ಸಂಗಪ್ಪ,  
ಬಾಗಲಕೋಟೆ

ಸೆ.೫ ರಿಂದ ಪ್ರಜಾಸೇವಾ ಆಂದೋಲನ

ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಸೆಪ್ಟೆಂಬರ್ ೫ರಿಂದ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಽಕಾರಿ ಸಂಗಪ್ಪ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಸಭೆಗಳಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಿ, ಸಂಬAಽಸಿದ ಇಲಾಖೆಗಳ ಅಽಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದಿದ್ದಾರೆ.
*ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ
ಸೆಪ್ಟೆAಬರ್ ೫ರಂದು ಬೆಳಗ್ಗೆ ೧೦.೩೦ ಗಂಟೆಗೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ವಹಿಸಲಿದ್ದು, ಬಾಗಲಕೋಟೆ ಶಾಸಕ ಉಮೇಶ ಮೇಟಿ ನೇತೃತ್ವ ವಹಿಸಲಿದ್ದಾರೆ.
ಸೆಪ್ಟೆಂಬರ್ ೧೨ರಂದು ಬೆಳಗ್ಗೆ ೧೦.೩೦ ಗಂಟೆಗೆ ಮುಧೋಳ ಡಾ. ಬಿ.ಆರ್. ಅಂಬೇಡ್ಕರ ಭವನದಲ್ಲಿ ನಡೆಯುವ ಸಭೆಗೆ ಮುಧೋಳ ಶಾಸಕ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆ ವಹಿಸಲಿದ್ದಾರೆ.
ಸೆಪ್ಟೆಂಬರ್ ೧೯ರಂದು ಬೆಳಗ್ಗೆ ೧೦.೩೦ ಗಂಟೆಗೆ ಇಳಕಲ್ಲಿನ ವಾರ್ಡ ನಂ.೨, ನಗರಸಭೆ ಕಚೇರಿ ಸಮೀಪದ ರಂಗಮAದಿರದಲ್ಲಿ ನಡೆಯುವ ತಾಲೂಕು ಮಟ್ಟದ ಪ್ರಜಾಸೇವಾ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ.
ಸೆಪ್ಟೆಂಬರ್ ೨೬ರಂದು ಬೆಳಗ್ಗೆ ೧೦.೩೦ ಗಂಟೆಗೆ ಬೀಳಗಿ ತಾಲೂಕು ಆಡಳಿತ ಸೌಧದ ಆವರಣದಲ್ಲಿ ನಡೆಯುವ ತಾಲೂಕು ಮಟ್ಟದ ಪ್ರಜಾಸೇವಾ ಸಭೆಗೆ ಬೀಳಗಿ ಶಾಸಕ ಜೆ.ಟಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
*ಹೋಬಳಿ ಮಟ್ಟದಲ್ಲಿ ಎಲ್ಲೆಲ್ಲಿ, ಯಾವಾಗ...?
