ಬಾಗಲಕೋಟೆ ನವನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಗಲಕೋಟೆ ಉಪ ಚುನಾವಣೆಯ ಪೂರ್ವ ಭಾವಿ ಸಭೆ ಉದ್ದೇಶಿಸಿ ಉಪ ಚುನಾವಣೆ ಬಿಜೆಪಿ ಉಸ್ತುವಾರಿ ಅರುಣ ಶಹಾಪುರ ಮಾತನಾಡಿದರು. ಸಂಸದರಾದ ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ನಾರಾಯಣಸಾ ಭಾಂಡಗೆ, ಮಾಜಿ ಶಾಸಕ ವೀರಣ್ಣ ಚರಂತಿಮಠ ಇತರರಿದ್ದರು.
- ಉಪ ಚುನಾವಣೆ ಹಿನ್ನೆಲೆ
- ಬಿಜೆಪಿ ಪೂರ್ವಭಾವಿ ಸಭೆ
- ಉಸ್ತುವಾರಿ ಅರುಣ ಶಹಾಪುರ ಹೇಳಿಕೆ
ಬಾಗಲಕೋಟೆ: ಪ್ರಸ್ತುತ ಜರುಗಲಿರುವ ಬಾಗಲಕೋಟೆಯ ಉಪ ಚುನಾವಣೆ ಗೆಲುವು ಮುಂದಿನ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಉಪ ಚುನಾವಣೆ ಬಿಜೆಪಿ ಉಸ್ತುವಾರಿ ಅರುಣ ಶಹಾಪುರ ಹೇಳಿದರು.
ನವನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಗಲಕೋಟೆ ಉಪ ಚುನಾವಣೆಯ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಬಾಗಲಕೋಟೆಯಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಇಲ್ಲಿ ಬಿಜೆಪಿ ಭದ್ರಕೋಟೆಯಾಗಿದೆ. ಅದನ್ನು ಮತ್ತೆ ಮರುಸ್ಥಾಪಿಸುವ ಸಂಕಲ್ಪ ನಮ್ಮ ಮುಂದೆ ಇದೆ. ಈ ಉಪ ಚುನಾವಣೆಯಲ್ಲಿನ ಬಿಜೆಪಿ ಗೆಲವು ಮುಂದಿನ 2028ರ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಬಾಗಲಕೋಟೆಯ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಕಷ್ಟು ಅವಕಾಶಗಳು ಇವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಎಲ್ಲಿ ನೋಡಿದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ. ಬಾಗಲಕೋಟೆಯಲ್ಲಿ ನಮ್ಮ ಗೆಲವು ಶತಸಿದ್ಧ ಎಂದು ತಿಳಿಸಿದರು.
ಮಾಜಿ ಸಚಿವ ಬಿಜೆಪಿಯ ರಾಜ್ಯ ಉಪಾಧ್ಯಕ್ಷರಾದ ಮುರಗೇಶ ನಿರಾಣಿ ಮಾತನಾಡಿ, ಜಿಲ್ಲೆಯಲ್ಲಿ ನಾವು ಎಲ್ಲ ನಾಯಕರೂ ಒಂದಾಗಿದ್ದೇವೆ. ಎಲ್ಲರೂ ಕೂಡಿ ಬಾಗಲಕೋಟೆ ಉಪ ಚುನಾವಣೆ ಬಿಜೆಪಿ ಗೆಲ್ಲಿಸೋಣ. ಮತ್ತೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಸಂಸದ ಪಿ.ಸಿ. ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿದರು. ಸಭೆಯಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಜಮಖಂಡಿ ಶಾಸಕ ಜಗದೀಶ ಗುಡುಗುಂಟಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ಜಿ.ಎಸ್.ನ್ಯಾಮಗೌಡ, ರಾಜಶೇಖರ ಶೀಲವಂತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ, ಅಶೋಕ ಲಿಂಬಾವಳಿ, ಬಸವರಾಜ ಯಂಕಂಚಿ ಉಪಸ್ಥಿತರಿದ್ದರು.