ಮುಧೋಳ ತಾಲೂಕಿನ ಮುದ್ದಾಪುರದ ಜೆ.ಕೆ.ಸಿಮೆಂಟ್ ಸಂಸ್ಥೆಯಿAದ ಪರಿಸರ ಹಾನಿಯಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದರು ರೈತರು ಮತ್ತು ರೈತ ಮಹಿಳೆಯರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಮುದ್ದಾಪುರದಲ್ಲಿರುವ ಜಿ.ಕೆ. ಸಿಮೆಂಟ್ ವರ್ಕ್್ಸ ಸಂಸ್ಥೆಯು ಪರ್ಯಾಯ ಇಂಧನ ಮತ್ತು ಕಚ್ಚಾವಸ್ತುಗಳ ಯೋಜನೆಯಡಿ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯ ವಸ್ತುಗಳನ್ನು ಇಂಧನವಾಗಿ ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಹಾಗೂ ಕಾರ್ಖಾನೆ ವಿಸ್ತರಣೆ ವಿರೋಽಸಿ ರೈತರು ಪ್ರತಿಭಟನೆ ನಡೆಸಿದರು.
ನವನಗರದ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದ ರೈತರು ಜಿಲ್ಲಾಽಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸಿಮೆಂಟ್ ಕಾರ್ಖಾನೆಯಲ್ಲಿ ತ್ಯಾಜ್ಯ ವಸ್ತುಗಳನ್ನು ಸುಡುವುದರಿಂದ ಹೊರಸೂಸುವ ಹೊಗೆ ಮತ್ತು ಮಾಲಿನ್ಯಕಾರಕ ರಾಸಾಯನಿಕಗಳು ಸುತ್ತಮುತ್ತಲ ಪರಿಸರ, ಕೃಷಿ ಬೆಳೆ, ತೋಟಗಾರಿಕೆ ಬೆಳೆ, ಗ್ರಾಮಸ್ಥರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.
ನಿರಂತರವಾಗಿ ಹೆಚ್ಚಾಗುತ್ತಿರುವ ಪರಿಸರ ಮಾಲಿನ್ಯದಿಂದಾಗಿ ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕದ ಮೂಡಿಸಿದೆ. ಅನಽಕೃತ ಗಣಿಗಾರಿಕೆ, ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ದುರ್ವಾಸನೆ ವಿರುದ್ಧ ಕಳೆದ ೧೨ ದಿನಗಳಿಂದ ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಈಗಾಗಲೇ ಕಾರ್ಖಾನೆಯಿಂದ ಹಾನಿಯಾದ ಬೆಳೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಧರಣಿಯ ಕೊನೆಯ ದಿನದಂದು ನಡೆದ ಸಂಧಾನ ಸಭೆಯಲ್ಲಿ ಒಂದು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಹಾಗೂ ಸಂಬAಧಪಟ್ಟ ಅಽಕಾರಿಗಳು ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ಶಿಸ್ತುಕ್ರಮ ಕೈಗೊಂಡಿಲ್ಲ ಎಂದು ಮುಖಂಡರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಘಟಕದ ಅನುಮತಿ/ಪರವಾನಗಿಯನ್ನು ಮರುಪರಿಶೀಲಿಸಬೇಕು. ತಕ್ಷಣವೇ ಕಟ್ಟುನಿಟ್ಟಿನ ಕಾನೂನುಬದ್ಧ ಕ್ರಮ ಜರುಗಿಸಬೇಕೆಂದು ರೈತರು ತಮ್ಮ ಬೇಡಿಕೆಯನ್ನು ಇಟ್ಟಿದ್ದಾರೆ.
ಕಳೆದ ೨೦ ವರ್ಷಗಳಿಂದ ಕಾರ್ಖಾನೆಯಿಂದ ಸಾಕಷ್ಟು ತೊಂದರೆಗಳು ಉಂಟಾಗಿದ್ದು, ಅದನ್ನು ಗಮನ ಹರಿಸುವಲ್ಲಿ ಸರ್ಕಾರವು ವಿಫಲವಾಗಿದ್ದು, ಈ ನಿಟ್ಟಿನಲ್ಲಿ ಬೆಳೆ, ನೀರಿನ ಮಾಲಿನ್ಯ ಹಾಗೂ ವಾಯು ಮಾಲಿನ್ಯ ಹದಗೆಟ್ಟಿದ್ದು ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತಿದೆ. ಇಲ್ಲಿಯ ರೈತರು ಗುಳೆ ಹೊರಟ್ಟಿದ್ದಾರೆ. ಕಾರ್ಖಾನೆಯಿಂದ ೧೦ ಕ್ಕೂ ಹೆಚ್ಚು ಗ್ರಾಮಗಳು ತೊಂದರೆಯಲ್ಲಿ ಇವೆ ಎಂದು ಆರೋಪಿಸಿದರು.
ಕಾರ್ಖಾನೆಯಿಂದಾಗಿ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ವಾಯು ಮಾಲಿನ್ಯ, ನೀರು ಮಾಲಿನ್ಯದಿಂದ ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ಇದರಿಂದ ನಮ್ಮ ಗ್ರಾಮಗಳ ಯುವಕರಿಗೆ ಕನ್ಯಾ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.