ಬಾಗಲಕೋಟೆಯ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ರಾಜ್ಯೋತ್ಸವ ಹಾಗೂ ಟಿಪ್ಪು ಜಯಂತಿ ಜನಜಾಗೃತಿ ಸಮಾವೇಶದ ಬಗ್ಗೆ ಟಿಪ್ಪು ಸುಲ್ತಾನ್ ಅಭಿಮಾನಿಗಳ ವೇದಿಕೆಯ ಪ್ರ. ಕಾರ್ಯದರ್ಶಿ ಮಹಮ್ಮದ್ ಯಾಸೀನ್ ನದಾಫ್ ವಿವರಿಸಿದರು. ಅಮರ ಪುಣೇಕರ, ಅಬ್ದುಲ್ ಗಾರ ಕೊರ್ತಿ ಇತರರಿದ್ದರು. 
ಬಾಗಲಕೋಟೆ

ಟಿಪ್ಪು ಜಯಂತಿ ಜನಜಾಗತಿ ಸಮಾವೇಶ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಯಾಸೀನ ನದಾಫ್ ಹೇಳಿಕೆ
  • ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ
  • ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಚಿವ ಸತೀಶ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ
ಬಾಗಲಕೋಟೆ : ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ, ಬಾಗಲಕೋಟೆ ಜಿಲ್ಲಾ ಘಟಕಗಳ ಆಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಮತ್ತು ಹಜರತ್ ಟಿಪ್ಪು ಸುಲ್ತಾನರ 275ನೇ ಜಯಂತಿ ಅಂಗವಾಗಿ ನ. 20ರಂದು ನವನಗರದ ಕಲಾಭವನದಲ್ಲಿ ಜನಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಯಾಸೀನ ನದಾಫ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಚಿವ ಸತೀಶ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರಿ ಸಮಿವುಲ್ಲಾ ಖಾದ್ರಿ, ಾದರ್ ಡಾ. ್ರೇಡಿ ಎ. ರಾಜ್ ಹಾಗೂ ಡಾ. ಬಸವಲಿಂಗ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಮತ್ತು ಸಚಿವ ಸಂತೋಷ ಲಾಡ್ ಜ್ಯೋತಿ ಬೆಳಗಿಸಲಿದ್ದಾರೆ. ಸಚಿವ ಶಿವರಾಜ ತಂಗಡಗಿ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಪ್ರಾಸ್ತಾವಿಕ ನುಡಿಯಲಿದ್ದಾರೆ ಎಂದು ತಿಳಿಸಿದರು.
ಉಸ್ಮಾನಗಣಿ ಹುಮ್ನಾಬಾದ್ ಹಾಗೂ ನಜ್ಮಾನಜೀರ ಚಿಕ್ಕನೇರಳೆ ಮುಖ್ಯ ಭಾಷಣ ಮಾಡಲಿದ್ದಾರೆ. ಮಾಜಿ ಸಚಿವ ಎಸ್.ಆರ್. ಪಾಟೀಲ, ಶಾಸಕ ಜೆ.ಟಿ. ಪಾಟೀಲ, ಡಾ. ಟಿಪ್ಪು ಖಾಸಿಂ ಅಲಿ ಹಾಗೂ ಮಾಜಿ ಸಚಿವ ಅಜಯಕುಮಾರ ಸರನಾಯಕ ಇರುವರು. ಜಿಲ್ಲಾ ಅಧ್ಯಕ್ಷ ಅಮರ ಪುಣೇಕರ ಅಧ್ಯಕ್ಷತೆ ವಹಿಸಲಿದ್ದಾರೆ. ಅಮರ ಪುಣೇಕರ, ಅಬ್ದುಲ್ ಗಾರ ಕೊರ್ತಿ, ಜಾವೀದ್ ಮಿಯಾಂದಾರ, ಮೊಹಮ್ಮದ್ ಯಾಸೀನಾ ಮಿರ್ಜಿ ಸೇರಿ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.