ಗುಳೇದಗುಡ್ಡ ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ ಬೊಮ್ಮಣ್ಣವರ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಜ್ಯೋತಿ ಗೋವನಕೊಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಅಂಬರೀಶ ಕವಡಿಮಟ್ಟಿ, ಮುಖ್ಯಾಧಿಕಾರಿ ಅಸ್ಲಾಂ ಮುಜಾವರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ ಇದ್ದರು. 
ಬಾಗಲಕೋಟೆ

ಕನ್ನಡ ನಮ್ಮೆಲ್ಲರ ಉಸಿರಾಗಲಿ

ಪ್ರಮುಖ ಮುಖ್ಯಾಂಶಗಳು

  • ಮಕ್ಕಳಲ್ಲಿ ಭಾಷಾಭಿಮಾನ ಬೆಳೆಸಿ
  • ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸಬೇಕು
ಗುಳೇದಗುಡ್ಡ: ಕನ್ನಡ ನಾಡು ನುಡಿಗೆ ತನ್ನದೇ ಆದ ಇತಿಹಾಸ, ಹಿರಿಮೆ, ಗರಿಮೆ ಇದೆ. ಕನ್ನಡ ನಾಡಿನ ಶ್ರೀಮಂತ ಭಾಷೆಯಾಗಿದ್ದು, ಕನ್ನಡ ಭಾಷೆ ನಮ್ಮ ಉಸಿರಾಗಲಿ. ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸಬೇಕು ಎಂದು ತಹಸೀಲ್ದಾರ ಎಸ್.ಎ್. ಬೊಮ್ಮಣ್ಣವರ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಕನ್ನಡ ರಾಜ್ಯೋತ್ಸವ ಹಾಗೂ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಹಲ್ಮಿಡಿ ಕನ್ನಡದ ಮೊದಲ ಶಾಸನವಾಗಿದೆ. ದೇಶ, ವಿದೇಶಗಳಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಾರೆ. ಕನ್ನಡ ನಮ್ಮ ಬದುಕಿನ ಭಾಗವಾಗಬೇಕು. ಕನ್ನಡ ಭಾಷೆಯ ಶ್ರೀಮಂತಿಕೆ ಮಕ್ಕಳಿಗೆ ತಿಳಿಸಬೇಕು. ಕನ್ನಡ ಭಾಷೆ ಉಳಿಸಿ ಬೆಳೆಸುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕು ಎಂದರು.
ಪುರಸಭೆ ಅಧ್ಯಕ್ಷೆ ಜ್ಯೋತಿ ಗೋವನಕೊಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಅಂಬರೀಶ ಕವಡಿಮಟ್ಟಿ, ಮುಖ್ಯಾಧಿಕಾರಿ ಅಸ್ಲಾಂ ಮುಜಾವರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ಕರವೇ ಅಧ್ಯಕ್ಷ ರವಿ ಅಂಗಡಿ, ಪುರಸಭೆ ಸದಸ್ಯರಾದ ಸಂತೋಷ ನಾಯನೇಗಲಿ, ಯಲ್ಲಪ್ಪ ಮನ್ನಿಕಟ್ಟಿ ಇದ್ದರು.