ಬಾಗಲಕೋಟೆ ಉಪ ಚುನಾವಣೆ ಮತ ಎಣಿಕೆಗಾಗಿ ಮಾಡಿಕೊಂಡಿರುವ ಸಿದ್ಧತೆ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾಽಕಾರಿಯೂ ಆಗಿರುವ ಜಿಲ್ಲಾಽಕಾರಿ ಸಂಗಪ್ಪ ಮಾಹಿತಿ ನೀಡಿದರು. ಎಸ್ಪಿ ಸಿದ್ಧಾರ್ಥ ಗೋಯಲ್, ಎಡಿಸಿ ಅಶೋಕ ತೇಲಿ, ಎಸಿ ಸಂತೋಷ ಜಗಲಾಸರ್ ಇದ್ದರು. 
ಬಾಗಲಕೋಟೆ

ನಾಳೆ ಮತ ಎಣಿಕೆಗೆ ತೋವಿವಿ ಸಂಪೂರ್ಣ ಸಜ್ಜು

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಸಂಬAಽಸಿದAತೆ ಮೇ ೪ ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಗ್ಗೆ ೮ ರಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗೆ ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಎಣಿಕೆಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಬೆಳಗ್ಗೆ ೮ ಗಂಟೆಗೆ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರುಗಳು ಅಂದು ಬೆಳಗ್ಗೆ ೭ ಗಂಟೆಗೆ ಹಾಜರಿರಲು ತಿಳಿಸಲಾಗಿದೆ. ಭದ್ರತಾ ಕೊಠಡಿಯನ್ನು ಬೆಳಗ್ಗೆ ೭ ಗಂಟೆಗೆ ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ, ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುತ್ತಿದೆ ಎಂದರು.
ಇವಿಎA ಮತ ಎಣಿಕೆ ಕಾರ್ಯಕ್ಕಾಗಿ ನೆಲ ಮಹಡಿಯ ರೂನಂ.೪ ರಲ್ಲಿ ೧೪ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತ ಪತ್ರಗಳ ಎಣಿಕೆಗಾಗಿ ನೆಲ ಮಹಡಿಯ ೯ರ ಕೊಠಡಿಯಲ್ಲಿ ಒಂದು ಟೇಬಲ್ ಹಾಗೂ ಇಟಿಪಿಬಿಎಸ್ ಸ್ಕ್ಯಾನಿಂಗ್‌ಕ್ಕಾಗಿ ಕೊಠಡಿ ಸಂ.೯ ರಲ್ಲಿ ಒಂದು ಟೇಬಲ್‌ಗÀಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ತಲಾ ಒಬ್ಬರು ಎಣಿಕೆ ಮೇಲ್ವಿಚಾರಕ, ಎಣಿಕೆ ಸಹಾಯಕ ಹಾಗೂ ಮೈಕ್ರೋ ಅಬ್ಸರವರ್ ನೇಮಕ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಓರ್ವ ಸಹಾಯಕ ಚುನಾವಣಾಽಕಾರಿಗಳು ಇರುತ್ತಾರೆ ಎಂದು ತಿಳಿಸಿದರು.
ಸೇವಾ ಮತದಾರರಿಂದ ಸ್ವೀಕರಿಸಲ್ಪಡುವ ಅಂಚೆ ಮತಪತ್ರಗಳ ಕ್ಯೂಆರ್ ಕೋಡ್ ಸ್ಕಾö್ಯನಿಂಗ್ ಸಲುವಾಗಿ ಒಂದು ಟೇಬಲ್ ಮಾಡಲಾಗಿದ್ದು, ಓರ್ವ ಸ್ಕಾö್ಯನಿಂಗ್ ಮೇಲ್ವಿಚಾರಕರು, ಓರ್ವ ಅಸಿಸ್ಟಂಟ್ ಹಾಗೂ ಇಬ್ಬರು ಸಹಾಯಕ ಚುನಾವಣಾಽಕಾರಿಗಳನ್ನು ನೇಮಿಸಲಾಗಿದೆ. ಕಾಯ್ದಿಟ್ಟ ಸಿಬ್ಬಂದಿ ಸೇರಿದಂತೆ ಎಣಿಕೆ ಕಾರ್ಯಕ್ಕೆ ಒಟ್ಟು ೬೩ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಸುತ್ತುವಾರು ಮತ ಎಣಿಕೆಯಾದ ವಿವರವನ್ನು ಪಬ್ಲಿಕ್ ಅಡ್ರೇಸ್ ಸಿಸ್ಟಮ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಅಭ್ಯರ್ಥಿ, ಅಭ್ಯರ್ಥಿ ಎಜೆಂಟರಿಗೆ ಮತ ಎಣಿಕೆ ಪೂರ್ವ ದಿಕ್ಕಿನಲ್ಲಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಮತ ಎಣಿಕೆ ಏಜೆಂಟರಿಗೆ ಮುಖ್ಯ ದ್ವಾರದಲ್ಲಿ ಪ್ರವೇಶ ಇರುವುದಿಲ್ಲ. ಸದರಿ ವಾಹನಗಳಿಗೆ ಮುಖ್ಯ ದ್ವಾರದ ೨೦೦ ಮೀಟರ್ ಮುಂಚಿತವಾಗಿ ಇರುವ ಜಿಲ್ಲಾ ಪಶು ಸಂಗೋಪನಾ ಆಸ್ಪತ್ರೆ ಎದುರುಗಡೆ ಹೋಗುವ ರಸ್ತೆ ಮುಖಾಂತರ ಮತ ಎಣಿಕೆ ಕೇಂದ್ರದಿAದ ಸುಮಾರು ೨೦೦ ಮೀಟರ್ ಅಂತರದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮತ ಎಣಿಕೆ ಸಿಬ್ಬಂದಿಗೆ ಹಾಗೂ ಮಾಧ್ಯಮದವರಿಗೆ ಮಾತ್ರ ಮುಖ್ಯ ದ್ವಾರದಿಂದ ಪ್ರವೇಶವಿರುತ್ತದೆ. ಎಣಿಕೆ ಕೇಂದ್ರದಲ್ಲಿ ಫೋನ್
ನಿರ್ಬಂಧ ನಿರ್ಬಂಽಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಽಕಾರಿ ಸಂತೋಷ ಜಗಲಾಸರ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರೆ ಅಽಕಾರಿಗಳು ಉಪಸ್ಥಿತರಿದ್ದರು.