ಜಮಖಂಡಿ : ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಪ್ರತಿ ರೈತ ಕುಟುಂಬಕ್ಕೆ ೧೦ ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ಕಬ್ಬಿಗೆ ಪ್ರತಿ ಟನ್ಗೆ ೧೦,೦೦೦ ರೂ. ಬೆಂಬಲ ಬೆಲೆ ಘೋಷಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರ್ಜುನ ಹಲಗಿಗೌಡರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.
ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಎಥೆನಾಲ್ ಖರೀದಿಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಉತ್ಪಾದನೆಯಾಗುವ ಎಥೆನಾಲ್ ಖರೀದಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಎಲ್ಲ ಕ್ಷೇತ್ರಗಳಲ್ಲೂ ಸ್ಪಽðಸಲಿದೆ ಎಂದು ತಿಳಿಸಿದರು.
ಪಕ್ಷದ ತಾಲೂಕು ಅಧ್ಯಕ್ಷ ಶಿವಾನಂದ ಪಾರಶೆಟ್ಟಿ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವಿಳಂಬದಿಂದ ಗ್ರಾಮೀಣ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಸ್ಥಳೀಯ ಆಡಳಿತ ವ್ಯವಸ್ಥೆಗೆ ಬಲ ನೀಡಲು ಹಾಗೂ ಗ್ರಾಮೀಣ ಜನರಿಗೆ ಆಡಳಿತದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲು ತಕ್ಷಣ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಪಕ್ಷದ ವಿವಿಧ ಘಟಕಗಳಿಗೆ ಪದಾಽಕಾರಿಗಳ ನೇಮಕವನ್ನು ಪ್ರಕಟಿಸಲಾಯಿತು. ನಿವೃತ್ತ ನೌಕರರ ಘಟಕದ ತಾಲೂಕು ಅಧ್ಯಕ್ಷರಾಗಿ ಸಿದಗೌಡ ಆರ್. ಪಾಟೀಲ, ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ÷್ಮಣ ಬಿ. ಪತ್ತಾರ, ನಗರ ಎಸ್ಸಿ-ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ದಾನೇಶ ಎನ್. ದೇವನಾಳ, ರೈತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಈರಪ್ಪ ಎಂ. ನ್ಯಾಮಗೌಡ ಹಾಗೂ ವ್ಯಾಪಾರಿಗಳ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬಹುಬಲಿ ಬಿ. ಅಣ್ಣಾಜಿ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ವಿಠ್ಠಲ ಹಾಜವ್ವಗೋಳ, ಇಜಾಜಾಹ್ಮದ ಸವದಿ ಹಾಗೂ ಸದಾಶಿವ ಗಾಡಿವಡ್ಡರ ಉಪಸ್ಥಿತರಿದ್ದರು.