ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ಅಧ್ಯಕ್ಷ ಮಹೇಶ ಕಕರಡ್ಡಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಈಶ್ವರ ಕೋನಪ್ಪನವರ, ವೆಂಕಣ್ಣ ಶೇಷಪ್ಪನವರ, ನಕುಲ್ ಬೆಳ್ಳುಬ್ಬಿ, ಎಸ್.ಟಿ.ಬೆಳಕೊಪ್ಪದ ಇದ್ದರು. 
ಬಾಗಲಕೋಟೆ

ಮೇ ೩೦ ಹೇಮರಡ್ಡಿ ಮಲ್ಲಮ್ಮ ಜಯಂತ್ಯೋತ್ಸವ

ಬಾಗಲಕೋಟೆ: ನಗರದ ವಿದ್ಯಾಗಿರಿಯ ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ರಡ್ಡಿ ಸಮಾಜದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮೇ ೩೦ ರಂದು ನವನಗರದ ಕಲಾಭವನದಲ್ಲಿ ಹೇಮರಡ್ಡಿ ಮಲ್ಲಮ್ಮನ ೬೦೪ ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ಅಧ್ಯಕ್ಷ ಮಹೇಶ ಕಕರಡ್ಡಿ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಮರಡ್ಡಿ ಮಲ್ಲಮ್ಮನ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಶನಿವಾರ ಬೆಳಗ್ಗೆ ೧೦ ಗಂಟೆಗೆ ಕಲಾಭವನದಲ್ಲಿ ಎರೆಹೊಸಳ್ಳಿಯ ರಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮ ಮಾಜಿ ಶಾಸಕಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರಡ್ಡಿ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಮಹೇಶ ಕಕರಡ್ಡಿ ಅಧ್ಯಕ್ಷತೆ ವಹಿಸಲಿದ್ದು, ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಸದ್ಬೋಧನೆ ನೀಡುವರು ಎಂದು ತಿಳಿಸಿದರು.
ಶಾಸಕ ಉಮೇಶ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಶಾಸಕ ಜೆ.ಟಿ.ಪಾಟೀಲ, ವಿಧಾನ ಪರಿಷತ್ ಶಾಸಕರಾದ ಪಿ.ಎಚ್.ಪೂಜಾರ, ಪ್ರಕಾಶ ಹುಕ್ಕೇರಿ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮಾಜಿ ಸಚಿವರಾದ ಎಸ್.ಆರ್.ಪಾಟೀಲ, ಅಜಯಕುಮಾರ ಸರನಾಯಕ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ ಹಾಗೂ ದೊಡ್ಡನಗೌಡ ಪಾಟೀಲ, ಜಿಲ್ಲಾಽಕಾರಿ ಸಂಗಪ್ಪ ಮತ್ತು ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ನಂತರ ಅನ್ನ ಪ್ರಸಾದ ಸೇವೆ ನಡೆಯಲಿದ್ದು, ಮಧ್ಯಾಹ್ನ ೩ ಗಂಟೆಗೆ ಗದಗ ಕುಮಾರೇಶ್ವರ ಕೃಪಾಪೋಷಿತ ಪಂಡಿತ ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘದ ಕಲಾವಿದರಿಂದ ಶ್ರೀಕಂಠಶಾಸ್ತಿç ನಲವಡಿ ರಚನೆಯ ಸಂಪೂರ್ಣ ಹೇಮರಡ್ಡಿ ಮಲ್ಲಮ್ಮನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಈಶ್ವರ ಕೋನಪ್ಪನವರ, ವೆಂಕಣ್ಣ ಶೇಷಪ್ಪನವರ, ನಕುಲ್ ಬೆಳ್ಳುಬ್ಬಿ, ಎಸ್.ಟಿ.ಬೆಳಕೊಪ್ಪದ ಇದ್ದರು.