ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಸೋಮವಾರ ಡಿ.ದೇವರಾಜ ಅರಸು ಜನ್ಮದಿನಾಚರಣೆಯ ಪೂರ್ವಭಾವಿ ಸಭೆ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಅಪರ ಜಿಲ್ಲಾಽಕರಿ ಅಶೋಕ ತೇಲಿ, ಇಲಾಖೆ ಅಽಕಾರಿಗಳು ಇದ್ದರು.
ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾವರಣೆಯನ್ನು ಆ. ೨೦ ರಂದು ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಸೂಚಿಸಿದರು.
ಜಿಲ್ಲಾಽಕಾರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆ. ೨೦ ರಂದು ಬೆಳಗ್ಗೆ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ಮೆರವಣಿಗೆ ಮಾರ್ಗವನ್ನು ಸ್ವಚ್ಛಗೊಳಿಸುವಂತೆ ನಗರಸಭೆ ಅಽಕಾರಿಗಳಿಗೆ ಸೂಚಿಸಿ, ವೇದಿಕೆ ಕಾರ್ಯಕ್ರಮ ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಹಮ್ಮಿಕೊಳ್ಳಲು ತಿಳಿಸಿದರು. ಶಿಷ್ಟಾಚಾರದ ಪ್ರಕಾರ ಆಮಂತ್ರ ಪತ್ರಿಕೆ ಮುದ್ರಿಸಲು ನಿರ್ದೇಶನ ನೀಡಿದರು.
ಡಿ.ದೇವರಾಜ ಅರಸು ಅವರ ಜೀವನ ಸಾಧನೆ ಬಗ್ಗೆ ತಿಳಿಸಲು ಓರ್ವ ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಅಚ್ಚುಕಟ್ಟಾಗಿ ಆಯೋಜಿಸಲು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿಗಳಿಗೆ ಸೂಚಿಸಿದರು. ಸಮುದಾಯದವರು, ವಿವಿಧ ಸಂಘಟನೆಗಳ ಪ್ರತಿನಿಽಗಳು ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ತಾಲೂಕಾ ಮಟ್ಟದಲ್ಲಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಬಿಸಿಎಂ ವ್ಯಾಪ್ತಿಯ ವಸತಿ ಶಾಲೆಯ ಮಕ್ಕಳಿಗೆ ಕ್ರೀಡಾ ಸ್ಪರ್ಧೆ, ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಬೇಕು. ೨೦೨೫-೨೬ನೇ ಸಾಲಿನಲ್ಲಿ ಎಸ್ಸಸ್ಸೆಲ್ಸಿ, ಪಿಯುಸಿ, ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಲು ತಿಳಿಸಿದರು. ವಸತಿ ನಿಲಯಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಗೂ ಸನ್ಮಾನಿಸಲು ಜಿಲ್ಲಾಽಕಾರಿಗಳು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಪಂಕಜ ಸೇರಿದಂತೆ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಅಽಕಾರಿಗಳು, ಬಿಸಿಎಂ ಇಲಾಖೆಯ ವ್ಯವಸ್ಥಾಪಕ ದರಗಾರ ಇತರರು ಇದ್ದರು.