ಬಾಗಲಕೋಟೆ ನವ ನಗರದ ಬಸ್ ನಿಲ್ದಾಣ ಆವರಣದ ಪೂರ್ವ ಮತ್ತು ದಕ್ಷಿಣ ಭಾಗದ ರಸ್ತೆ ಡಾಂಬರೀಕರಣಕ್ಕೆ ಶನಿವಾರ ಭೂಮಿ ಪೂಜೆ ನೆರವೇರಿಸಲಾಯಿತು. ಶಾಸಕ ಉಮೇಶ ಮೇಟಿ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮಾಜಿ ಸಚಿವ ಎಸ್.ಆರ್.ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮತ್ತಿತರರು ಇದ್ದರು. 
ಬಾಗಲಕೋಟೆ

ಉತ್ತಮ ಸಾರಿಗೆ, ಮೂಲ ಸೌಕರ್ಯಕ್ಕೆ ಆದ್ಯತೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಉಮೇಶ ಮೇಟಿ ಭರವಸೆ
  • 1.05 ಕೋಟಿ ರೂ. ರಸ್ತೆ ಡಾಂಬರೀಕರಣಕ್ಕೆ ಚಾಲನೆ
ಬಾಗಲಕೋಟೆ: ಕ್ಷೇತ್ರದ ಜನತೆಗೆ ಉತ್ತಮ ಸಾರಿಗೆ ವ್ಯವಸ್ಥೆ ಹಾಗೂ ನಿಲ್ದಾಣಗಳಲ್ಲಿ ಅಗತ್ಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಉಮೇಶ ಮೇಟಿ ಭರವಸೆ ನೀಡಿದರು.
ಬಾಗಲಕೋಟೆ ನವನಗರದ ಬಸ್ ನಿಲ್ದಾಣ ಆವರಣದ ಪೂರ್ವ ಹಾಗೂ ದಕ್ಷಿಣ ಭಾಗದಲ್ಲಿ 1.05 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಡಾಂಬರೀಕರಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ನವನಗರದ ಬಸ್ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು, ಆವರಣದಲ್ಲಿ ಮಳೆಯಾದರೆ ನೀರು ನಿಲ್ಲುತ್ತಿತ್ತು. ಇದರಿಂದ ಪ್ರಯಾಣಿಕರು ಹಾಗೂ ವಾಹನ ಚಾಲಕರು ತೊಂದರೆ ಅನುಭವಿಸುತ್ತಿದ್ದರು. ಈಗ ಡಾಂಬರೀಕರಣಕ್ಕೆ ಚಾಲನೆ ನೀಡಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.
ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಽಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ ಶಾಸಕ ಮೇಟಿ, ಸಾರ್ವಜನಿಕರ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಬಸ್ ನಿಲ್ದಾಣ ಆವರಣ ಅಭಿವೃದ್ಧಿಯಿಂದ ಪ್ರಯಾಣಿಕರಿಗೆ ಸ್ವಚ್ಛ ಹಾಗೂ ಸುರಕ್ಷಿತ ವಾತಾವರಣ ನಿರ್ಮಾಣವಾಗಲಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆಗೂ ಪರಿಹಾರ ದೊರೆಯಲಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದರು.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರು, ಡಾಂಬರೀಕರಣ ಕಾವiಗಾರಿ ನಿಗದಿತ ಅವಧಿಯಲ್ಲಿ ಹಾಗೂ ಗುಣಮಟ್ಟದಿಂದ ಕೂಡಿರಬೇಕು. ಬಹಳ ದಿನಗಳ ಕಾಲ ಬಾಳಿಕೆ ಬರಬೇಕು ಎಂದು ಹೇಳಿದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮಾಜಿ ಸಚಿವ ಎಸ್.ಆರ್. ಪಾಟೀಲ,
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅನೀಲ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿ.ಪಂ. ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಎಸ್.ಎಂ. ರಾಂಪೂರ, ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ ಸೇರಿ ಹಲವರು ಇದ್ದರು.