ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಶನಿವಾರ ಭೇಟಿ ನೀಡಿದ ಜಿಲ್ಲಾಽಕಾರಿ ಸಂಗಪ್ಪ ಅವರು ಎಸ್‌ಐಆರ್ ಪ್ರಕ್ರಿಯೆ ಪರೀಲಿಸಿದರು. ತಹಸೀಲ್ದಾರ ವಿನೋದ ಹತ್ತಳ್ಳಿ ಇದ್ದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ಕೊಡದೇ ಪಾರದರ್ಶಕವಾಗಿ ಮತ್ತು ನಿಖರವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಅವರು ಬೂತ ಮಟ್ಟದ ಅಽಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸೂಚನೆ ನೀಡಿದರು.
ಬೀಳಗಿ ತಾಲೂಕಿನ ಅನಗವಾಡಿ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ಜಿಲ್ಲಾಽಕಾರಿಗಳು, ಮನೆ ಮನೆಗೆ ನಡೆಯುತ್ತಿರುವ ಮಾಹಿತಿ ಸಂಗ್ರಹ ಹಾಗೂ ನಮೂನೆ ವಿತರಣೆಯ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು.
ಪ್ರತಿ ಮನೆಗೂ ಭೇಟಿ ನೀಡಿ ಅರ್ಹ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ದಾಖಲಿಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ, ನಿಗದಿತ ಅವಽಯೊಳಗೆ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು.
ಮನೆ ಮನೆಗೆ ಭೇಟಿ ನೀಡಿದ ಜಿಲ್ಲಾಽಕಾರಿಗಳು ಮತದಾರರಿಗೆ ಎಸ್.ಐ.ಆರ್ ಅಭಿಯಾನದ ಉದ್ದೇಶವನ್ನು ವಿವರಿಸಿ, ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತ ಮನವಿ ಮಾಡಿಕೊಂಡರು. ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದ ಬೂತ ಮಟ್ಟದ ಅಽಕಾರಿ ಹಾಗೂ ಸಿಬ್ಬಂದಿಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ತಹಸೀಲ್ದಾರ ವಿನೋದ ಹತ್ತಳ್ಳಿ, ಬೂತ ಮಟ್ಟದ ಅಽಕಾರಿ ದೇವಕಿ ವಡ್ಡರ, ಮೇಲ್ವಿಚಾರಕಿ ಭಾರತಿ, ಗ್ರಾಮ ಲೆಕ್ಕಾಽಕಾರಿ ನಾಗೇಶ ಇತರರು ಇದ್ದರು.
ಬಾಗಲಕೋಟೆ: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಿನ್ನಲೆಯಲ್ಲಿ ಜುಲೈ ೧೨ ರಂದು ಭಾನುವಾರ ಬೆಳಗ್ಗೆ ೮ ರಿಂದ ಮಧ್ಯಾಹ್ನ ೧.೩೦ ವರೆಗೆ ಬಾಗಲಕೋಟೆ ನಗರದ ಎಲ್ಲ ಬೂತಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಉಪ ವಿಭಾಗಾಽಕಾರಿ ಮಹೇಶಕುಮಾರ ಮಾಲಗತ್ತಿ ತಿಳಿಸಿದ್ದಾರೆ.
ಈ ವಿಶೇಷ ಅಭಿಯಾನದಲ್ಲಿ ಬೂತ್ ಮಟ್ಟದ ಅಽಕಾರಿಗಳು, ಮೇಲ್ವಿಚಾರಕರು ಹಾಗೂ ಇತರೆ ಸಿಬ್ಬಂದಿ ಮತಗಟ್ಟೆಗಳಲ್ಲಿ ಲಭ್ಯವಿರುತ್ತಾರೆ. ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ, ಹೆಸರು ತೆಗೆದು ಹಾಕಲು ಸೇರಿದಂತೆ ಎಸ್.ಐ.ಆರ್‌ಗೆ ಸಂಬAಽಸಿದ ನಮೂನೆಗಳು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ಹೊಸದಾಗಿ ಅರ್ಹತೆ ಪಡೆದ ಮತದಾರರು ಸಹ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆ ನಗರದ ಎಲ್ಲ ಅರ್ಹ ಮತದಾರರು ಈ ವಿಶೇಷ ಅಭಿಯಾನದ ಪ್ರಯೋಜನ ಪಡೆದು ತಮ್ಮ ಮತದಾರರ ವಿವರಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಂಳ್ಳುವAತೆ ಮನವಿ ಮಾಡಿದ್ದಾರೆ. ಯಾವುದೇ ಅರ್ಹ ಮತದಾರರು ಈ ಅವಕಾಶದಿಂದ ವಂಚಿತರಾಗದAತೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.