ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ನವನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಭಾರತ ಮಾತಾ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ, ಸಂಸದ ಗೋವಿಂದ ಕಾರಜೋಳ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ ಚಿತ್ರದಲ್ಲಿದ್ದಾರೆ. 
ಬಾಗಲಕೋಟೆ

ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ಬೇಸರ

ಪ್ರಮುಖ ಮುಖ್ಯಾಂಶಗಳು

  • ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆರೋಪ
  • ಅಭಿವೃದ್ಧಿಯೇ ಬಿಜೆಪಿ ಮಂತ್ರ
  • ಪೂರ್ವಭಾವಿ ಸಭೆ ಆಯೋಜನೆ
ಬಾಗಲಕೋಟೆ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಬರಿ ಹಗರಣಗಳ ಕಾಂಗ್ರೆಸ್ ಸರ್ಕಾರದಿಂದ ಜನ ಬೇಸತ್ತು ಹೋಗಿದ್ದು, ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಲು ಬಾಗಲಕೋಟೆ ಜನ ತುದಿಗಾಲಿನ ಮೇಲೆ ನಿಂತಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿಯೇ ನಮ್ಮ ಮಂತ್ರವಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದರು.
ನವನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಉಪ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ವೀರಣ್ಣ ಚರಂತಿಮಠ ಶಾಸಕರಾಗಿದ್ದ ಅವಽಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅನುದಾನ ತಂದು ಬಾಗಲಕೋಟೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮತ್ತೆ ಇಂದು ಉಪ ಚುನಾವಣೆ ಬಂದಿದ್ದರಿಂದ ಬಿಜೆಪಿ ಸರ್ಕಾರದ ಸಾಧನೆಗಳು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳು ಜೊತೆಗೆ ಸ್ಥಳೀಯ ಅಭಿವೃದ್ಧಿ ಕೆಲಸಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದರು.
ಮಾಜಿ ಉಪಮುಖ್ಯಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಕಸಿತ ಭಾರತವಾಗಿ ಹೊರ ಹೊಮ್ಮುತ್ತಿದೆ. ರಾಜ್ಯದಲ್ಲೂ ಕೂಡಾ ಬಿಜೆಪಿ ಸರಕಾರವಿದ್ದ ಅವಧಿಯಲ್ಲಿ ಎಲ್ಲರಿಗೂ ಸಮಪಾಲು ಎಲ್ಲರಿಗೂ ಸಮಬಾಳು ತತ್ವದಲ್ಲಿ ಸಾಕಷ್ಟು ಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಜರುಗಿವೆ. ರಾಜ್ಯದಲ್ಲಿಯೇ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತಂದು ಒಂದು ಮಾದರಿ ಕ್ಷೇತ್ರವನ್ನಾಗಿಸುವಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಪಾತ್ರ ದೊಡ್ಡದಿದೆ ಎಂದು ಬಣ್ಣಿಸಿದರು.
ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಯಾರಿಗೂ ಬೇಡವಾಗಿದೆ. ಬಾಗಲಕೋಟೆಯಲ್ಲಂತೂ ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಆವರಿಸಿದೆ. ಬಾಗಲಕೋಟೆಯ ಎಲ್ಲ ಬಿಜೆಪಿ ನಾಯಕರು ಒಗ್ಗಟ್ಟಿನಿಂದ ಈ ಚುನಾವಣೆಯನ್ನು ಎದುರಿಸುತ್ತೇವೆ ಮತ್ತು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಈ ಉಪ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ನಮ್ಮ ಕಾರ್ಯಕರ್ತರ ಶಕ್ತಿಯೊಂದಿಗೆ ಜನರ ಆಸೆಯಂತೆ ಮೊತ್ತೊಮ್ಮೆ ಬಿಜೆಪಿ ಗೆಲ್ಲುವುದು ಶತಸಿದ್ಧ ಎಂದು ಹೇಳಿದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬೆಳಗಾವಿ ವಿಭಾಗ ಪ್ರಭಾರಿ ಸಂಜಯ ಪಾಟೀಲ, ಚುನಾವಣಾ ಉಸ್ತುವಾರಿ ಅರುಣ ಶಹಾಪೂರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಬದಾಮಿ ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಮುಖಂಡರಾದ ಉಮೇಶ ಕಾರಜೋಳ, ಬಸವರಾಜ ಯಂಕಂಚಿ, ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ ಮತ್ತಿತರರು ಇದ್ದರು.