ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯಲ್ಲಿ ಗುರುವಾರ ರೋಗಿಗಳಿಗೆ ಉಚಿತವಾಗಿ ಶ್ರವಣ ಸಾಧನಗಳನ್ನು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ವಿತರಿಸಿದರು. ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ, ಪ್ರಾಚಾರ್ಯೆ ಡಾ.ಭುವನೇಶ್ವರಿ ಯಳಮಲಿ, ಶ್ರೀರಾಮ ಕೋರಾ ಇದ್ದರು.
ಬಾಗಲಕೋಟೆ: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಿ ಆ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ಅವಶ್ಯಕವಾಗಿದ್ದು, ಈ ದಿಸೆಯಲ್ಲಿ ವಿಕಲಚೇತರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವುದು ಅಗತ್ಯವಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯಲ್ಲಿ ಗುರುವಾರ ರೋಗಿಗಳಿಗೆ ಉಚಿತ ಶ್ರವಣ ಸಾಧನಗಳನ್ನು ವಿತರಿಸಿ ಮಾತನಾಡಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಅನೇಕ ಆರೋಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಡಿಪ್ ಯೋಜನೆಯಡಿ ರೋಗಿಗಳಿಗೆ ಶ್ರವಣ ಸಾಧನಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಒಟ್ಟು ೩೨ ಫಲಾನುಭವಿಗಳಿಗೆ ೬೪ ಶ್ರವಣ ಸಾಧನಗಳನ್ನು ವಿತರಿಸಿದ್ದೇವೆ. ಒಟ್ಟಾರೆ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಕಾರ್ಯಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಕುಮಾರೇಶ್ವರ ಆಸ್ಪತ್ರೆಯ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ, ಮೆಡಿಕಲ್ ಕಾಲೇಜಿನ ಪ್ರಾಚಾರ್ಯೆ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಽÃಕ್ಷಕ ಡಾ.ಶ್ರೀರಾಮ ಕೋರಾ, ಉಪಪ್ರಾಚಾರ್ಯ ಡಾ.ಸಿ.ಎಸ್.ಹಿರೇಮಠ, ಬಿವಿವಿಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯ ಪ್ರಾಚಾರ್ಯೆ ಡಾ.ಶ್ರೀವಿದ್ಯಾ ಮತ್ತಿತರರು ಇದ್ದರು.