ತೇರದಾಳ ತಾಲೂಕಿನ ಮುಳುಗಡೆ ಗ್ರಾಮವಾದ ತಮದಡ್ಡಿಗೆ ಜಿ.ಪಂ. ಸಿಇಒ ಗಜಾನನ ಬಾಲೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಗ್ರಾಮಸ್ಥರು ಇದ್ದರು.
- ಗ್ರಾಮಸ್ಥರ ಅಳಲು ಆಲಿಸಿದ ಜಿಪಂ ಸಿಇಒ ಗಜಾನನ ಬಾಲೆ
- ಮುಳುಗಡೆ ಘೋಷಣೆಯಾಗಿ ಎರಡು ದಶಕ
- ಮೂಲ ಸೌಕರ್ಯ, ಕುಡಿಯುವ ನೀರಿನ ಯೋಜನೆ ಪರಿಶೀಲನೆ
ತಾಲೂಕಿನ ಮುಳುಗಡೆ ಪೀಡಿತ ಗ್ರಾಮವಾದ ತಮದಡ್ಡಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಗಜಾನನ ಬಾಲೆ ಅವರು ಶನಿವಾರ ಭೇಟಿ ನೀಡಿ, ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲ ಸೌಲಭ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.
ಬಳಿಕ ಹಳಿಂಗಳಿ ಹಾಗೂ ಹನಗಂಡಿ ಗ್ರಾಮಗಳಿಗೂ ಭೇಟಿ ನೀಡಿ ಗ್ರಾಮ ಪಂಚಾಯಿತಿ ಹಾಗೂ ಕುಡಿಯುವ ನೀರಿನ ಯೋಜನೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ತಮದಡ್ಡಿಯಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಕಾರ್ಯನಿರ್ವಹಣೆ ಹಾಗೂ ಸರ್ಕಾರಿ ಶಾಲೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ವೀಕ್ಷಿಸಿದ ಸಿಇಒ ಅವರಿಗೆ ಆರ್.ಸಿ. ಕೇಂದ್ರ, ಸರಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಮುಳುಗಡೆ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರದ ಬೇಡಿಕೆ ಸೇರಿ ಹಲವು ಬೇಡಿಕೆಗಳ ಮನವಿ ಸಲ್ಲಿಸಿದ ಗ್ರಾಮಸ್ಥರು, ಮುಳುಗಡೆ ಘೋಷಣೆಯಾಗಿ ಎರಡು ದಶಕಗಳಾದರೂ ಪುನರ್ವಸತಿ ಕೇಂದ್ರ ನಿರ್ಮಾಣವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಹೈಕೋರ್ಟ್ನಲ್ಲಿ ಪ್ರಕರಣ ಬಾಕಿಯಿದೆ ಎಂಬ ಕಾರಣದಿಂದ ಪುನರ್ವಸತಿ ಕಾರ್ಯ ಸ್ಥಗಿತಗೊಂಡಿದ್ದು, ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಗ್ರಾಮಸ್ಥರು ದೂರಿದರು. 2012ರಲ್ಲಿ ನೀಡಿದ ಪರಿಹಾರ ಬಳಿಕ ಎರಡು ಬಾರಿ ಪ್ರವಾಹ ಎದುರಿಸಿದ್ದು, ಆರ್ಥಿಕ ಸಂಕಷ್ಟದಿಂದ ಸಾಲ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಎಂದು ಪ್ರಶ್ನಿಸಿ, ಸದರಿ ಮಾಹಿತಿಯನ್ನು ಕೂಡ ಅಧಿಕಾರಿಗಳಿಂದ ಪಡೆದುಕೊಂಡರು.
ಹನಗಂಡಿ ಗ್ರಾಮದಲ್ಲಿರುವ ಮುರಾರ್ಜಿ ವಸತಿ ಶಾಲೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗೂ ಭೇಟಿ ನೀಡಿದ ಅವರು ಅಲ್ಲಿನ ಆಡಳಿತಾತ್ಮಕ ವ್ಯವಸ್ಥೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ, ಸಹಾಯಕ ನಿರ್ದೇಶಕ ಬಸವರಾಜ ಮುನ್ನೋಳ್ಳಿ, ಪಿಡಿಒ ಪ್ರಕಾಶ ಕನ್ನೊಳ್ಳಿ, ನೀರಾವರಿ ಇಲಾಖೆ, ಆರ್‌ಆಂಡ್‌ಆರ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಸ್ತುತ ಮುಳುಗಡೆ ಗ್ರಾಮಗಳಲ್ಲಿ ಪುನರ್ವಸತಿ ಕೇಂದ್ರ ಅಭಿವೃದ್ಧಿಗಿಂತ ಸಂತ್ರಸ್ತರಿಗೆ ಎಕರೆಗೆ ನಿಗದಿತ ಪರಿಹಾರ ಮೊತ್ತ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಆರ್‌ಆಂಡ್‌ಆರ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ತಮದಡ್ಡಿ ಪುನರ್ವಸತಿ ಕೇಂದ್ರದ ಪ್ರಕರಣ ಹೈಕೋರ್ಟ್ನಲ್ಲಿ ಇರುವುದರಿಂದ ಹೆಚ್ಚಿನ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
— | ಗಜಾನನ ಬಾಲೆ, ಸಿಇಒ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