ಬನಹಟ್ಟಿಯ ಎಸ್‌ಟಿಸಿ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಮಾರ್ಗದರ್ಶನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ಪ್ರಾಚಾರ್ಯ ಡಾ.ಜಿ.ಆರ್. ಜುನ್ನಾಯ್ಕರ್, ಗೀತಾ ಸಜ್ಜನವರ, ಡಾ. ಪ್ರಕಾಶ ಕೆಂಗನಾಳ, ಡಾ. ಎಸ್.ಕೆ. ವರದಾಯಿ ಇತರರಿದ್ದರು.
- ಪ್ರಾಚಾರ್ಯ ಡಾ.ಜಿ.ಆರ್.ಜುನ್ನಾಯ್ಕರ್ ಹೇಳಿಕೆ
- ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ
ರಬಕವಿ/ಬನಹಟ್ಟಿ: ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಮತ್ತು ತಮ್ಮ ಗುರಿಯನ್ನು ತಲುಪಲು ಉಪನ್ಯಾಸಕರ ಮಾರ್ಗದರ್ಶನ ಅಗತ್ಯವಾಗಿದೆ ಎಂದು ಬನಹಟ್ಟಿ ಎಸ್‌ಟಿಸಿ ಕಾಲೇಜ್ ಪ್ರಾಚಾರ್ಯ ಡಾ.ಜಿ.ಆರ್.ಜುನ್ನಾಯ್ಕರ್ ತಿಳಿಸಿದರು.
ಬನಹಟ್ಟಿಯ ಎಸ್‌ಟಿಸಿ ಕಾಲೇಜ್‌ನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಶನಿವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಮಾರ್ಗದರ್ಶನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ವಾಣಿಜ್ಯ ವಿಭಾಗದಲ್ಲಿ ಸಾಕಷ್ಟು ಅವಕಾಶಗಳಿದ್ದು, ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಜವಾಬ್ದಾರಿಗಳು ಮುಖ್ಯವಾಗಿವೆ. ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗುವ ಎಲ್ಲ ಸೌಲಭ್ಯಗಳನ್ನು ಮಹಾವಿದ್ಯಾಲಯದಿಂದ ಪಡೆದುಕೊಳ್ಳಬಹುದಾಗಿದೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಮತ್ತು ಎನ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿಭಾಗದ ಮುಖ್ಯಸ್ಥೆ ಪ್ರೊ. ಗೀತಾ ಸಜ್ಜನವರ ಮಾತನಾಡಿ, ಸಾಧಕ ವಿದ್ಯಾರ್ಥಿಗಳು ಮುಂಬರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ. ವಿದ್ಯಾರ್ಥಿಗಳು ಗ್ರಂಥಾಲಯದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಮಹಾವಿದ್ಯಾಲಯದಲ್ಲಿರುವ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.
ಐಕ್ಯೂಎಸಿ ಸಂಯೋಜಕ ಡಾ. ಪ್ರಕಾಶ ಕೆಂಗನಾಳ, ಡಾ. ಎಸ್.ಕೆ. ವರದಾಯಿ, ವಿ.ವೈ. ಪಾಟೀಲ, ಸುನಂದಾ ಭಜಂತ್ರಿ, ಬಸವರಾಜ ಬೀಳಗಿ, ಮಯೂರಿ ಮಂಡಿ, ರಶ್ಮಿ ಮುನ್ನೊಳ್ಳಿ ಇತರರಿದ್ದರು. ಸಾವಿತ್ರಿ ಭಜಂತ್ರಿ ಪ್ರಾರ್ಥಿಸಿದರು. ವಿಶ್ವಜ ಕಾಡದೇವರ ಸ್ವಾಗತಿಸಿದರು. ರಶ್ಮಿ ಕೊಕಟನೂರ ಸಾಧಕರನ್ನು ಪರಿಚಯಿಸಿದರು. ವಿಜಯಲಕ್ಷ್ಮೀ ಮಾಚಕನೂರ ನಿರೂಪಿಸಿದರು. ಶ್ವೇತಾ ಮಠದ ವಂದಿಸಿದರು.