ಹೋಬಳಿ ಮಟ್ಟದಲ್ಲಿಯೂ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ ೫ರಂದು ಬೆಳಗ್ಗೆ ೧೦.೩೦ ಗಂಟೆಗೆ ಲೋಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಧೋಳ ಶಾಸಕ ಆರ್.ಬಿ. ತಿಮ್ಮಾಪೂರ ಅಧ್ಯಕ್ಷತೆ ಸಭೆ ನಡೆಯಲಿದೆ. ಜಮಖಂಡಿಯ ಶ್ರೀ ಗುರುದೇವ ರಾನಡೆ ಭವನದಲ್ಲಿ ಶಾಸಕ ಜಗದೀಶ ಗುಡಗುಂಟಿ ಅಧ್ಯಕ್ಷತೆಯಲ್ಲಿ, ಗುಳೇದಗುಡ್ಡ ಕರನಂದಿ ಕಲ್ಯಾಣ ಮಂಟಪದಲ್ಲಿ ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ, ತೇರದಾಳ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ಸಿದ್ದು ಸವದಿ ಅಧ್ಯಕ್ಷತೆಯಲ್ಲಿ, ಅನಗವಾಡಿ ಬಸವೇಶ್ವರ ಸಭಾಭವನದಲ್ಲಿ ಬೀಳಗಿ ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆಯಲ್ಲಿ, ಬಾಗಲಕೋಟೆ ಜಿ.ಪಂ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೆಪ್ಟೆಂಬರ್ ೧೨ರಂದು ಬೆಳಗ್ಗೆ ೧೦.೩೦ ಗಂಟೆಗೆ ಸಾವಳಗಿ ಮಾಳಿ ಸಭಾಭವನದಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ವಹಿಸಿದರೆ, ಹೊಸೂರ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಗಿರಿಸಾಗರ ರುದ್ರಮುನಿ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಬೀಳಗಿ ಶಾಸಕ ಜೆ.ಟಿ.ಪಾಟೀಲ, ರಾಂಪೂರ ಗ್ರಾ.ಪಂ ಸಭಾಭವನದಲ್ಲಿ ಬಾಗಲಕೋಟೆ ಶಾಸಕ ಉಮೇಶ ಮೇಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೆಪ್ಟೆಂಬರ್ ೧೯ರಂದು ಬೆಳಗ್ಗೆ ೧೦.೩೦ ಗಂಟೆಗೆ ಬೆಳಗಲಿ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮರೇಗುದ್ದಿ ಗ್ರಾಪಂ ಕಾರ್ಯಾಲಯದ ಸಭಾಭವನದಲ್ಲಿ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಹಳದೂರ ಗ್ರಾಪಂ ಸಭಾಭವನದಲ್ಲಿ ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ತೇರದಾಳ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ಸಿದ್ದು ಸವದಿ, ಸಿದ್ದಾಪೂರ ವಾಲ್ಮೀಕಿ ಸಮುದಾಯ ಭವನದಲ್ಲಿ ಬೀಳಗಿ ಶಾಸಕ ಜೆ.ಟಿ.ಪಾಟೀಲ, ತಿಮ್ಮಾಪೂರ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಬಾಗಲಕೋಟೆ ಶಾಸಕ ಉಮೇಶ ಮೇಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೆಪ್ಟೆಂಬರ್ ೨೬ರಂದು ಬೆಳಗ್ಗೆ ೧೦.೩೦ ಗಂಟೆಗೆ ಮಂಟೂರು ಗ್ರಾ.ಪಂ ಆವರಣದಲ್ಲಿ ಮುಧೋಳ ಶಾಸಕ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ನಡೆಯಲಿದ್ದರೆ, ಗೋಠೆ ಅಂಬೇಡ್ಕರ ಭವನದಲ್ಲಿ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಕುಳಗೇರಿ ಕ್ರಾಸ್ ಬಸವ ಭವನದಲ್ಲಿ ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ರಬಕವಿ-ಬನಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ, ಬೆಣ್ಣೂರ ಗ್ರಾ.ಪಂ ಆವರಣದಲ್ಲಿ ಬಾಗಲಕೋಟೆ ಶಾಸಕ ಉಮೇಶ ಮೇಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
*ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ
ಪ್ರಜಾಸೇವಾ ಆಂದೋಲನದ ಮೂಲಕ ಕಂದಾಯ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ವಸತಿ, ರಸ್ತೆ, ವಿದ್ಯುತ್, ಕೃಷಿ, ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆ ಸೇರಿ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಸಾರ್ವಜನಿಕರು ನೇರವಾಗಿ ಅಽಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಸ್ವೀಕರಿಸುವ ಅಹವಾಲುಗಳಿಗೆ ಸಂಬAಽಸಿದAತೆ ಅಽಕಾರಿಗಳು ತ್ವರಿತವಾಗಿ ಕ್ರಮಕೈಗೊಂಡು, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಽಕಾರಿ ಸಂಗಪ್ಪ ತಿಳಿಸಿದ್ದಾರೆ.