ಬಾಗಲಕೋಟೆ ನಗರದ ಬಿವಿವಿ ಸಂಘ ನೂತನ ಸಭಾಭವನದಲ್ಲಿ ಬುಧವಾರ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜನೆಯಲ್ಲಿ ಹಮ್ಮಿಕೊಂಡಿದ್ದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ , ಕ್ರೀಡಾ, ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರಂಭ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್.ದೇಶಪಾಂಡೆ ಉದ್ಘಾಟಿಸಿದರು. ಸಾಂಸ್ಕೃತಿಕ ವಿಭಾಗದ ಸಂಯೋಜಕ ಎಸ್.ಎಸ್.ಬಡಿಗೇರ, ಡಾ.ಎಸ್.ಎಂ.ಸAಗಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೇಂಜರ್ ಲೀಡರ್ ವಿ.ಎಂ. ಸತ್ತಿಗೇರಿ ಉಪಸ್ಥಿತರಿದ್ದರು.
ಬಾಗಲಕೋಟೆ: ಮಹಿಳೆಯರಿಗೆ ಗೌರವ ನೀಡುವುದು ಭಾರತೀಯ ಸಂಸ್ಕೃತಿಯ ಮೂಲ ಮೌಲ್ಯವಾಗಿದೆ. ಮಹಿಳೆಯರ ಸಬಲೀಕರಣ ಹಾಗೂ ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಗೆ ಮೌಲ್ಯಾಧಾರಿತ ಶಿಕ್ಷಣ ಅತ್ಯಗತ್ಯ ಎಂದು ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್.ದೇಶಪಾಂಡೆ ಹೇಳಿದರು.
ನಗರದ ಬಿವಿವಿ ಸಂಘ ನೂತನ ಸಭಾಭವನದಲ್ಲಿ ಬುಧವಾರ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜನೆಯಲ್ಲಿ ಹಮ್ಮಿಕೊಂಡಿದ್ದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ , ಕ್ರೀಡಾ, ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯವು ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶೈಕ್ಷಣಿಕ ವಾತಾವರಣವನ್ನು ಒದಗಿಸುತ್ತಿದೆ. ವಿದ್ಯಾರ್ಥಿನಿಯರು ಕುಟುಂಬದ ಸವಾಲುಗಳನ್ನು ಮೀರಿ ಕಾಲೇಜಿನ ಶಿಸ್ತು, ಸಂಸ್ಕಾರ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯೆ ಎಸ್.ಜೆ.ಒಡೆಯರ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿನಿಯೂ ತನ್ನಲ್ಲಿರುವ ಸಾಮರ್ಥ್ಯ ಗುರುತಿಸಿಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ, ಮೌಲ್ಯಾಧಾರಿತ ಶಿಕ್ಷಣದ ಮೂಲಕ ಸಮಾಜಮುಖಿ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಜೀವನದಲ್ಲಿ ಯಶಸ್ಸು ಸಾಸಬೇಕು ಎಂದು ತಿಳಿಸಿದರು.
ಸಾಂಸ್ಕೃತಿಕ ವಿಭಾಗದ ಸಂಯೋಜಕ ಎಸ್.ಎಸ್.ಬಡಿಗೇರ, ಡಾ.ಎಸ್.ಎಂ.ಸAಗಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೇಂಜರ್ ಲೀಡರ್ ವಿ.ಎಂ. ಸತ್ತಿಗೇರಿ ಉಪಸ್ಥಿತರಿದ್ದರು. ಅನಿತಾ ಹಾಗೂ ಸಂಗಡಿಗರು ಮಹಿಳಾ ಗೀತೆ ಪ್ರಸ್ತುತಪಡಿಸಿದರು. ಪಿ.ಕೆ.ಚೌಗೂಲಾ ಸ್ವಾಗತಿಸಿದರು. ಡಾ.ಎಂ.ವಿ.ಬಾಜಪ್ಪನವರ ಪರಿಚಯಿಸಿದರು. ಶಾವಕ್ಕ ಹೊರಕೇರಿ ವಂದಿಸಿದರು. ಎಸ್.ಎಸ್.ಮುರಗೋಡ ನಿರೂಪಿಸಿದರು