ಹುನಗುಂದ ತಹಸೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ರಾಮನಗೌಡ ಬೆಳ್ಳಿಹಾಳ, ದ್ಯಾವಪ್ಪ ಪೈಲ, ಮರಿಗೌಡ ದೇವರಡ್ಡಿ , ವಿ.ಎನ್. ಪಾಟೀಲ ,ಗ್ರೇಡ್-2 ತಹಸೀಲ್ದಾರ್ ಮಹೇಶ ಸಂದಿಗವಾಡ ಇದ್ದರು. 
ಬಾಗಲಕೋಟೆ

ಮಾನವ ಸಮುದಾಯಕ್ಕೆ ಆದರ್ಶಪ್ರಾಯ

ಶಿಲ್ಪಾ ಪವಾರ

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿಕೆ
  • ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ
ಹುನಗುಂದ : ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
ನಗರದ ತಹಸೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಮಲ್ಲಮ್ಮ ಮಾನವ ಸಮುದಾಯಕ್ಕೆ ಆದರ್ಶಪ್ರಾಯ ಜೀವನವನ್ನು ಕಟ್ಟಿಕೊಟ್ಟಿದ್ದು, ಅವರ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ರಡ್ಡಿ ಸಮಾಜದ ಉಪಾಧ್ಯಕ್ಷ ಎಂ.ಬಿ. ದೇವರಡ್ಡಿ ಮಾತನಾಡಿ, ಅನೇಕ ಸಂಕಷ್ಟಗಳನ್ನು ಎದುರಿಸಿದರೂ ಮಲ್ಲಮ್ಮ ಅವರು ಧೈರ್ಯ ಮತ್ತು ಸಹನೆಯಿಂದ ಬದುಕಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.
ರಾಮನಗೌಡ ಬೆಳ್ಳಿಹಾಳ, ದ್ಯಾವಪ್ಪ ಪೈಲ, ಮರಿಗೌಡ ದೇವರಡ್ಡಿ, ವಿ.ಎನ್. ಪಾಟೀಲ, ಗ್ರೇಡ್-2 ತಹಸೀಲ್ದಾರ್ ಮಹೇಶ ಸಂದಿಗವಾಡ, ಶಿರಸ್ತೇದಾರ ಶ್ರವಣಕುಮಾರ ಮುಂಡೇವಾಡಿ ಸೇರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.