ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದಲ್ಲಿ ಶನಿವಾರ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರವನ್ನು ಪ್ರಾಽಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಶಾಸಕ ಉಮೇಶ ಮೇಟಿ ಅವರು ವಿತರಿಸಿದರು. 
ಬಾಗಲಕೋಟೆ

ಸಂತ್ರಸ್ತರ ಧ್ವನಿಯಾಗಿ ಕೆಲಸ ಆಗಬೇಕಿವೆ

ಬಾಗಲಕೋಟೆ: ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರವೂ ಮುಳುಗಡೆ ಸಂತ್ರಸ್ತರ ಧ್ವನಿಯಾಗಿ ಸಾಕಷ್ಟು ಕೆಲಸ ಕಾರ್ಯಗಳನ್ನು ಇನ್ನೂ ಮಾಡಬೇಕಿದೆ. ಸದ್ಯ ಬಿಟಿಡಿಎನಲ್ಲಿ ಇನ್ನೂ ಸಾಕಷ್ಟು ಕೆಲಸಗಳು ಉಳಿದಿವೆ ಎಂದು ಪ್ರಾಽಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು.
ಬಿಟಿಡಿಎ ಕಚೇರಿ ಆವರಣದಲ್ಲಿ ಶನಿವಾರ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಮತ್ತು ಇ-ಖಾತಾ ಉತಾರಗಳನ್ನು ವಿತರಿಸಿ ಮಾತನಾಡಿದರು.
ಬಿಟಿಡಿಎನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕೆಲಸ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕಚೇರಿಯ ಅಽಕಾರಿ ಹಾಗೂ ಸಿಬ್ಬಂದಿ ಪ್ರತಿ ದಿನದ ಕೆಲಸ ಕಾರ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಕಚೇರಿ ಆಗಮಿಸಿದ ಪ್ರತಿಯೊಬ್ಬ ಸಂತ್ರಸ್ತರ ದೂರುಗಳಿಗೆ ಸ್ಪಂದಿಸುವ ಮೂಲಕ ತ್ವರಿತಗತಿಯಲ್ಲಿ ಬಗೆಹರಿಸುವ ಕೆಲಸವಾಗಬೇಕು. ಪ್ರಾಽಕಾರದ ಸಭೆಯಲ್ಲಿ ಆಗಬೇಕಾದ ಕೆಲಸ, ಯೋಜನೆ ಯಾವ ರೀತಿ ಹಾಕಿಕೊಳ್ಳಬೇಕು ಹಾಗೂ ಇರುವಂತಹ ಕೆಲಸಗಳನ್ನು ಪೂರ್ಣಗೊಳಿಸುವ ಕುರಿತು ಕ್ರಮವಹಿಸಲಾಗುತ್ತಿದೆ.
ಯುನಿಟ್-೧ ಮತ್ತು ೨ರಲ್ಲಿ ಸ್ವಚ್ಚತೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಪರಿಸರ ದಿನಾಚರಣೆಯಂದು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಇನ್ನೂ ೧೦ ದಿನಗಳ ವರೆಗೆ ಅಭಿಯಾನ ಮುಂದುವರೆಯಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟೆ ಶಾಸಕ ಉಮೇಶ ಮೇಟಿ ಮಾತನಾಡಿ, ಸಂತ್ರಸ್ತರ ನೋವಿಗೆ ಸ್ಪಂದಿಸುವ ಕೆಲಸವಾಗಬೇಕು. ಸಂತ್ರಸ್ತರು ಕಚೇರಿ ಬಂದಾಗ ಅವರೊಂದಿಗೆ ಸಹಾನುಭೂತಿಯಿಂದ ವರ್ತಿಸಿ ಕೆಲಸಗಳನ್ನು ಮಾಡಿಕೊಡಬೇಕು. ಈ ಟೇಬಲ್‌ನಿಂದ ಟೇಬಲ್‌ಗೆ ಅಲೆದಾಡಿಸುವಂತಾಗಬಾರದು. ಸಣ್ಣ ಕೆಲಸ ಇರಲಿ ದೊಡ್ಡ ಕೆಲಸವಿರಲಿ ಮೊದಲು ಅಲೆದಾಟ ತಪ್ಪಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಲಿ ಎಂದು ತಿಳಿಸಿದರು.
ಈ ವೇಳೆ ೧೫ ಸಂತ್ರಸ್ತರಿಗೆ ಹಕ್ಕುಪತ್ರ ಹಾಗೂ ೪೬ ಜನರಿಗೆ ಇ-ಖಾತಾ ಉತಾರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬುಡಾದ ಅಧ್ಯಕ್ಷ ಅಬ್ದುಲ್‌ರಜಾಜ ಬೇನೂರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಽಕಾರದ ಅಧ್ಯಕ್ಷ ಅನೀಲ ದಡ್ಡಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ಮುಖ್ಯ ಅಭಿಯಂತರ ಚಂದ್ರಹಾಸ ಬಂಡಿ, ಪುನರ್ವಸತಿ ಅಽಕಾರಿ ಪ್ರಶಾಂತ ಬಾರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.