ಮಧೋಳ ತಾಲೂಕಿನ ನಿಂಗಾಪುರದಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆರ್.ಬಿ.ತಿಮ್ಮಾಪೂರ ಭೂಮಿ ಪೂಜೆ ನೆರವೇರಿಸಿದರು. ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ತಾ.ಪಂ ಇಒ ರಾಘವೇಂದ್ರ ಕಳ್ಳಿಮನಿ, ಎಇಇ ಸಿ.ಎಂ. ಮಾಚನೂರು ಇದ್ದರು.
- ಶಾಸಕ ಆರ್.ಬಿ. ತಿಮ್ಮಾಪೂರ ಹೇಳಿಕೆ
- ನಿಂಗಾಪುರದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಮುಧೋಳ: ಗ್ರಾಮೀಣ ಭಾಗದ ರೈತರಿಗೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ತಾಲೂಕಿನ ನಿಂಗಾಪೂರ ಗ್ರಾಮದಲ್ಲಿ ಶನಿವಾರ 30 ಲಕ್ಷ ರೂ. ವೆಚ್ಚದ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಅತ್ಯಗತ್ಯ. ಯಾವುದೇ ಕಾರಣಕ್ಕೂ ಕಾಮಗಾರಿಯಲ್ಲಿ ಲೋಪದೋಷಗಳು ಉಂಟಾಗಬಾರದು. ನಿರ್ಮಾಣದ ಗುಣಮಟ್ಟದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡದೆ, ಜನರ ಹಿತಾಸಕ್ತಿಯೇ ನಮಗೆ ಮುಖ್ಯವಾಗಿರಬೇಕು ಎಂದು ಖಡಕ್ಕಾಗಿ ಎಚ್ಚರಿಸಿದರು.
ಈ ಹೊಸ ರಸ್ತೆಯು ಗ್ರಾಮದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯದ ಪ್ರಯಾಣಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ. ಗ್ರಾಮದ ಮೂಲಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಇದೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು.
ತಾ.ಪಂ ಇಒ ರಾಘವೇಂದ್ರ ಕಳ್ಳಿಮನಿ, ಎಇಇ ಸಿ.ಎಂ. ಮಾಚನೂರು, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಮುಖಂಡರಾದ ದುಂಡಪ್ಪ ಹೊರಡ್ಡಿ, ಭೀಮಪ್ಪ ಕೆಂಚರಡ್ಡಿ, ನಾಗಪ್ಪ ಮಾನೋಮಿ, ಮಲ್ಲಪ್ಪ ಬದನಿಕಾಯಿ, ಶಂಕರಪ್ಪ ಜಿಡ್ಡಿಮನಿ, ವೆಂಕಪ್ಪ ಹುಣಸಿಕಟ್ಟಿ, ಪ್ರಕಾಶ ಹೊಸಮನಿ ಸೇರಿ ಉಪಸ್ಥಿತರಿದ್ದರು.