ಬಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಸೋಮವಾರ ಘನತ್ಯಾಜ್ಯ ನಿರ್ವಹಣೆ ನಿಯಮಗಳು-೨೦೨೬ರ ಅನುಷ್ಠಾನ ಅನುಪಾಲನೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಽಕಾರಿ ಸಂಗಪ್ಪ ಎಂ. ಮಾತನಾಡಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಖಾ ಎಂ, ಜಿ.ಪಂ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ ಉಕ್ಕಲಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ ಇತರರು ಇದ್ದರು.  
ಬಾಗಲಕೋಟೆ

ತ್ಯಾಜ್ಯ ಸಂಗ್ರಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು

ಬಾಗಲಕೋಟೆ: ಘನತ್ಯಾಜ್ಯ ನಿರ್ವಹಣೆ ನಿಯಮಗಳು-೨೦೨೬ರ ಪರಿಣಾಮಕಾರಿ ಅನುಷ್ಠಾನಗೊಳಿಸುವಂತೆ ಜಿಲ್ಲಾಽಕಾರಿ ಸಂಗಪ್ಪ ಎಂ. ಅಽಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಸೋಮವಾರ ಘನತ್ಯಾಜ್ಯ ನಿರ್ವಹಣೆ ನಿಯಮಗಳು-೨೦೨೬ರ ಅನುಷ್ಠಾನ ಅನುಪಾಲನೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತ್ಯಾಜ್ಯ ಸಂಗ್ರಹಣೆಯಲ್ಲಿ ಯಾವುದೇ ಲೋಪವಾಗದಂತೆ ನಗರ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕು. ಮನೆ ಮನೆಗೆ ತ್ಯಾಜ್ಯ ಸಂಗ್ರಹಣೆ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಿ, ಸಾರ್ವಜನಿಕರು ತ್ಯಾಜ್ಯ ಎಲ್ಲೆಂದರಲ್ಲಿ ಹಾಕದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಹೋಟೆಲ್ ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳಿAದ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹೊರಗಡೆ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೋಟೆಲ್‌ಗಳಿಂದ ತ್ಯಾಜ್ಯ ಸಂಗ್ರಹಿಸಲು ಅಗತ್ಯವಿರುವ ವಾಹನಗಳನ್ನು ಕಳುಹಿಸಿ ನಿಯಮಿತವಾಗಿ ತ್ಯಾಜ್ಯ ಸಂಗ್ರಹಿಸುವ ವ್ಯವಸ್ಥೆ ಕಲ್ಪಿಸಬೇಕು. ಹೋಟೆಲ್ ಶಾಪಿಂಗ್ ಮಾಲ್‌ಗಳು ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳ ಸಭೆ ಕರೆದು ತ್ಯಾಜ್ಯ ಸಂಗ್ರಹಣೆಗಾಗಿ ಕಡ್ಡಾಯವಾಗಿ ಡಸ್ಟಬಿನ್‌ಗಳನ್ನು ಇಡುವಂತೆ ಹಾಗೂ ತ್ಯಾಜ್ಯವನ್ನು ಮೂಲದಲ್ಲಿಯೇ ಪ್ರತ್ಯೇಕಿಸಿ ನೀಡುವಂತೆ ಸೂಚಿಸಬೇಕು ಎಂದರು.
ತ್ಯಾಜ್ಯವನ್ನು ಸಂಗ್ರಹಿಸಿದ ನಂತರ ವಿಂಗಡಿಸುವುದಕ್ಕಿAತ ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳದಲ್ಲಿಯೇ ಅದರ ವಿಂಗಡಣೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು. ಸಾರ್ವಜನಿಕರು, ಹೋಟೆಲ್‌ಗಳು ಹಾಗೂ ವಾಣಿಜ್ಯ ಸಂಸ್ಥೆಗಳು ತ್ಯಾಜ್ಯ ನಿಯಮಾನುಸಾರ ಪ್ರತ್ಯೇಕಿಸಿ ನೀಡುವಂತೆ ವ್ಯಾಪಕ ಜಾಗೃತಿ ಮೂಡಿಸಬೇಕು. ಬಸ್ ನಿಲ್ದಾಣದ ಸ್ವಚ್ಚತೆಗೆ ವಿಶೇಷ ಗಮನ ಕೊಡಬೇಕು. ಬಸ್ ನಿಲ್ದಾಣದಲ್ಲಿರುವ ಹೋಟೆಲ್‌ಗಳು ಹಾಗೂ ಇತರೆ ಅಂಗಡಿಗಳಿAದ ಉತ್ಪತ್ತಿಯಾಗುವ ತ್ಯಾಜ್ಯ ಸಮರ್ಪಕವಾಗಿ ಸಂಗ್ರಹಿಸಿ ತ್ಯಾಜ್ಯ ವಿಂಗಡಣೆ ಕಡ್ಡಾಯವಾಗಿ ಮಾಡುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.
ತ್ಯಾಜ್ಯವನ್ನು ಸಂಗ್ರಹಣೆಯ ಹಂತದಲ್ಲಿಯೇ ನಾಲ್ಕು ವಿಧಗಳಾಗಿ ವಿಂಗಡಿಸಬೇಕು. ಸಾರ್ವಜನಿಕರು ಮನೆಗಳಲ್ಲಿಯೇ ತ್ಯಾಜ್ಯವನ್ನು ಪ್ರತ್ಯೇಕಿಸಿ ನೀಡುವಂತೆ ಜಾಗೃತಿ ಮೂಡಿಸುವುದು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಸೂಚಿಸಿದರು. ಸಂಗ್ರಹಿಸಿದ ತ್ಯಾಜ್ಯದ ನಿರ್ವಹಣೆ ಕೂಡಾ ಮಹತ್ವದ್ದಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ನೋಡಲ್ ಅಽಕಾರಿಗಳನ್ನು ನೇಮಕ ಮಾಡಿ ಪ್ರತಿದಿನ ಬೆಳಗ್ಗೆ ೬ ಗಂಟೆಗೆ ಪೀಲ್ಡ್ಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಹಾಗೂ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಬೇಕು. ಶಾಲಾ ಮಕ್ಕಳಲ್ಲಿ ತ್ಯಾಜ್ಯ ವಿಂಗಡಣೆ ಹಾಗೂ ಸ್ವಚ್ಛತೆಯ ಮಹತ್ವದ ಕುರಿತು ಮೂಡಿಸುವ ಅಗತ್ಯವಿದೆ ಎಂದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಕೈಗೊಳ್ಳುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಜೆ.ಕೆ. ಸಿಮೆಂಟ್ಸ್ ಲಿಮಿಟೆಡ್ ಘಟಕದವರು ಎತ್ತುವಳಿ ಮಾಡದಿರುವ ಕುರಿತು ಗಂಭೀರವಾಗಿ ಪರಿಗಣಿಸಲಾಯಿತು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಖಾ ಎಂ, ಜಿ.ಪಂ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ ಉಕ್ಕಲಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ಜಿಲ್ಲಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಅಽಕಾರಿ ಲೋಕೇಶ ಎಚ್.ಕೆ, ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ.ಕುಸುಮಾ ಮಾಗಿ, ಜಿ.ಪಂ ಸಹಾಯಕ ಯೋಜನಾಽಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.