ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ನಡೆಯಿತು. ಡಾ. ಸುವರ್ಣ ಕುಲಕರ್ಣಿ, ಶಿವನಗೌಡರ ಪಾಟೀಲ, ಮಹೇಶ ಕೋಣಿ, ಡಾ. ಕುಸುಮಾ ಮಾಗಿ, ಪ್ರಮೋದಿನಿ ಬಳೂಲಮಟ್ಟಿ ಸೇರಿ ವೈದ್ಯಾಧಿಕಾರಿಗಳು ಇದ್ದರು. ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ನಡೆಯಿತು. ಡಾ. ಸುವರ್ಣ ಕುಲಕರ್ಣಿ, ಶಿವನಗೌಡರ ಪಾಟೀಲ, ಮಹೇಶ ಕೋಣಿ, ಡಾ. ಕುಸುಮಾ ಮಾಗಿ, ಪ್ರಮೋದಿನಿ ಬಳೂಲಮಟ್ಟಿ ಸೇರಿ ವೈದ್ಯಾಧಿಕಾರಿಗಳು ಇದ್ದರು.
ಬಾಗಲಕೋಟೆ

ಹಾವು ಕಡಿತದ ಸಾವು ತಡೆಗೆ ಕ್ರಮ

ವಿಜಯವಾಣಿ ಸುದ್ದಿಜಾಲ ಬಾಗಲಕೋಟೆ

ರೇಬೀಸ್ ನಿಯಂತ್ರಣಕ್ಕಾಗಿ ನಾಯಿ ಕಡಿತ ಪ್ರಕರಣಗಳಲ್ಲಿ ತಕ್ಷಣದ ಚಿಕಿತ್ಸೆ, ಲಸಿಕೆ ಹಾಗೂ ಅಗತ್ಯ ವೈದ್ಯಕೀಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸುವುದು, ಸಾರ್ವಜನಿಕರಲ್ಲಿ ರೇಬೀಸ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ರೋಗದ ಹರಡುವಿಕೆ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮ ಹಾಗೂ ಹಾವು ಕಡಿತದ ವಿಷಬಾಧೆ ತಡೆಗಟ್ಟುವಿಕೆ ಮತ್ತು ನಿಯಂತ್ರಣದ ರಾಷ್ಟ್ರೀಯ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ನಡುವೆ ಸಮನ್ವಯದಿಂದ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲು ಸೂಚನೆ ನೀಡಿದರು.

ಹಾವು ಕಡಿತದ ವಿಷಬಾಧೆಯಿಂದ ಸಂಭವಿಸಿದ ಸಾವುಗಳ ಬಗ್ಗೆಯೂ ಪರಿಶೀಲನೆ ನಡೆಸಿದ ಅವರು, ಹಾವು ಕಡಿತಕ್ಕೊಳಗಾದವರಿಗೆ ತಕ್ಷಣ ಚಿಕಿತ್ಸೆ ದೊರೆಯುವಂತೆ ಆಸ್ಪತ್ರೆಗಳಲ್ಲಿ ಅಗತ್ಯ ಔಷಧ ಹಾಗೂ ಆ್ಯಂಟಿ ಸ್ನೇಕ್ ವೆನಮ್ ಲಭ್ಯತೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಹಾವು ಕಡಿತದ ಸಂದರ್ಭದಲ್ಲಿ ಸಕಾಲದಲ್ಲಿ ಆಸ್ಪತ್ರೆಗೆ ತೆರಳುವ ಕುರಿತು ಗ್ರಾಮೀಣ ಪ್ರದೇಶದ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯತೆಯನ್ನೂ ಸಭೆಯಲ್ಲಿ ಒತ್ತಿ ಹೇಳಿದರು.

ರೇಬೀಸ್ ಹಾಗೂ ಹಾವು ಕಡಿತದಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟಲು ಆರೋಗ್ಯ, ಪಶುಪಾಲನೆ, ಸ್ಥಳೀಯ ಸಂಸ್ಥೆಗಳು ಸೇರಿ ಸಂಬಂಧಿಸಿದ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರಕರಣಗಳ ವರದಿ, ಪರಿಶೀಲನೆ, ಚಿಕಿತ್ಸಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಗಮನಹರಿಸಬೇಕು. ನಿಷ್ಕಾಳಜಿ ವಹಿಸುವವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಽಕಾರಿ ಎಚ್ಚರಿಸಿದರು.

ಜಿಲ್ಲಾ ಸರ್ವೆಲೆನ್ಸ್ ವಿಭಾಗದ ಡಾ. ಸೀಮಾ ಅವರು, ರೇಬೀಸ್ ಹಾಗೂ ಹಾವು ಕಡಿತದಿಂದ ಆದ ಪ್ರಕರಣಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. 2025ರಲ್ಲಿ ರೇಬಿಸ್‌ನಿಂದಾಗಿ 25152 ಪ್ರಕರಣಗಳ ಪೈಕಿ 5 ಜನರು ಮೃತಪಟ್ಟರೆ, ಈ ವರ್ಷ ಜನವರಿಯಿಂದ ಸೆಪ್ಟೆಂಬರ್ ವರೆಗೆ 24092 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 7 ಜನ ಮೃತಪಟ್ಟಿದ್ದಾರೆ. ಹಾವು ಕಡಿತ ಪ್ರಕರಣಗಳಲ್ಲಿ 2025ರಲ್ಲಿ 586 ಪ್ರಕರಣಗಳಲ್ಲಿ 4 ಜನ ಮೃತಪಟ್ಟರೆ, ಪ್ರಸಕ್ತ ವರ್ಷ 617 ಪ್ರಕರಣಗಳ ಪೈಕಿ 15 ಜನರು ಮೃತಪಟ್ಟಿರುವುದಾಗಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುವರ್ಣ ಕುಲಕರ್ಣಿ, ಜಿಲ್ಲಾ ಸರ್ವೆಲೈನ್ಸ್ ಅಧಿಕಾರಿ ಡಾ. ಅಶೋಕ ಸೂರ್ಯವಂಶಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಶಿವನಗೌಡರ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಮಹೇಶ ಕೋಣಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಕುಸುಮಾ ಮಾಗಿ, ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಪ್ರಮೋದಿನಿ ಬಳೂಲಮಟ್ಟಿ ಸೇರಿ ಆಯಾ ತಾಲೂಕು ಮಟ್ಟದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.