ಬಾಗಲಕೋಟೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದಿರುವ ಎಸ್‌ಐಆರ್ ತರಬೇತಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾಽಕಾರಿ ಸಂಗಪ್ಪ ಅವರು ಅಽಕಾರಿಗಳಿಗೆ ಮಾರ್ಗದರ್ಶನ ನೀಡಿದರು.  
ಬಾಗಲಕೋಟೆ

ಎಸ್‌ಐಆರ್ ಪ್ರಕ್ರಿಯೆ ಯಶಸ್ವಿಗೊಳಿಸಿ

ಸಂತೋಷ ದೇಶಪಾಂಡೆ
ಬಾಗಲಕೋಟೆ: ಮತದಾರರ ಪಟ್ಟಿಯು ಚುನಾವಣಾ ಪ್ರಕ್ರಿಯೆಯ ಮೂಲಾಧಾರವಾಗಿದೆ. ಹೀಗಾಗಿ ಅರ್ಹ ಮತದಾರರ ಸೇರ್ಪಡೆ ಹಾಗೂ ಮೃತ ಮತ್ತು ಸ್ಥಳಾಂತರಗೊAಡಿರುವ ಮತದಾರರ ಹೆಸರನ್ನು ಕೈಬಿಡುವುದು ಸೇರಿದಂತೆ ಎಲ್ಲ ಕಾರ್ಯಗಳನ್ನು ನಿಯಮಾನುಸಾರ ಮತ್ತು ನಿಖರವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಅವರು ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾದ್ಯಂತ ಜೂನ್ ೩೦ ರಿಂದ ಪ್ರಾರಂಭವಾಗುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಾಗಾರದ ಪ್ರಕ್ರಿಯೆಯನ್ನು ಗುರುವಾರ ಜಿಲ್ಲಾಽಕಾರಿ ಸಂಗಪ್ಪ ಅವರು ವೀಕ್ಷಣೆ ಮಾಡಿ, ಮಾರ್ಗದರ್ಶನ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕವಾಗಿ ಹಾಗೂ ದೋಷರಹಿತವಾಗಿ ಕೈಗೊಳ್ಳುವ ಉದ್ದೇಶದಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ಬೂತ ಮಟ್ಟದ ಅಽಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬೂತ ಮಟ್ಟದ ಏಜೆಂಟರಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಇದರ ಪ್ರಯೋಜನವನ್ನು ಸಂಪೂರ್ಣವಾಗಿ ಪಡೆದುಕೊಂಡು ಪರಿಷ್ಕರಣ ಕಾರ್ಯವನ್ನು ಯಶಸ್ವಿಗೊಳಿಸಲು ಸಲಹೆ ನೀಡಿದರು.
ಜೂನ್ ೩೦ ರಿಂದ ಜುಲೈ ೨೯ ವರೆಗೆ ಒಂದು ತಿಂಗಳು ಕಾಲ ನಡೆಯಲಿರುವ ಮನೆ ಮನೆ ಸಮೀಕ್ಷೆ ವೇಳೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡುವ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪ ಉಂಟಾಗದAತೆ ಅಽಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಿಗದಿತ ಅವಽಯೊಳಗೆ ಕಾರ್ಯ ಪೂರ್ಣಗೊಳಿಸಬೇಕೆಂದು ಹೇಳಿದರು.
ಬಾದಾಮಿ ನಗರದ ವೀರಪುಲಕೇಶಿ ಶಾಲೆಯ ಸಭಾಭವನ, ಹುನಗುಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನ ಹಾಗೂ ಬಾಗಲಕೋಟೆ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ನಡೆದ ಎಸ್‌ಐಆರ್ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಪ್ರಕ್ರಿಯೆ ವೀಕ್ಷಣೆ ಮಾಡಿದರು. ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಅವರು ಬೀಳಗಿ, ತೇರದಾಳ, ಮುಧೋಳ, ಜಮಖಂಡಿ ಹಾಗೂ ರಬಕವಿ-ಬನಹಟ್ಟಿಗೆ ಭೇಟಿ ನೀಡಿ ಎಸ್‌ಐಆರ್ ತರಬೇತಿ ಪ್ರಕ್ರಿಯೆ ವೀಕ್ಷಿಸಿದರು.