ಜಮಖಂಡಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸಿ ಶ್ವೇತಾ ಬೀಡಿಕರ ಮಾತನಾಡಿದರು. ತಹಸೀಲ್ದಾರ್ ಅನಿಲ ಬಡಿಗೆರ ಇದ್ದರು. 
ಬಾಗಲಕೋಟೆ

34 ಸಾವಿರಕ್ಕೂ ಹೆಚ್ಚು ಮತದಾರರ ಹೆಸರು ಡಿಲಟ್

ಪ್ರಮುಖ ಮುಖ್ಯಾಂಶಗಳು

  • ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮಾಹಿತಿ
  • 1,96,006 ಮತದಾರರು ಎಸ್‌ಐಆರ್ ಅರ್ಜಿ ಭರ್ತಿ
ಜಮಖಂಡಿ:

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ವಿಧಾನಸಭಾ ಕ್ಷೇತ್ರದ 34 ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳು ಪಟ್ಟಿಯಿಂದ ಡಿಲಟ್ ಆಗಬಹುದು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳಿಸಿದ್ದಾರೆ.

ತಾಲೂಕುನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,30,006 ಮತದಾರರಿದ್ದು, ಈ ಪೈಕಿ 1,96,006 ಮತದಾರರು ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಜಿಗಳನ್ನು ಭರ್ತಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಮತದಾರರ ಪಟ್ಟಿಯ ಪರಿಶೀಲನೆ ವೇಳೆ 7,446 ಮತದಾರರು ಮೃತಪಟ್ಟಿದ್ದಾರೆ. 22,611 ಮಂದಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಉದ್ಯೋಗ, ಮದುವೆ ಸೇರಿ ವಿವಿಧ ಕಾರಣಗಳಿಂದ 2,199 ಜನ ಬೇರೆ ಊರುಗಳಿಗೆ ತೆರಳಿರುವುದು ಪತ್ತೆಯಾಗಿದೆ. ಮತ್ತೊಂದೆಡೆ 2286 ಮತದಾರರ ವಿವರಗಳು ಲಭ್ಯ ಇಲ್ಲ ಎಂದು ತಿಳಿಸಿದರು.
ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಈವರೆಗೆ 432 ಮಂದಿ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ ಎಂದು ಅವರು ಹೇಳಿದರು.
ತಹಸೀಲ್ದಾರ್ ಅನಿಲ ಬಡಿಗೆರ ಇದ್ದರು.