ಬಾಗಲಕೋಟೆ ತಾಲೂಕಿನ ಕಿರಸೂರ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿದರು. ಶಾಸಕ ಜೆ.ಟಿ. ಪಾಟೀಲ, ಗೌತಮ ಪಾಟೀಲ, ವೆಂಕಟೇಶ ಜಂಬಗಿ ಇತರರಿದ್ದರು.
- ಸಚಿವ ಆರ್.ಬಿ. ತಿಮ್ಮಾಪುರ ಹೇಳಿಕೆ
- ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಗಮನಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು
- ಪಂಚ ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳ ಬದುಕಿಗೆ ಆಸರೆಯಾಗಿವೆ
ಬಾಗಲಕೋಟೆ: ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಗಮನಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ತಾಲೂಕಿನ ಕಿರಸೂರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳ ಬದುಕಿಗೆ ಆಸರೆಯಾಗಿವೆ. ಕಾಂಗ್ರೆಸ್ ಪಕ್ಷ ಬಡವರ, ಶೋಷಿತರ ಪರವಾಗಿದೆ. ನಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ವಿನಂತಿಸಿದರು.
ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ದಿ. ಎಚ್.ವೈ. ಮೇಟಿ ಅವರ ಅಭಿವೃದ್ಧಿ ಕಾರ್ಯಗಳು ನಮ್ಮ ಪಕ್ಷದ ಅಭ್ಯರ್ಥಿಗೆ ಶ್ರೀರಕ್ಷೆ ಆಗಲಿವೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್‌ಗೆ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲರೂ ಉಮೇಶ ಮೇಟಿ ಅವರ ಕೈ ಬಲಪಡಿಸಬೇಕು ಎಂದರು.
ಗೌತಮ ಪಾಟೀಲ, ವೆಂಕಟೇಶ ಜಂಬಗಿ, ಗ್ರಾಮದ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.