ಬಾದಾಮಿ ಪಟ್ಟಣದ ಆರೋಗ್ಯ ಇಲಾಖೆ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗೆ ದಿನಾಚರಣೆಯನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಬಿ. ಪಾಟೀಲ ಉದ್ಘಾಟಿಸಿದರು. ಪಿ.ಎಚ್. ಮಹಾಲಿಂಗಪುರ, ಕೆ.ಪಿ. ಹಂಪಿಹೊಳಿ, ಆರ್.ಬಿ. ಹೊತಗಿಗೌಡರ ಇತರರಿದ್ದರು. 
ಬಾಗಲಕೋಟೆ

ಡೆಂಗೆ ನಿಯಂತ್ರಣಕ್ಕೆ ಜನತೆ ಸಹಕಾರ ಅಗತ್ಯ

ದತ್ತಾತ್ರೇಯ ಪಿ ಕುಲಕರ್ಣಿ

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯಾಧಿಕಾರಿ ಡಾ. ಎಂ.ಬಿ. ಪಾಟೀಲ ಹೇಳಿಕೆ
  • ಡೆಂಗೆ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದೆ
  • ಡೆಂಗೆ ದಿನಾಚರಣೆ ಕಾರ್ಯಕ್ರಮ
ಬಾದಾಮಿ : ಡೆಂಗೆ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದೆ. ಜನತೆ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕೈಗೊಂಡು ಸೊಳ್ಳೆ ನಿಯಂತ್ರಿಸಿ ಡೆಂಗೆ ಜ್ವರ ಹರಡದಂತೆ ಮುಂಜಾಗ್ರತೆ ವಹಿಸಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಬಿ. ಪಾಟೀಲ ಹೇಳಿದರು.
ಪಟ್ಟಣದ ಆರೋಗ್ಯ ಇಲಾಖೆ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಎಚ್. ಮಹಾಲಿಂಗಪುರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಕೀಟಜನ್ಯ ರೋಗಗಳು ಮುಂಜಾಗ್ರತೆ ಕ್ರಮಗಳ ಕುರಿತು ಮಾತನಾಡಿದರು.
ಡಿಎಂಒ ಕಚೇರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಪಿ. ಹಂಪಿಹೊಳಿ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಿದರು.
ತಾಲೂಕಿನ ಅಡುಗೆ ಸಹಾಯಕರು, ಅಂಗನವಾಡಿ ಮೇಲ್ವಿಚಾರಕರು ಹಾಗೂ ಆಸ್ಪತ್ರೆ ಸಿಬ್ಬಂದಿ ಇದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆರ್.ಬಿ. ಹೊತಗಿಗೌಡರ ಸ್ವಾಗತಿಸಿದರು. ಎಂ.ಎಸ್. ಅಂಗಡಿ ನಿರೂಪಿಸಿದರು. ರೇಟಾ ಸಾಲಿನ್ಸ್ ವಂದಿಸಿದರು.