ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕದಂಬ ಸೇನೆ ಅಧ್ಯಕ್ಷ ಬೇಕ್ರಿ ರಮೇಶ ಕೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖಂಡರಾದ ಎನ್.ಸಿ.ಕಾಂಬಳೆ, ರಾಮು ಚಿಕ್ಕೆಗೌಡನದೊಡ್ಡಿ, ನಿಂಗಪ್ಪ ಇಸರೆಡ್ಡಿ ಇದ್ದರು. 
ಬಾಗಲಕೋಟೆ

ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ

ಬಾಗಲಕೋಟೆ: ಮತಬ್ಯಾಂಕ ಇರುವ ಶಾಲೆಗಳಿಗೆ ಮಾತ್ರ ಅನುದಾನ ನೀಡುವ ಮೂಲಕ ಹೀನ ಸಂಸ್ಕೃತಿ ಸರ್ಕಾರ ಮಾಡುತ್ತಿದೆ. ರಾಜ್ಯದ ಪ್ರತಿಯೊಂದು ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಅನುದಾನ ರಾಜ್ಯ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಕದಂಬ ಸೇನೆ ಅಧ್ಯಕ್ಷ ಬೇಕ್ರಿ ರಮೇಶ ಕೆ ಆರೋಪಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಭಾಷಿಕರ ದಾಳಿಗೆ ನಲುಗುತ್ತಿರುವ ಕನ್ನಡಿಗರ ಅಸ್ಮಿತೆ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಸರ್ಕಾರಿ ಶಾಲೆಗಳ ಅವನತಿಗೆ ರಾಜ್ಯ ಸರ್ಕಾರವೇ ಕಾರಣವಾಗುತ್ತಿದೆ. ಕನ್ನಡಿಗರ ಉದ್ಯೋಗದಾತೆ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ ಮಾಡಬೇಕು. ಬಾಂಗ್ಲಾ ದೇಶದ ಮುಸ್ಲಿಂ ಅಕ್ರಮವಾಗಿ ನೆಲೆಸಿದ್ದಾರೆ. ಶಾಂತಿಯ ತೋಟಕ್ಕೆ ನೆಮ್ಮದಿ ಮುಂದು ವರೆಯಲು ಇವರನ್ನು ಹೊರಗೆ ಹಾಕಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಶಾಲೆಗಳ ಅವನತಿಗೆ ರಾಜ್ಯ ಸರ್ಕಾರ ನಿರ್ಲಕ್ಷ÷್ಯದಿಂದ ಮುಚ್ಚುತ್ತಿವೆ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳ ಭವಿಷ್ಯ ಮಣ್ಣು ಪಾಲು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಅನುದಾನ ಕೊರತೆ ಮಕ್ಕಳ ಸಂಖ್ಯೆ ಕಡಿಮೆ ಅಂತ ಏಳು ಸಾವಿರ ಶಾಲೆಗಳನ್ನು ಮುಚ್ಚಲಾಗಿದೆ. ಸರ್ಕಾರ ಪರೋಕ್ಷವಾಗಿ ಖಾಸಗಿ ಶಾಲೆ, ಕಾಲೇಜು ಪ್ರೋತ್ಸಾಹ ನೀಡುತ್ತಿವೆ ಎಂದು ದೂರಿದರು.
೨೦೧೭ ರಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯಲ್ಲಿ ರಾಜ್ಯ ಸರ್ಕಾರಕ್ಕೆ ೧೪ ಅಂಶಗಳನ್ನು ಶಿಫಾರಸ್ಸು ಮಾಡಲಾಗಿದೆ. ಅವುಗಳನ್ನು ಅನುಷ್ಠಾನಗೊಳಿಸಬೇಕು. ಕೇಂದ್ರ ಸರ್ಕಾರಕ್ಕೂ ಇವುಗಳ ಬಗ್ಗೆ ಗಮನಕ್ಕೆ ತರಬೇಕು. ಕಳೆದ ೯ ವರ್ಷದಿಂದ ಪರಿಷ್ಕೃತ ವರದಿ ಅನುಷ್ಠಾನಕ್ಕೆ ಬರುತ್ತಿಲ್ಲ. ಉದ್ಯೋಗದಲ್ಲಿ ಕನ್ನಗಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಎಲ್ಲ ಸರ್ಕಾರಗಳು ನಿರ್ಲಕ್ಷ÷್ಯ ವಹಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಪರ ಸಂಘಟನೆಗಳ ಹೋರಾಟ ಮಾಡುತ್ತಲೇ ಬಂದಿವೆ. ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ನೀಡಲು ಮೀನಾಮೇಷ ಎಣಿಸುತ್ತಾ ಬರುತ್ತಿವೆ. ಇದಕ್ಕೆ ಕನ್ನಡ ರಾಜಕೀಯ ಇಚ್ಛಾಶಕ್ತಿ ಕೊರತೆ ಕಾರಣ ಎಂದು ಖೇದ ವ್ಯಕ್ತಪಡಿಸಿದರು.
ಮುಖಂಡರಾದ ಎನ್.ಸಿ.ಕಾಂಬಳೆ, ರಾಮು ಚಿಕ್ಕೆಗೌಡನದೊಡ್ಡಿ, ನಿಂಗಪ್ಪ ಇಸರೆಡ್ಡಿ ಇದ್ದರು.