ಹುನಗುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜ್ ಒಕ್ಕೂಟ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಕಾಲೇಜ್ ಅಭಿವೃದ್ಧಿ ಸಮಿತಿ ಹಿರಿಯ ಸದಸ್ಯ ಚಂದ್ರಶೇಖರ ಚಟ್ನಿಹಾಳ ಉದ್ಘಾಟಿಸಿದರು. ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಸೇರಿ ಗಣ್ಯರು ಉಪಸ್ಥಿತರಿದ್ದರು. 
ಬಾಗಲಕೋಟೆ

ಓದಿನೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಿ

ಶಿಲ್ಪಾ ಪವಾರ

ಪ್ರಮುಖ ಮುಖ್ಯಾಂಶಗಳು

  • ಚಂದ್ರಶೇಖರ ಚಟ್ನಿಹಾಳ ಹೇಳಿಕೆ
  • ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ

ಹುನಗುಂದ : ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನಮಾಡಿ ಉತ್ತಮ ಅಂಕಗಳನ್ನು ಗಳಿಸುವುದರೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ನಾಯಕತ್ವ, ಶಿಸ್ತು ಹಾಗೂ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕಾಲೇಜ್ ಅಭಿವೃದ್ಧಿ ಸಮಿತಿಯ ಹಿರಿಯ ಸದಸ್ಯ ಚಂದ್ರಶೇಖರ ಚಟ್ನಿಹಾಳ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕಾಲೇಜ್ ಒಕ್ಕೂಟ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನವೇ ಭವಿಷ್ಯದ ಅಡಿಪಾಯವಾಗಿದ್ದು, ತಮ್ಮ ಬದುಕನ್ನು ತಾವೇ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದು ತಿಳಿಸಿದರು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ನೆರವಾಗುತ್ತವೆ ಎಂದರು.
ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಉಪನ್ಯಾಸ ನೀಡಿ, ಉತ್ತಮ ಹವ್ಯಾಸಗಳು ವ್ಯಕ್ತಿಯ ಬದುಕನ್ನು ರೂಪಿಸಿದರೆ, ವ್ಯಸನಗಳು ಬದುಕನ್ನೇ ಹಾಳುಮಾಡುತ್ತವೆ ಎಂದು ಎಚ್ಚರಿಸಿದರು. ಯುವ ಜನತೆ ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ವೈಯಕ್ತಿಕ ಆರೋಗ್ಯದ ಜೊತೆಗೆ ಸಮಾಜದ ಸ್ವಾಸ್ಥ್ಯಕ್ಕೂ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಪಿ.ಬಿ. ಧುತ್ತರಗಿ ಟ್ರಸ್ಟ್ ಅಧ್ಯಕ್ಷ ಎಸ್.ಕೆ. ಕೊನೆಸಾಗರ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಚಟುವಟಿಕೆಗಳ ಮಹತ್ವವನ್ನು ಒತ್ತಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಚಾರ್ಯ ಶರಣಪ್ಪ ಹೂಲಗೇರಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವೂ ಮಹತ್ವದ್ದಾಗಿರುವುದರಿಂದ ವಿದ್ಯಾರ್ಥಿಗಳು ಓದಿನತ್ತ ಹೆಚ್ಚಿನ ಗಮನಹರಿಸಿ ಉತ್ತಮ ಫಲಿತಾಂಶ ಸಾಽಸಬೇಕು ಎಂದು ಸಲಹೆ ನೀಡಿದರು.
ಕಾಲೇಜಿಗೆ ಹೊಸದಾಗಿ ನೇಮಕಗೊಂಡ ಅತಿಥಿ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜ್ ಅಭಿವೃದ್ಧಿ ಸಮಿತಿ ಸದಸ್ಯರಾದ ಹುಚ್ಚೇಶ ಕಾಳಸ್ತಿಮಠ, ಪ್ರಭು ನಾಗೂರ, ಮುತ್ತಣ್ಣ ಬ್ಯಾಳಿ ಹಾಗೂ ಮುತ್ತಣ್ಣ ಗಂಜಿಹಾಳ ಉಪಸ್ಥಿತರಿದ್ದರು.
ಸಿಂಧು ಇಮ್ರಾಪುರ ಪ್ರಾರ್ಥಿಸಿದರು. ಎಚ್.ಟಿ. ಅಗಸಿಮುಂದಿನ ಸ್ವಾಗತಿಸಿದರು. ಐ.ಎಚ್. ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಛಾಯಾ ಪುರಂದರೆ ಪ್ರತಿಜ್ಞಾವಿಽ ಬೋಽಸಿದರು. ವಿ.ಕೆ. ಶಶಿಮಠ ವಂದಿಸಿದರು. ಎನ್.ವೈ. ನದಾಫ್ ನಿರೂಪಿಸಿದರು.