರಾಯೋಜಕತ್ವ ಯೋಜನೆಯಡಿ ಆರ್ಥಿಕ ಸಹಾಯಧನ ನೀಡಲಾಗುವುದು.
೨೦೨೫-೨೬ನೇ ಸಾಲಿನ ೪ನೇ ತ್ರೆÊಮಾಸಿಕದಲ್ಲಿ ಒಟ್ಟು ೧೬೯ ಮಕ್ಕಳಿಗೆ ಆರ್ಥಿಕ ಸೌಲಭ್ಯ ನೀಡಲಾಗಿದೆ ಎಂದು ತಿಳಿಸಿದರು. ಹಾಗೂ ೪೨೭ ಮಕ್ಕಳಿಗೆ ಅನುದಾನ ಬೇಡಿಕೆಗೆ ಕೇಂದ್ರ ಕಛೇರಿಗೆ ಸಲ್ಲಿಸಲಾಗಿದೆ. ೨೦೨೬-೨೭ನೇ ಸಾಲಿಗೆ ೩೨೪ ಮಕ್ಕಳನ್ನು ಸಭೆಯಲ್ಲಿ ಅನುಮೋದಿಸಲಾಯಿತು ಎಂದು ವಿವರಿಸಿದರು.
ಈ ತ್ರೆÊಮಾಸಿಕದಲ್ಲಿ ಒಟ್ಟು ೫೮ ತರಬೇತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಆಗ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಅವರು, ಪ್ರಾಢಶಾಲಾ ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದರು.
ಪೋಕ್ಸೋ ಕಾಯ್ದೆ-೨೦೧೨, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ಅಭಯಾ ನಿಽ ಯೋಜನೆಯಡಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಧನ ಒದಗಿಸಲಾಗುವುದು. ೩ ಮತ್ತು ೪ನೇ ತ್ರೆÊಮಾಸಿಕದಲ್ಲಿ ಒಟ್ಟು ೨೮ ಮಕ್ಕಳಿಗೆ ಸಹಾಯಧನ ನೀಡಲಾಗಿದೆ ಎಂದು ತಿಳಿಸಿದರು.
ಬಾಲ ನ್ಯಾಯಮಂಡಳಿಯ ಸದಸ್ಯೆ ಸುವರ್ಣಾ ನಾಗಠಾಣ, ಬಾಲನ್ಯಾಯ ಮಂಡಳಿ ಮುಂದೆ ದಾಖಲಾದ ಪ್ರಕರಣಗಳ ಬಗ್ಗೆ ವಿವರಿಸಿ, ಒಟ್ಟು ೪೦ ಪ್ರಕರಣಗಳು ಬಾಕಿ ಇವೆ ಎಂದು ಸಭೆಗೆ ತಿಳಿಸಿದರು. ಬಾಕಿ ಉಳಿಯಲು ಕಾರಣವೇನೆಂದು ಎಡಿಸಿ ಅವರು ಪ್ರಶ್ನಿಸಿದಾಗ, ಚಾರ್ಜ್ ಶೀಟ್ ಸಲ್ಲಿಕೆಯಾಗದಿರುವ ಕಾರಣ ಬಾಕಿ ಉಳಿದಿವೆ ಎಂದು ಸಭೆಯ ಗಮನಕ್ಕೆ ತಂದರು.
೧೮ ವರ್ಷ ಪೂರ್ಣಗೊಂಡು ಮಕ್ಕಳ ಪಾಲನಾ ಸಂಸ್ಥೆಗಳಿAದ ಬಿಡುಗಡೆಯಾದ ಮಕ್ಕಳಿಗೆ ಉನ್ನತ ವ್ಯಾಸಂಗ ಅಥವಾ ವೃತ್ತಿ ತರಬೇತಿ ಪಡೆಯಲು ಪ್ರತೀ ಮಾಹೆ ರೂ.೫ ಸಾವಿರದಂತೆ ಕನಿಷ್ಠ ೩ ವರ್ಷಗಳ ಕಾಲ ಡಿಬಿಟಿ ಮೂಲಕ ಆರ್ಥಿಕ ಸಹಾಯಧನ ನೀಡಲಾಗುವುದು ಎಂದು ಸಭೆಗೆ ತಿಳಿಸಿದರು. ಇದಕ್ಕೆ ಅಪರ ಜಿಲ್ಲಾಽಕಾರಿಗಳು ಮಕ್ಕಳ ಪೂರ್ಣ ವಿಳಾಸ, ವಿದ್ಯಾಭ್ಯಾಸದ ವಿವರ ಸಲ್ಲಿಸಲು ತಿಳಿಸಿದರು.
ಕೋವಿಡ್-೧೯ ದಿಂದ ತಂದೆ-ತಾಯಿಯನ್ನು ಕಳೆದುಕೊಂಡ ೧೮ ವರ್ಷದೊಳಗಿನ ಮಕ್ಕಳಿಗೆ ವಿಸ್ತÈತ ಕುಟುಂಬದ ಆರೈಕೆಯಲ್ಲಿರುವ ಮಕ್ಕಳಿಗೆ ಪ್ರತಿ ತಿಂಗಳು ೩,೫೦೦ ರೂ.ದಂತೆ ಡಿಬಿಟಿ ಮೂಲಕ ಆರ್ಥಿಕ ಸಹಾಯಧನ ನೀಡಲಾಗುವುದು. ಒಟ್ಟು ೦೨ ಮಕ್ಕಳಿಗೆ ಆರ್ಥಿಕ ಸಹಾಯಧನ ನೀಡಲಾಗಿದೆ ಎಂದು ಸಭೆಗೆ ವಿವರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಽಕಾರಿಗಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬಂದ ಪ್ರಕರಣಗಳ ಬಗ್ಗೆ ವಿವರಿಸಿದರು. ಒಟ್ಟು ೧೨೩ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ೭೪ ಪ್ರಕರಣಗಳು ಬಾಕಿ ಇವೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಮಂಜುನಾಥ ಡಿ, ಜಿಲ್ಲಾ ಜಿಲ್ಲಾ ಕಾರ್ಮಿಕ ಅಽಕಾರಿ ರಮೇಶ ಸುಂಬಡ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಽಕಾರಿ ಹಿರೇಮಠ ಸೇರಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.