ಬಾಗಲಕೋಟೆ ಜಿಪಂ ಸಭಾಭವನದಲ್ಲಿ ಶನಿವಾರ ಸಂಸದ ಪಿ.ಸಿ.ಗದ್ದಿಗೌಡರ ಅಧ್ಯಕ್ಷತೆಯಲ್ಲಿ ತ್ರೆÊಮಾಸಿಕ ದಿಶಾ ಸಭೆ ನಡೆಯಿತು. ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾಽಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ ಇತರರು ಇದ್ದರು.
ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ಸಲ್ಲದು ಎಂದು ಸಂಸದ ಪಿ.ಸಿ.ಗದ್ದಿಗೌಡರ ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶನಿವಾರ ಜರುಗಿದ ಮೊದಲನೇ ತ್ರೆÊಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಮ್ಮಿಕೊಂಡ ಪ್ರತಿಯೊಂದು ಕಾಮಗಾರಿಗಳನ್ನು ತ್ವರಿತಗಿಯಲ್ಲಿ ಪೂರ್ಣಗೊಳಿಸಲು ಅಽಕಾರಿಗಳ ಹಿತಾಶಕ್ತಿ ಮುಖ್ಯವಾಗುತ್ತದೆ. ಇಲ್ಲದಿದ್ದರೆ ನಿಗದಿತ ಅವಽಯಲ್ಲಿ ಕೆಲಸಗಳು ಆಗುವುದಿಲ್ಲ. ಆದ್ದರಿಂದ ಇಚ್ಚಾಶಕ್ತಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಅಽಕಾರಿಗಳಿಗೆ ಕಿವಿಮಾತು ಹೇಳಿದರು.
ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ರೇಷ್ಮೆ, ಗ್ರಾಮೀಣ ಕುಡಿಯುವ ನೀರಿನ ಯೋಜನೆ, ರಾಷ್ಟ್ರೀಯ ಹೆದ್ದಾರಿ, ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕಾರ್ಮಿಕ ಇಲಾಖೆ, ಪಶುಪಾಲನೆ ಹಾಗೂ ಮೀನುಗಾರಿಕೆ, ಹೆಸ್ಕಾಂ, ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಶಿರೂರ-ಗದ್ದನಕೇರಿ ಕ್ರಾಸ್‌ವರೆಗಿನ ೨೪.೨೬೫ ಕಿ.ಮೀ. ಚತುಷ್ಪಥ ರಸ್ತೆ ಕಾಮಗಾರಿಯಲ್ಲಿ ೨೧ ಕಿ.ಮೀ. ಕಾಮಗಾರಿ ಪೂರ್ಣಗೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು. ಭೂಸ್ವಾಽÃನ ವಿಳಂಬದಿAದ ಬಾಕಿ ಉಳಿದಿರುವ ಪ್ರದೇಶಗಳನ್ನು ಹೊರತುಪಡಿಸಿ, ಉಳಿದ ಕಡೆ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದ ಸಂಸದರು, ಕಾಮಗಾರಿ ಕೈಗೆತ್ತಿಕೊಂಡಾಗ ತೊಡಕುಗಳು ಬರುವುದು ಸಹಜ ಆದರೆ ಅವುಗಳನ್ನು ಪರಿಹರಿಸಿಕೊಂಡು ಪ್ರಗತಿ ಸಾಽಸಬೇಕು ಎಂದರು.
ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಎಚ್೧ಎನ್೧ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಕೆಲವು ಆಸ್ಪತ್ರೆಗಳಲ್ಲಿ ವೈದ್ಯಾಽಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ತೋಗುಣಸಿ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯರಿಗೆ ಮೂರು ಕಡೆ ಜವಾಬ್ದಾರಿ ನೀಡಿರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಅಗತ್ಯವಿರುವ ಕಡೆ ವೈದ್ಯರನ್ನು ನೇಮಕ ಮಾಡಲು ಸೂಚಿಸಿದರು.
ಪ್ರಸಕ್ತ ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಸುಮಾರು ೫೦ ಸಾವಿರ ಹೆಕ್ಟೆರ್ ಬೆಳೆ ಹಾನಿಯಾಗಿದ್ದು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಈ ವರ್ಷ ೭೫ ಸಾವಿರ ರೈತರನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರವನ್ನು ವಿಸ್ತರಿಸುವುದರ ಜೊತೆಗೆ ರೈತರ ಉತ್ಪನ್ನಗಳ ಸಂಗ್ರಹಣೆಗೆ ಕೋಲ್ಡ್ ಸ್ಟೋರೇಜ್ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಕೈಗಾರಿಕಾ ಇಲಾಖೆಯ ಸಹಾಯಧನದ ಮೂಲಕ ಹೆಚ್ಚಿನ ಘಟಕಗಳನ್ನು ನಿರ್ಮಿಸಲು ಮುಂದಾಗಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ಪ್ರಮಾಣ ಹೆಚ್ಚಿಸುವ ಹಾಗೂ ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು.
ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಶಾಶ್ವತ ನೀರಿನ ಮೂಲಗಳನ್ನು ಗುರುತಿಸಿ, ಯೋಜನೆ ರೂಪಿಸುವಂತೆ ತಿಳಿಸಿದರು. ಇದೇ ವೇಳೆ ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಕಾಮಗಾರಿ ಕುರಿತು ಚರ್ಚಿಸಲಾಯಿತು. ಲೋಕಾಪೂರದವರೆಗೆ ಕಾಮಗಾರಿ ಪೂರ್ಣಗೊಂಡಿದ್ದು, ಲೋಕಾಪೂರದಿಂದ ಯಾದವಾಡವರೆಗೆ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಽಕಾರಿಗಳು ಮಾಹಿತಿ ನೀಡಿದರು. ತೊಂದರೆಗಳನ್ನು ಪರಿಹರಿಸಿಕೊಂಡು ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು.
ಸಭೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ, ಉಪ ಅರಣ್ಯ ಸಂರಕ್ಷಣಾಽಕಾರಿ ಸ್ವಪ್ನಿಲ್ ಅಹೀರೆ, ಜಿಪಂ ಮುಖ್ಯ ಯೋಜನಾಽಕಾರಿ ಅಲ್ಲಪಮಪ್ರಭು ಅಲ್ಲಾಪೂರ, ಮುಖ್ಯ ಲೆಕ್ಕಾಽಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಽಕಾರಿಗಳು ಉಪಸ್ಥಿತರಿದ್ದರು.