ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಸೋಮವಾರ ಪ್ರಥಮ ಅಽವೇಶನದ ಇಲಾಖಾ ಪರೀಕ್ಷೆಗಳ ಪೂರ್ವ ಸಿದ್ಧತಾ ಸಭೆ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಬಾಗಲಕೋಟೆ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜುಲೈ ೧೭ ರಿಂದ ೧೯ ವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಪ್ರಥಮ ಅಽವೇಶನದ ಇಲಾಖಾ ಪರೀಕ್ಷೆಗಳನ್ನು ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸಲು ಅಗತ್ಯವಿರುವ ಎಲ್ಲ ಪೂರ್ವಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜರುಗಿದ ಪ್ರಥಮ ಅಽವೇಶನದ ಇಲಾಖಾ ಪರೀಕ್ಷೆ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಕುಡಿಯುವ ನೀರು, ವಿದ್ಯುತ್, ಶೌಚಾಲಯ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಮುಂಚಿತವಾಗಿ ಪರಿಶೀಲಿಸಿ ಯಾವುದೇ ತೊಂದರೆ ಉಂಟಾಗದAತೆ ಕ್ರಮವಹಿಸಬೇಕು ಎಂದರು.
ಪರೀಕ್ಷೆಗಳು ಸಂಪೂರ್ಣ ಪಾರದರ್ಶಕ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಯಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಿ, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಪರೀಕ್ಷಾ ಸಿಬ್ಬಂದಿ ಸಮಯಕ್ಕೆ ಹಾಜರಾಗಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಇಲಕಲ್ಲ ಡಯಟ್ ಪ್ರಾಚಾರ್ಯ ಸಲೀಂ ಪಾಶಾ ಅವರು ಪರೀಕ್ಷೆ ಸಿದ್ದತೆ ಕುರಿತು ವಿವರವಾಗಿ ಸಭೆಗೆ ತಿಳಿಸಿದರು. ಪರೀಕ್ಷೆಗಳು ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಯಲಿದ್ದು, ಜುಲೈ ೧೭ ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೧೨ ವರೆಗೆ ಅಕೌಂಟ್ಸ್ ಲೋಯರ್, ಮಧ್ಯಾಹ್ನ ೨ ರಿಂದ ಸಂಜೆ ೪ ವರೆಗೆ ಜನರಲ್ ಭಾಗ-೨, ಜು. ೧೮ ರಂದು ಬೆಳಗ್ಗೆ ೧೦ ರಿಂದ ೧೨ ವರೆಗೆ ಅಕೌಂಟ್ಸ್ ಹೈಯರ್ ಪತ್ರಿಕೆ-೧, ಮಧ್ಯಾಹ್ನ ೨ ರಿಂದ ೪ ವರೆಗೆ ಅಕೌಂಟ್ಸ್ ಹೈಯರ್ ಪತ್ರಿಕೆ-೨, ಜು. ೧೯ ರಂದು ಬೆಳಗ್ಗೆ ೧೦ ರಿಂದ ೧೨ ವರೆಗೆ ಜನರಲ್ ಲಾ ಭಾಗ-೧ ಪತ್ರಿಕೆ-೧, ಮಧ್ಯಾಹ್ನ ೨ ರಿಂದ ೪ ವರೆಗೆ ಜನರಲ್ ಭಾಗ-೧ ಪತ್ರಿಕೆ-೨ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹೇಶಕುಮಾರ ಮಾಲಗತ್ತಿ, ತಹಶೀಲ್ದಾರ ವಾಸುದೇವ ಸ್ವಾಮಿ, ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕ ಶರಣಬಸಪ್ಪ ಕುಂಬಾರ ಸೇರಿದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಮಾರ್ಗಾಽಕಾರಿಗಳು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.